ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಸೋಮವಾರ ಸುಂಟಿಕೊಪ್ಪ ಗುಂಡುಗುಟ್ಟಿ ಮಂಜನಾಥಯ್ಯ ಮಿನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಅಯೋಜಿತವಾಗಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
1982ರಲ್ಲಿ ಆರಂಭಗೊಂಡ ಶ್ರೀ.ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಾಜ್ಯಾದ್ಯಂತ 55 ಲಕ್ಷ ಸದಸ್ಯರನ್ನು ಹೊಂದಿದ್ದು, ಈ ಹಿಂದೆ ಕೊಡಗಿನ ಕಾರ್ಯಕ್ರಮಗಳು ಸುಳ್ಯದ ಕಚೇರಿಯಿಂದ ನಿರ್ವಹಣೆ ಮಾಡಿಕೊಳ್ಳುತ್ತಿದ್ದು, ಇದೀಗ ಕೊಡಗಿಗೆ ಯೋಜನಾ ಕಚೇರಿ ನೀಡಲಾಗಿದೆ .ಶಿಕ್ಷಣ ಮತ್ತು ಮಹಿಳಾ ಸಬಲೀಕರಣಕ್ಕೆ ಧರ್ಮಸ್ಥಳದ ದರ್ಮಾಧಿಕಾರಿಗಳು ಹೆಚ್ಚಿನ ಒತ್ತನ್ನು ನೀಡಿದ್ದು ಅದರ ಜೋತೆಗೆ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ ಎಂದರು.ಮಕ್ಕಳ ವಿಶೇಷ ಪೊಲೀಸ್ ಘಟಕದ ಸಹಾಯಕ ಪೊಲೀಸ್ ಉಪನಿರೀಕ್ಷಕ ಸುಮತಿ, ಸಮಾಜದಲ್ಲಿ ನಡೆಯುತ್ತಿರುವ ಮಕ್ಕಳ ಮತ್ತು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಶೋಷಣೆಯ ಮುಖಗಳನ್ನು ತೆರೆದಿಟ್ಟರು. ಪೋಷಕರು ಮಕ್ಕಳ ವಿಚಾರದಲ್ಲಿ ವಿಶೇಷ ಕಾಳಜಿ ಮತ್ತು ಅವರೊಂದಿಗೆ ಸಭಾಷಣೆಗಳನ್ನು ನಡೆಸುವ ಮೂಲಕ ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗಳ ಕುರಿತು ಸದಾಜಾಗೃತರಾಗಿರಬೇಕೆಂದು ಅವರು ಕರೆ ನೀಡಿದರು.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಜ್ಞಾನಪದ ತಜ್ಞೆ ರಾಣಿ ಮಾಚಯ್ಯ ಅಧ್ಯಕ್ಷತೆ ವಹಿಸಿದ್ದರು.
ರಕ್ಷಾ ಶ್ರೀ ತಂಡದವರು ಪ್ರಾರ್ಥಿಸಿದರು. ಕ್ಷೇತ್ರ ಯೋಜನಾಧಿಕಾರಿ ಪುರುಷೋತ್ತಮ ಸ್ವಾಗತಿಸಿದರು, ಕಾನ್‌ಬೈಲ್ ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಮಾಲಿನಿ ನಿರೂಪಿಸಿ ವಂದಿಸಿದರು.