ಗೃಹರಕ್ಷಕರಿಂದ ನಿಸ್ವಾರ್ಥ ಸೇವೆ ಶ್ಲಾಘನೀಯ: ಡಿಸಿ ಡಾ. ಕೆ.ವಿದ್ಯಾಕುಮಾರಿ

KannadaprabhaNewsNetwork |  
Published : Dec 14, 2024, 12:46 AM IST
13ಹೋಮ್‌ | Kannada Prabha

ಸಾರಾಂಶ

ಶುಕ್ರವಾರ ಉಡುಪಿ ಜಿಲ್ಲಾ ಗೃಹರಕ್ಷಕ ದಳ ವತಿಯಿಂದ ಅಖಿಲ ಭಾರತ ಗೃಹರಕ್ಷಕ ದಿನಾಚರಣೆ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಪ್ರಾಕೃತಿಕ ವಿಕೋಪದಂತಹ ತುರ್ತು ಸಂದರ್ಭದಲ್ಲಿ ಗೃಹರಕ್ಷಕ ದಳದ ಸಿಬ್ಬಂದಿ ತಮ್ಮ ಜೀವವನ್ನು ಪಣಕಿಟ್ಟು ಸಂತ್ರಸ್ತರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ನಿಸ್ವಾರ್ಥ ಸೇವೆ ನೀಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಶ್ಲಾಘಿಸಿದರು.ಅವರು ಶುಕ್ರವಾರ ಜಿಲ್ಲಾ ಗೃಹರಕ್ಷಕ ದಳ ವತಿಯಿಂದ ಆಯೋಜಿಸಲಾದ ಅಖಿಲ ಭಾರತ ಗೃಹರಕ್ಷಕ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಮಾತನಾಡಿ, ಗೃಹರಕ್ಷಕ ದಳವು ಪೊಲೀಸ್ ಇಲಾಖೆಯ ಪ್ರಮುಖ ಅಂಗವಾಗಿದ್ದು, ಬೇರೆ ಇಲಾಖೆಗೆ ಹೋಲಿಸಿದರೆ ಗೃಹ ರಕ್ಷಕದಳ ಇಲಾಖೆಯು ಪೊಲೀಸ್ ಇಲಾಖೆಯನ್ನು ಅತಿ ಸಮೀಪದಿಂದ ತಿಳಿದಿದೆ. ಯಾವುದೇ ಸಮಯದಲ್ಲಾದರೂ ಪೊಲೀಸ್ ಇಲಾಖೆಯ ಕೆಲಸಗಳಿಗೆ ಗೃಹರಕ್ಷಕರು ಸಹಕಾರ ನೀಡುತ್ತಿದ್ದಾರೆ ಎಂದರು.ಜಿಲ್ಲಾ ಗೃಹರಕ್ಷಕ ದಳ ಸಮಾದೇಷ್ಟ ಡಾ. ರೋಶನ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ವಾರ್ಷಿಕ ವರದಿ ವಾಚಿಸಿ ಮಾತನಾಡಿ, ಗೃಹರಕ್ಷಕ ದಳದ ಸಿಬ್ಬಂದಿಯನ್ನು ಮುಂದಿನ ದಿನಗಳಲ್ಲಿ ಬೀಚ್‌ಗಳಲ್ಲಿ ಪ್ರವಾಸಿಗರ ಜೀವರಕ್ಷಕರ ಸೇವೆಯಲ್ಲಿ ಕಾರ್ಯನಿರ್ವಹಿಸಲು ನಿಯೋಜಿಸಲಾಗುವುದು ಎಂದು ತಿಳಿಸಿದರು.ಕಾರ್ಯಕ್ರಮದ ಅಂಗವಾಗಿ ಗೃಹರಕ್ಷಕ ದಳ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಕಾರ್ಕಳ ಘಟಕದ ಶಿವಪ್ರಸಾದ್, ಬ್ರಹ್ಮಾವರ ಘಟಕದ ವಿಜಯ ಕುಮಾರ್, ಉಡುಪಿ ಘಟಕದ ಪೂರ್ಣಿಮಾ ಹಾಗೂ ಮಣಿಪಾಲ ಘಟಕದ ವಿಲ್ಮಾ ಜ್ಯೋತಿ ರೊಡ್ರಿಗಸ್ ಅವರನ್ನು ಸನ್ಮಾನಿಸಲಾಯಿತು.ಜಿಲ್ಲಾ ಗೃಹರಕ್ಷಕ ದಳ ಕಚೇರಿಯ ಅಧೀಕ್ಷಕ ರತ್ನಾಕರ್ ಎಂ. ಸನ್ಮಾನಿತರ ವಿವರ ವಾಚಿಸಿದರು. ಜಿಲ್ಲಾ ಗೃಹರಕ್ಷಕದಳದ ಸೆಕೆಂಡ್ ಇನ್ ಕಮಾಂಡ್ ಕೆ.ಸಿ.ರಾಜೇಶ್ ಸ್ವಾಗತಿಸಿದರು. ಪ್ರತಿಜ್ಞಾ ವಿಧಿ ಬೋಧಿಸಿದರು. ಸ್ಟೀವಸ್ ಪ್ರಕಾಶ್ ಲೂವಿಸ್ ನಿರೂಪಿಸಿದರು. ಕಾರ್ಕಳ ಘಟಕದ ಪ್ಲಟೂನ್ ಕಮಾಂಡರ್ ಪ್ರಭಾಕರ ಸುವರ್ಣ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ