ರಾಷ್ಟ್ರೋನ್ನತಿಗೆ ಸ್ವಾವಲಂಬನೆ, ಗ್ರಾಮಾಭಿವೃದ್ಧಿ ಅವಶ್ಯ: ಶಾಸಕ ಬಿ.ಪಿ.ಹರೀಶ್‌

KannadaprabhaNewsNetwork |  
Published : Nov 24, 2025, 02:00 AM IST
23 HRR. 01ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ವತಿಯಿಂದ ಏರ್ಪಾಡಿಸಲಾಗಿದ್ದ ಸಾಮೂಹಿಕ ಸಹಸ್ರ ಬಿಲ್ವಾರ್ಚನೆ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಶಾಸಕ ಬಿ.ಪಿ. ಹರೀಶ್ ಉದ್ಘಾಟಿಸಿ, ಮಾತನಾಡಿದರು. | Kannada Prabha

ಸಾರಾಂಶ

ಸ್ತ್ರೀ ಸ್ವಾವಲಂಬನೆ ಹಾಗೂ ಗ್ರಾಮಾಭಿವೃದ್ಧಿ ಇವು ಸಾಮಾಜಿಕ ಸಬಲೀಕರಣದೊಂದಿಗೆ ರಾಷ್ಟ್ರೋನ್ನತಿಗೂ ಅವಶ್ಯ ಎಂದು ಹರಿಹರ ಕ್ಷೇತ್ರದ ಶಾಸಕ ಬಿ.ಪಿ. ಹರೀಶ್ ಅಭಿಪ್ರಾಯಪಟ್ಟಿದ್ದಾರೆ.

- ಬೆಳ್ಳೂಡಿ ಗ್ರಾಮದಲ್ಲಿ ಸಹಸ್ರ ಬಿಲ್ವಾರ್ಚನೆ ಕಾರ್ಯಕ್ರಮ - - -

ಕನ್ನಡಪ್ರಭ ವಾರ್ತೆ ಹರಿಹರ

ಸ್ತ್ರೀ ಸ್ವಾವಲಂಬನೆ ಹಾಗೂ ಗ್ರಾಮಾಭಿವೃದ್ಧಿ ಇವು ಸಾಮಾಜಿಕ ಸಬಲೀಕರಣದೊಂದಿಗೆ ರಾಷ್ಟ್ರೋನ್ನತಿಗೂ ಅವಶ್ಯ ಎಂದು ಹರಿಹರ ಕ್ಷೇತ್ರದ ಶಾಸಕ ಬಿ.ಪಿ. ಹರೀಶ್ ಅಭಿಪ್ರಾಯಪಟ್ಟರು.

ತಾಲೂಕಿನ ಬೆಳ್ಳೂಡಿ ಗ್ರಾಮದಲ್ಲಿ ಪಟೇಲ್ ಗುರುಬಸಪ್ಪ ಪ್ರೌಢಶಾಲೆ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ವತಿಯಿಂದ ಏರ್ಪಾಡಿಸಲಾಗಿದ್ದ ಸಾಮೂಹಿಕ ಸಹಸ್ರ ಬಿಲ್ವಾರ್ಚನೆ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ, ಅವರು ಮಾತನಾಡಿದರು. ಸರ್ಕಾರದ ಯೋಜನೆಗಳನ್ನು ಸಾಮಾನ್ಯರಿಗೆ ಪ್ರಾಮಾಣಿಕವಾಗಿ ತಲುಪಿಸುವ ಒಳ್ಳೆಯ ಕಾರ್ಯವನ್ನು ಧರ್ಮಸ್ಥಳ ಸಂಸ್ಥೆ ಮಾಡುತ್ತಿದೆ. ಇದಕ್ಕೆ ಕಪ್ಪುಚುಕ್ಕಿ ಇಡಲು ಮುಂದಾದವರು ಈಗ ಪಶ್ಚಾತ್ತಾಪ ಪಡುವಂತಾಗಿದೆ. ಗ್ರಾಮಗಳ ಸಾಮಾನ್ಯ ಮಹಿಳೆಯರಿಗೂ ಪ್ರಾಮಾಣಿಕ ಬ್ಯಾಂಕಿಂಗ್ ವ್ಯವಸ್ಥೆ ಜ್ಞಾನವನ್ನು ಧರ್ಮಸ್ಥಳ ಸಂಸ್ಥೆ ನೀಡಿದೆ ಎಂದರು.

ಹಿರಿಯ ಪತ್ರಕರ್ತ ಡಾ. ಎಚ್.ಬಿ. ಮಂಜುನಾಥ್ ಧಾರ್ಮಿಕ ಪ್ರವಚನ ನೀಡಿ, ಧರ್ಮಸ್ಥಳ ಸಂಸ್ಥೆ ವತಿಯಿಂದ ರಾಜ್ಯದಲ್ಲಿ 6 ಲಕ್ಷಕ್ಕೂ ಹೆಚ್ಚು ಸ್ವಸಹಾಯ ಸಂಘಗಳಿವೆ. 50 ಲಕ್ಷಕ್ಕೂ ಹೆಚ್ಚು ಸದಸ್ಯರಿದ್ದಾರೆ. ಬಡ ಮತ್ತು ಮಧ್ಯಮ ವರ್ಗಗಳ ಬಹುತೇಕ ಮಹಿಳಾ ಸದಸ್ಯರು ಆರ್ಥಿಕ ಸಬಲರಾಗಲು ಇದು ಕಾರಣವಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿ, ಜಿಪಂ ಮಾಜಿ ಅಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ ಮಾತನಾಡಿ, ಭಾರತದ ಆರ್ಥಿಕ ಶಕ್ತಿ ಅಷ್ಟೇ ಅಲ್ಲದೇ, ಕೌಟುಂಬಿಕ ವ್ಯವಸ್ಥೆಯೂ ವಿಶ್ವದಲ್ಲೇ ಭಾರತದಲ್ಲಿ ಗಟ್ಟಿಯಾಗಿದೆ. ಇದಕ್ಕೆ ಜನರಲ್ಲಿನ ಭಕ್ತಿ-ಶ್ರದ್ಧೆ- ನಂಬಿಕೆಗಳು ಕಾರಣವಾಗಿವೆ ಎಂದರು.

ಬಿಜೆಪಿ ಯುವ ಮುಖಂಡ ಚಂದ್ರಶೇಖರ ಪೂಜಾರ್, ಕಾಂಗ್ರೆಸ್ ಯುವ ಮುಖಂಡ ಎನ್.ಎಚ್. ಶ್ರೀನಿವಾಸ ನಂದಿಗಾವಿ, ಟ್ರಸ್ಟ್‌ ಯೋಜನಾಧಿಕಾರಿ ನಂದಿನಿ ಶೇಟ್ ಮಾತನಾಡಿದರು. ಬೆಳ್ಳೂಡಿ ಗ್ರಾಪಂ ಉಪಾಧ್ಯಕ್ಷೆ ಪಾರ್ವತಮ್ಮ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.

ದಾವಣಗೆರೆ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ರವಿಶಂಕರ್, ಶಾಲಾ ಸಲಹಾ ಸಮಿತಿ ಅಧ್ಯಕ್ಷ ಹನುಮಂತ ಗೌಡ, ಭಾನುವಳ್ಳಿ ಗ್ರಾಮದ ಮುಖಂಡ ಶಂಕರೇಗೌಡ, ರಾಮತೀರ್ಥ ಗ್ರಾಮದ ಮುಖಂಡ ಶ್ರೀನಿವಾಸ್ ಮೂರ್ತಿ, ಗ್ರಾಮ ಪಂಚಾಯಿತಿ ಸದಸ್ಯ ಶಿವಣ್ಣ, ಲೋಕೇಶ್, ಸುರೇಶ್ ಆಚಾರ್, ಸುನೀತಮ್ಮ, ಭಾರತಿ, ಗೀತಮ್ಮ, ಶಂಕರಪ್ಪ, ರುದ್ರೇಶ್ ಮುಂತಾದವರು ಗ್ರಾಮ ಪಂಚಾಯಿತಿ ಸದಸ್ಯರುಗಳು, ಪೂಜಾ ಸಮಿತಿಯ ಸದಸ್ಯರುಗಳು, ಒಕ್ಕೂಟಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ದೇವರಾಜ್ ನಿರೂಪಿಸಿ, ಬಿಂದು ಮತ್ತು ತೇಜಸ್ವಿನಿ ಪ್ರಾರ್ಥನೆ ಹಾಡಿದರು. ಉಮೇಶ್ ಸ್ವಾಗತ ಕೋರಿದರು. ವೀರೇಶ್ ಪೂಜಾರ್ ವಂದಿಸಿದರು. ಬಳಿಕ ಮಕ್ಕಳು ನೃತ್ಯ ಪ್ರಸ್ತುತಪಡಿಸಿದರು.

- - -

-23HRR.01:

ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಶಾಸಕ ಬಿ.ಪಿ. ಹರೀಶ್ ಉದ್ಘಾಟಿಸಿದರು.

PREV

Recommended Stories

ಕಾಡಾನೆಗಳ ದಾಳಿಗೆ ನೆಲಸಮವಾದ ಜೋಳದ ಫಸಲು
ವಿಸಿ ನಾಲಾ ರಸ್ತೆ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ..!