ಮಹಿಳೆಯರು ಸ್ವಾವಲಂಬಿಗಳಾಗಲು ಸ್ವ- ಉದ್ಯೋಗ ತರಬೇತಿ ಅಗತ್ಯ: ಹಾರೋಹಳ್ಳಿ ಡೈರಿ ಅಧ್ಯಕ್ಷ ಸುಧಾಕರ್

KannadaprabhaNewsNetwork |  
Published : Oct 08, 2026, 01:30 AM IST
ಫೋಟೋ: 7 ಹೆಚ್‌ಎಸ್‌ಕೆ 1ಹೊಸಕೋಟೆ ತಾಲೂಕಿನ ಅನಗೊಂಡನಹಳ್ಳಿ ಹೋಬಳಿಯ ಹಾರೋಹಳ್ಳಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಉಚಿತ ಟೈಲರಿಂಗ್ ತರಬೇತಿ ಶಿಬಿರಕ್ಕೆ ಡೈರಿ ಅಧ್ಯಕ್ಷ ಸುಧಾಕರ್ ಸೇರಿದಂತೆ ಹಲವಾರು ಗಣ್ಯರು ಚಾಲನೆ ನೀಡಿದರು. | Kannada Prabha

ಸಾರಾಂಶ

ಟೈಲರಿಂಗ್ ತರಬೇತಿ ಪಡೆದರೆ ಮಹಿಳೆಯರು ಮನೆಯಲ್ಲಿಯೇ ಸ್ವ- ಉದ್ಯೋಗ ಆರಂಭಿಸಿ ಆದಾಯ ಗಳಿಸಬಹುದು. ತರಬೇತಿಯ ನಂತರ ಸ್ವಂತ ಟೈಲರಿಂಗ್ ಘಟಕ ಆರಂಭಿಸುವುದರ ಜೊತೆಗೆ ಇತರರಿಗೂ ಉದ್ಯೋಗ ಕಲ್ಪಿಸುವ ಅವಕಾಶವಿದೆ. ಆದ್ದರಿಂದ ತರಬೇತಿಯನ್ನು ಶ್ರದ್ಧೆಯಿಂದ ಪಡೆದುಕೊಂಡು ಕೌಶಲ್ಯವನ್ನು ಆರ್ಥಿಕ ಚಟುವಟಿಕೆಯಾಗಿ ಪರಿವರ್ತಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ತರಬೇತಿಗೆ ಆಗಮಿಸಿದ್ದ ಮಹಿಳೆಯರು ಮೂರು ತಿಂಗಳ ಅವಧಿಯಲ್ಲಿ ತರಬೇತಿ ಸಮರ್ಪಕವಾಗಿ ಪಡೆದುಕೊಂಡು ತಮ್ಮ ಕುಟುಂಬದ ಆರ್ಥಿಕ ಸ್ಥಿತಿ ಸುಧಾರಿಸಿಕೊಳ್ಳುವ ಸಂಕಲ್ಪ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಹೊಸಕೋಟೆ

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಕೌಶಲ್ಯಾಧಾರಿತ ಸ್ವ- ಉದ್ಯೋಗ ತರಬೇತಿಗಳು ಅತ್ಯಂತ ಸಹಕಾರಿಯಾಗಿದ್ದು, ಇಂಥ ತರಬೇತಿಗಳ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಹಾರೋಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುಧಾಕರ್ ಕರೆ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅನಗೊಂಡನಹಳ್ಳಿ ಹಾರೋಹಳ್ಳಿ ಕಾರ್ಯಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಮೂರು ತಿಂಗಳ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಟೈಲರಿಂಗ್ ತರಬೇತಿ ಪಡೆದರೆ ಮಹಿಳೆಯರು ಮನೆಯಲ್ಲಿಯೇ ಸ್ವ- ಉದ್ಯೋಗ ಆರಂಭಿಸಿ ಆದಾಯ ಗಳಿಸಬಹುದು. ತರಬೇತಿಯ ನಂತರ ಸ್ವಂತ ಟೈಲರಿಂಗ್ ಘಟಕ ಆರಂಭಿಸುವುದರ ಜೊತೆಗೆ ಇತರರಿಗೂ ಉದ್ಯೋಗ ಕಲ್ಪಿಸುವ ಅವಕಾಶವಿದೆ. ಆದ್ದರಿಂದ ತರಬೇತಿಯನ್ನು ಶ್ರದ್ಧೆಯಿಂದ ಪಡೆದುಕೊಂಡು ಕೌಶಲ್ಯವನ್ನು ಆರ್ಥಿಕ ಚಟುವಟಿಕೆಯಾಗಿ ಪರಿವರ್ತಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ತರಬೇತಿಗೆ ಆಗಮಿಸಿದ್ದ ಮಹಿಳೆಯರು ಮೂರು ತಿಂಗಳ ಅವಧಿಯಲ್ಲಿ ತರಬೇತಿ ಸಮರ್ಪಕವಾಗಿ ಪಡೆದುಕೊಂಡು ತಮ್ಮ ಕುಟುಂಬದ ಆರ್ಥಿಕ ಸ್ಥಿತಿ ಸುಧಾರಿಸಿಕೊಳ್ಳುವ ಸಂಕಲ್ಪ ವ್ಯಕ್ತಪಡಿಸಿದರು.

ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಮಾದಲಾಂಬಿಕ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಪ್ರದೇಶದ ಮಹಿಳೆಯರು ಹಾಗೂ ಕುಟುಂಬಗಳ ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಸ್ವಸಹಾಯ ಸಂಘಗಳ ಮೂಲಕ ಉಳಿತಾಯ, ಆಂತರಿಕ ಸಾಲ ವ್ಯವಸ್ಥೆ, ಸ್ವ ಉದ್ಯೋಗಕ್ಕೆ ಉತ್ತೇಜನ, ಕೌಶಲ್ಯಾಭಿವೃದ್ಧಿ ಹಾಗೂ ಆರ್ಥಿಕ ಸಾಕ್ಷರತೆ ಸೇರಿದಂತೆ ಹಲವು ಚಟುವಟಿಕೆಗಳನ್ನು ನಡೆಸುತ್ತಿದೆ. ಮಹಿಳೆಯರಲ್ಲಿ ಆತ್ಮವಿಶ್ವಾಸ ಮತ್ತು ಸ್ವಾವಲಂಬನೆ ಬೆಳೆಸುವ ನಿಟ್ಟಿನಲ್ಲಿ ಟೈಲರಿಂಗ್, ಆಹಾರ ತಯಾರಿಕೆ, ಹೈನುಗಾರಿಕೆ ಸೇರಿದಂತೆ ವಿವಿಧ ವೃತ್ತಿಪರ ತರಬೇತಿಗಳನ್ನು ನೀಡಲಾಗುತ್ತಿದೆ. ಟೈಲರಿಂಗ್ ತರಬೇತಿಯ ಮೂಲಕ ಮಹಿಳೆಯರಿಗೆ ಹೊಲಿಗೆ ಯಂತ್ರದ ಬಳಕೆ, ಬಟ್ಟೆ ಅಳತೆ, ಕತ್ತರಿಸುವಿಕೆ, ವಿವಿಧ ಮಾದರಿಯ ಬಟ್ಟೆ ಹೊಲಿಯುವಿಕೆ ಸೇರಿದಂತೆ ಅಗತ್ಯ ಕೌಶಲ್ಯಗಳನ್ನು ಕಲಿಸಲಾಗುತ್ತದೆ. ಇದರಿಂದ ತರಬೇತಿ ಪೂರ್ಣಗೊಂಡ ಬಳಿಕ ಸ್ಥಳೀಯವಾಗಿಯೇ ಉದ್ಯೋಗ ಅಥವಾ ಸ್ವ ಉದ್ಯೋಗ ಕೈಗೊಳ್ಳಲು ಅನುಕೂಲವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ನಾರಾಯಣಸ್ವಾಮಿ, ಉಪಾಧ್ಯಕ್ಷೆ ಸರೋಜಮ್ಮ, ಟೈಲರಿಂಗ್ ತರಬೇತಿ ಶಿಕ್ಷಕಿ ಅನುಸೂಯ ಹಾಗೂ ಸೇವಾ ಪ್ರತಿನಿಧಿ ಸಂಪಮ್ಮ ಸೇರಿದಂತೆ ಹಲವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಂದ್ರ ಮೋದಿ ಆಡಳಿತ ಕುರಿತು ಬೀದಿ ನಾಟಕ
ಕುರುಹಿನಶೆಟ್ಟಿ ಭಜನಾ ಮಂಡಳಿಯಿಂದ ಭಕ್ತಿಗೀತೆ