ಸ್ವಸಹಾಯ ಸಂಘಗಳಿಂದ ಮಹಿಳೆಯರ ಸ್ವಾವಲಂಬಿ ಬದುಕು

KannadaprabhaNewsNetwork |  
Published : Nov 29, 2024, 01:02 AM IST
ಫೋಟೋ: 28 ಹೆಚ್‌ಎಸ್‌ಕೆ 2 ಮತ್ತು 32: ಹೊಸಕೋಟೆ ತಾಲೂಕಿನ ನೆಲವಾಗಿಲು ಗ್ರಾಮದಲ್ಲಿ ತಾಲೂಕು ಪಂಚಾಯತ್ ವತಿಯಿಂದ ನಿರ್ಮಿಸಲಾದ ಎನ್‌ಆರ್‌ಎಲ್‌ಎಂ ಸಂಜೀವಿನಿ ಮಹಿಳಾ ಸ್ವಸಹಾಯ ಸಂಘಗಳಿಗೆ ಚೆಕ್‌ಗಳನ್ನು ಶಾಸಕ ಶರತ್ ಬಚ್ಚೇಗೌಡ ವಿತರಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ಸ್ವಸಹಾಯ ಸಂಘಗಳ ಮೂಲಕ ಗ್ರಾಮೀಣ ಮಹಿಳೆಯರು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಹೊಸಕೋಟೆ: ಸ್ವಸಹಾಯ ಸಂಘಗಳ ಮೂಲಕ ಗ್ರಾಮೀಣ ಮಹಿಳೆಯರು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ತಾಲೂಕಿನ ನೆಲವಾಗಿಲು ಗ್ರಾಮದಲ್ಲಿ ತಾಪಂ ನಿರ್ಮಿಸಿರುವ ಎನ್‌ಆರ್‌ಎಲ್‌ಎಂ ಸಂಜೀವಿನಿ ಸಮುದಾಯ ಕಟ್ಟಡ ಉದ್ಘಾಟನೆ ಹಾಗೂ ಮಹಿಳಾ ಸ್ವಸಹಾಯ ಸಂಘಗಳಿಗೆ ಚೆಕ್‌ ವಿತರಿಸಿ ಮಾತನಾಡಿದ ಅವರು, ಸಂಜೀವಿನಿ ಯೋಜನೆ ನಿರಂತರವಾಗಿ ಮಹಿಳಾ ಸಬಲೀಕರಣದಲ್ಲಿ ತೊಡಗಿದ್ದು ಮಹಿಳೆಯರನ್ನು ಆರ್ಥಿಕವಾಗಿ ಸದೃಢಗೊಳಿಸಲು ನ್ಯಾಷನಲ್ ರೂರಲ್ ಲೈವ್ಲಿಹುಡ್ ಮಿಷನ್ ಆಜೀವಿಕ ಯೋಜನೆ ರೂಪಿಸಿದೆ. ಕೇಂದ್ರದ ನೆರವಿನೊಂದಿಗೆ ರಾಜ್ಯ ಸರ್ಕಾರ ಸಂಜೀವಿನಿ ಹೆಸರಿನಲ್ಲಿ ಸ್ವಸಹಾಯ ಗುಂಪುಗಳ ಪುನಶ್ಚೇತನಕ್ಕೆ ಮುಂದಾಗಿದೆ. ಸರ್ಕಾರ ನೀಡುವ ಸಾಲವನ್ನು ಮಹಿಳೆಯರು ಸದುಪಯೋಗ ಪಡಿಸಿಕೊಂಡು ಸಾಮಾಜಿಕವಾಗಿ ಆರ್ಥಿಕವಾಗಿ ಸಬಲರಾಗಬೇಕು ಎಂದರು.

ಗ್ರಾಪಂ ಅಧ್ಯಕ್ಷೆ ವಸಂತ ಲೋಕೇಶ್ ಮಾತನಾಡಿ, ಗ್ರಾಮೀಣ ಭಾಗದ ಸಮಗ್ರ ಅಭಿವೃದ್ಧಿಗೆ ಶಾಸಕ ಶರತ್ ಬಚ್ಚೇಗೌಡರ ಮಾರ್ಗದರ್ಶನದಲ್ಲಿ ಪಕ್ಷಾತೀತವಾಗಿ ಶ್ರಮಿಸುತ್ತಿದ್ದು ಮುಂದಿನ ದಿನಗಳಲ್ಲಿ ಆರೋಗ್ಯ, ಶಿಕ್ಷಣ, ಮಹಿಳಾ ಸಬಲೀಕರಣಕ್ಕೆ ಪೂರಕ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.

ತಾಪಂ ಇಒ ಡಾ.ಸಿ.ಎನ್.ನಾರಾಯಣಸ್ವಾಮಿ, ಕೆಪಿಸಿಸಿ ಕಾರ್ಯದರ್ಶಿ ಇಟ್ಟಸಂದ್ರ ಬಿ.ಗೋಪಾಲ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಬಿ.ವಿ.ರಾಜಶೇಖರ್‌ಗೌಡ, ಗ್ರಾಪಂ ಅಧ್ಯಕ್ಷೆ ವಸಂತ ಲೋಕೇಶ್, ತಾಪಂ ಮಾಜಿ ಅಧ್ಯಕ್ಷ ಕೆಂಚೇಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಧರ್ಮೇಶ್, ಗ್ರಾಪಂ ಉಪಾಧ್ಯಕ್ಷ ರವಿ, ಸದಸ್ಯರಾದ ಮಧು, ಸೊಣ್ಣೇಗೌಡ, ಪಿಡಿಒ ಕಾಂತರಾಜ್, ಮುಖಂಡರಾದ ನೆಲವಾಗಿಲು ಭೀರಪ್ಪ, ರಮೇಶ್, ಪವನ್‌ ಇತರರು ಹಾಜರಿದ್ದರು.

ಫೋಟೋ: 28 ಹೆಚ್‌ಎಸ್‌ಕೆ 2 ಮತ್ತು 3

2: ಹೊಸಕೋಟೆ ತಾಲೂಕಿನ ನೆಲವಾಗಿಲು ಗ್ರಾಮದಲ್ಲಿ ತಾಪಂ ನಿರ್ಮಿಸಿರುವ ಎನ್‌ಆರ್‌ಎಲ್‌ಎಂ ಸಂಜೀವಿನಿ ಮಹಿಳಾ ಸ್ವಸಹಾಯ ಸಂಘಗಳಿಗೆ ಶಾಸಕ ಶರತ್ ಬಚ್ಚೇಗೌಡ ಚೆಕ್‌ ವಿತರಿಸಿದರು.

3: ಹೊಸಕೋಟೆ ತಾಲೂಕಿನ ನೆಲವಾಗಿಲು ಗ್ರಾಮದಲ್ಲಿ ತಾಪಂ ನಿರ್ಮಿಸಿರುವ ಎನ್‌ಆರ್‌ಎಲ್‌ಎಂ ಸಂಜೀವಿನಿ ಕಟ್ಟಡವನ್ನು ಶಾಸಕ ಶರತ್ ಬಚ್ಚೇಗೌಡ ಉದ್ಘಾಟಿಸಿದರು.

PREV

Recommended Stories

ಛಾಯಾಗ್ರಾಹಕರ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ
ಹಿಂದೂ ಸಮಾಜ ಸಂಘಟನೆಗೆ ಆರ್‌ಎಸ್ಎಸ್‌ ಪಾತ್ರ ಅಗಾಧ