ಬಿಟ್ಟಿಭಾಗ್ಯ ತಿರಸ್ಕರಿಸಿದ ಸ್ವಾಭಿಮಾನಿ ಮತದಾರರು: ಸುಬ್ರಮಣ್ಯ ಉಪಾಧ್ಯಾಯ

KannadaprabhaNewsNetwork |  
Published : Jun 08, 2024, 12:37 AM IST
೨ | Kannada Prabha

ಸಾರಾಂಶ

ಕೊಡಗು ಜಿಲ್ಲೆ ಎಂದೆಂದಿಗೂ ಬಿಜೆಪಿಯ ಭದ್ರಕೋಟೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದರೂ ಯದುವೀರ್ ಅವರಿಗೆ 73 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆ ನೀಡಿದ್ದಾರೆ ಎಂದು ಕೊಡಗು ಜಿಲ್ಲಾ ಬಿಜೆಪಿ ವಕ್ತಾರ ಸುಬ್ರಮಣ್ಯ ಉಪಾಧ್ಯಾಯ ಅಭಿಪ್ರಾಯಪಟ್ಟಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಸುಭದ್ರ ದೇಶಕ್ಕಾಗಿ ಕೊಡಗಿನ ಸ್ವಾಭಿಮಾನಿ ಮತದಾರರು ಕಾಂಗ್ರೆಸ್‌ನ ಬಿಟ್ಟಿಭಾಗ್ಯಗಳನ್ನು ತಿರಸ್ಕರಿಸಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರನ್ನು ಗೆಲ್ಲಿಸಿದ್ದಾರೆ ಎಂದು ಕೊಡಗು ಜಿಲ್ಲಾ ಬಿಜೆಪಿ ವಕ್ತಾರ ಸುಬ್ರಮಣ್ಯ ಉಪಾಧ್ಯಾಯ ಅಭಿಪ್ರಾಯಪಟ್ಟಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಜಿಲ್ಲೆ ಎಂದೆಂದಿಗೂ ಬಿಜೆಪಿಯ ಭದ್ರಕೋಟೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದರೂ ಯದುವೀರ್ ಅವರಿಗೆ 73 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆ ನೀಡಿದ್ದಾರೆ. ಸ್ವಾಭಿಮಾನಿ ಮತದಾರರಿಗೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಜನರ ತೆರಿಗೆ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸದೆ ಜನರಿಗೆ ಬೇಡವಾದ ಬಿಟ್ಟಿಭಾಗ್ಯಗಳಿಗೆ ಮೀಸಲಿಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮತದಾರರು ಸರಿಯಾದ ಪಾಠವನ್ನೇ ಕಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಷ್ಠೆಯ ಕಣವಾಗಿದ್ದ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೀನಾಯವಾಗಿ ಸೋಲು ಕಂಡಿದ್ದಾರೆ. ಜಿಲ್ಲೆಯ ಇಬ್ಬರು ಕಾಂಗ್ರೆಸ್ ಶಾಸಕರು ಮತ ಗಳಿಸಿಕೊಡುವಲ್ಲಿ ವಿಫಲರಾಗಿದ್ದಾರೆ ಎಂದು ಟೀಕಿಸಿದ್ದಾರೆ.

ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ಎಂಟೂವರೆ ಸಾವಿರ ರು. ಹಾಕುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಘೋಷಿಸಿದರೂ ಮತದಾರ ಈ ಭರವಸೆಗೆ ಮಣೆ ಹಾಕದೆ ಇರುವುದನ್ನು ಗಮನಿಸಿದರೆ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತಷ್ಟು ಬಲವಾಗುತ್ತಿದೆ ಎನ್ನುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಳದಿ ಮಾರ್ಗ: 9 ಮೆಟ್ರೋ ನಿಲ್ದಾಣ ಬಳಿ ಹೊಸ ಬಿಎಂಟಿಸಿ ನಿಲ್ದಾಣ
ವಿವಾಹ ಪವಿತ್ರವಾದ ಶಾಶ್ವತ ಸಮ್ಮಿಲನ : ಹೈಕೋರ್ಟ್‌