ಬಸವೇಶ್ವರ ವಿದ್ಯಾಸಂಸ್ಥೆಯಿಂದ ನಿಸ್ವಾರ್ಥ ಸೇವೆ

KannadaprabhaNewsNetwork |  
Published : Jan 30, 2025, 12:31 AM IST
ಫೋಟೋ ,29ಎಚ್‌ಎಸ್‌ಡಿ6 :  ಹಿರಿಯ ನಾಗರೀಕರಿಗೆ ಆಯುಷ್ಮಾನ್ ವಯೋ ವಂದನ ಕಾರ್ಡ್ ವಿತರಣಾ ಸಮಾರಂಭವನ್ನು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ವೀರೇಶ್ ಉದ್ಘಾಟಿಸಿದರು.  | Kannada Prabha

ಸಾರಾಂಶ

ಹಿರಿಯ ನಾಗರೀಕರಿಗೆ ಆಯುಷ್ಮಾನ್ ವಯೋ ವಂದನ ಕಾರ್ಡ್ ವಿತರಣಾ ಸಮಾರಂಭವನ್ನು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ವೀರೇಶ್ ಉದ್ಘಾಟಿಸಿದರು.

ಹಿರಿಯ ನಾಗರೀಕರಿಗೆ ಆಯುಷ್ಮಾನ್ ವಯೋ ವಂದನ ಕಾರ್ಡ್ ವಿತರಣೆಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಹಿರಿಯ ನಾಗರೀಕರು, ವಿಕಲಚೇತನರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಲುಪಿಸುವಲ್ಲಿ ಬಸವೇಶ್ವರ

ವಿದ್ಯಾಸಂಸ್ಥೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ವೀರೇಶ್ ತಿಳಿಸಿದರು.

ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ, ಸಬಲೀಕರಣ ಇಲಾಖೆ, ಬಸವೇಶ್ವರ ವಿದ್ಯಾಸಂಸ್ಥೆ ಆಶ್ರಯದಲ್ಲಿ ಹೊಂಬೆಳಕು ಹಿರಿಯ ನಾಗರೀಕರ ಸಹಾಯವಾಣಿ ಕೇಂದ್ರದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಹಿರಿಯ ನಾಗರೀಕರಿಗೆ ಆಯುಷ್ಮಾನ್ ವಯೋ ವಂದನ ಕಾರ್ಡ್ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ವಯಸ್ಸಾದ ಮೇಲೆ ಹಿರಿಯರು ಒಂದಲ್ಲ ಒಂದು ರೀತಿಯ ಕಷ್ಟ ಅನುಭವಿಸುತ್ತಿರುತ್ತಾರೆ. ಸರ್ಕಾರಿ ನೌಕರಿಯಿಂದ

ನಿವೃತ್ತಿಯಾಗಿ ಪಿಂಚಣಿ ಪಡೆಯುತ್ತಿರುವವರು ನೆಮ್ಮದಿಯಾಗಿ ಬದುಕಬಹುದು. ಆದರೆ ಯಾವುದೇ ರೀತಿಯ ಸವಲತ್ತುಗಳಿಲ್ಲದೆ ಬದುಕುವುದು ಕಷ್ಟದ ಕೆಲಸ. ಇಂತಹ ಪರಿಸ್ಥಿತಿಯಲ್ಲಿ ಬಸವೇಶ್ವರ ವಿದ್ಯಾಸಂಸ್ಥೆ, ಹಿರಿಯ ನಾಗರೀಕರು ಹಾಗೂ ವಿಕಲಚೇತನರ ಪರವಾಗಿ ಕೆಲಸ ಮಾಡುತ್ತಿರುವುದು ನಿಜಕ್ಕೂ ಮೆಚ್ಚುವಂತದ್ದು ಎಂದರು. ಸಮಾಜ ಸೇವಕ ಎಸ್.ಷಣ್ಮುಖಪ್ಪ ಮಾತನಾಡಿ, ಹಿರಿಯ ನಾಗರೀಕರು ಹಾಗೂ ವಿಕಲಚೇತನರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಗುವ ಸೌಲತ್ತುಗಳು ತಲುಪಬೇಕು. ಈ ನಿಟ್ಟಿನಲ್ಲಿ ಬಸವೇಶ್ವರ ವಿದ್ಯಾಸಂಸ್ಥೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಬಸವೇಶ್ವರ ವಿದ್ಯಾಸಂಸ್ಥೆ ಅಧ್ಯಕ್ಷೆ ಪ್ರಭಾವತಿ ಶಂಕರಪ್ಪ ವಹಿಸಿದ್ದರು. ಕಾರ್ಯಕ್ರಮದಲ್ಲಿ ಚಾರ್ಟೆರ್ಡ್‌ ಅಕೌಂಟೆಂಟ್ ಚಂದ್ರಣ್ಣ, ನಿವೃತ್ತ ಪ್ರಾಚಾರ್ಯ ಕೋರಧಾನ್ಯ ಮಠದ ಗುರುಬಸವಯ್ಯ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!