ಕನ್ನಡಪ್ರಭ ವಾರ್ತೆ ಬೆಳಗಾವಿ
ಪಿ.ಎಂ.ಉಷಾ ಮೇರು ಅಡಿಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮಹಿಳಾ ಸಬಲೀಕರಣ ಕೋಶ ಮತ್ತು ದೈಹಿಕ ಶಿಕ್ಷಣ ವಿಭಾಗ ಹಾಗೂ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ ಮತ್ತು ಬೆಳಗಾವಿಯ ಯಕ್ಷಿತ್ ಯುವ ಫೌಂಡೇಶನ್‌ಗಳ ಸಹಯೋಗದಲ್ಲಿ ಸೋಮವಾರ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿನಿಯರಿಗೆ ಒಂದು ವಾರದ ಆತ್ಮರಕ್ಷಣಾ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣಾ ತರಬೇತಿಯ ಅಗತ್ಯತೆವಿದೆ. ವಿವಿಧ ರಕ್ಷಣಾ ಮತ್ತು ಸುರಕ್ಷತಾ ತಂತ್ರಗಳನ್ನು ಕಲಿಯುವುದರಿಂದ ತುರ್ತು ಸಂದರ್ಭಗಳಲ್ಲಿ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿನಿಯರಲ್ಲಿ ಆತ್ಮವಿಶ್ವಾಸ, ಜಾಗೃತಿ ಮತ್ತು ತಮ್ಮನ್ನು ತಾವು ಆಪತ್ಕಾಲದಲ್ಲಿ ರಕ್ಷಿಸಿಕೊಳ್ಳುವ ಪರಿಯನ್ನು ಶಿಕ್ಷಣ ಸಂಸ್ಥೆಗಳು, ಸಮಾಜದ ಸಂಘ, ಸಂಸ್ಥೆಗಳು ಕಲ್ಪಿಸಿಕೊಡಬೇಕು. ಈ ನಿಟ್ಟಿನಲ್ಲಿ ಈ ಆತ್ಮರಕ್ಷಣಾ ತರಬೇತಿಯು ಒಂದು ಪ್ರಮುಖ ಹೆಜ್ಜೆಯಾಗಿದೆ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿನಿಯರಲ್ಲಿ ಧೈರ್ಯ ಮತ್ತು ಸ್ವಾವಲಂಬನೆಯನ್ನು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಹೇಳಿದರು.
ವಿದ್ಯಾರ್ಥಿನಿಯರು ಯಾವುದೇ ಸಂದರ್ಭದಲ್ಲಿ ಭಯ ಪಡದೇ ಸಮಾಜದಲ್ಲಿ ಧೈರ್ಯದಿಂದ ಇರಬೇಕು. ಜೊತೆಯಲ್ಲಿ ಯಾರಾದರೂ ಅನುಚಿತವಾಗಿ ವರ್ತಿಸಿದಲ್ಲಿ ಅವರನ್ನು ಗಟ್ಟಿಯಾದ ಧ್ವನಿಯಿಂದ ಪ್ರತಿಭಟಿಸಬೇಕು. ಇಂಥ ಧೈರ್ಯ, ಸ್ಥೈರ್ಯವನ್ನು ಈ ಕಾರ್ಯಾಗಾರದಲ್ಲಿ ಪಡೆದುಕೊಳ್ಳಿ. ಆಗ ಮಾನಸಿಕವಾಗಿ ಕುಗ್ಗಿ ಹೋಗುವುದು ತಪ್ಪುತ್ತದೆ ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.ಮಹಿಳಾ ದಿನಾಚರಣೆ ಪ್ರಯುಕ್ತ ಈ ಕಾರ್ಯಕ್ರಮ ಅರ್ಥಪೂರ್ಣವಾಗಿದೆ. ಮಹಾವಿದ್ಯಾಲಯದ ಎಲ್ಲಾ ವಿದ್ಯಾರ್ಥಿನಿಯರಿಗೆ ಈ ಕಾರ್ಯಕ್ರಮ ತಲುಪಬೇಕು ಎಂದರು.
ರಾಚವಿ ಕ್ರೀಡಾ ವಿಭಾಗದ ಸಹ ಪ್ರಾಧ್ಯಾಪಕ ಡಾ.ಜಗದೀಶ್ ಗಸ್ತಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಡಾ.ಕರುಣಾ ಅಮೃಸ್ಕರ್ ನಿರೂಪಿಸಿದರು. ಮಹಿಳಾ ಸಬಲೀಕರಣದ ಸದಸ್ಯ ಕಾರ್ಯದರ್ಶಿ ಡಾ.ಅಶ್ವಿನಿ ಜಾಮೂನಿ ವಂದಿಸಿದರು. ಡಾ.ಸುಮನಾ ಮುದ್ದಾಪುರ, ಝೂಡೋದಲ್ಲಿ ರಾಜ್ಯ ಏಕಲವ್ಯ ಪ್ರಶಸ್ತಿ ವಿಜೇತೆ ರೋಹಿಣಿ ಪಾಟೀಲ್, ಪದ್ಮಪ್ರಸಾದ ಹೂಲಿ, ಅವಧೂತ.ಪಿ, ವೈಭವ್ ಪಾಟೀಲ್, ಸ್ವಪ್ನಿಲ್ ಪಾಟೀಲ್ ಹಾಗೂ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.