ಕನ್ನಡಪ್ರಭ ವಾರ್ತೆ ಅರಸೀಕೆರೆ
ನಗರದ ಹೊರ ವಲಯದಲ್ಲಿರುವ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗೌರ‍್ನರ್ ಭೇಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಉಚಿತ ರಕ್ತದಾನ ಶಿಬಿರ, ಕಣ್ಣು ತಪಾಸಣೆ, ಕೃತಕ ಕಾಲು ಜೋಡಣೆ, ಪರಿಸರ ಸಂರಕ್ಷಣೆ, ಅನೈರ್ಮಲ್ಯ ತಡೆ ಸೇರಿ ಹಲವು ಸಮಾಜಮುಖಿ ಚಟುವಟಿಕೆಗಳನ್ನು ಜಗತ್ತಿನ ಉದ್ದಗಲಕ್ಕೂ ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕಾಯಕದಲ್ಲಿ ಸಂಸ್ಥೆ ತೊಡಗಿಸಿಕೊಂಡಿದೆ ಎನ್ನುವುದೇ ಹೆಮ್ಮೆಯ ಸಂಗತಿಯಾಗಿದೆ. ಈ ನಿಟ್ಟಿನಲ್ಲಿ ಕಲ್ಪತರು ಲಯನ್ಸ್ ಸಂಸ್ಥೆ ಸ್ಥಳೀಯ ಕ್ಲಬ್ ಕೂಡ ಮುಂಚೂಣಿಯಲ್ಲಿದೆ. ಮನುಷ್ಯ ತಾನು ಸಂಪಾದಿಸಿದ ಹಣದಲ್ಲಿ ಅಲ್ಪವನ್ನಾದರೂ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗಿಸಿದರೆ ಸಾರ್ಥಕತೆ ಬರಲಿದೆ. ಅಧಿಕಾರ ದೊರೆತ ಕೂಡಲೇ ಮಂದಿರ, ಮಸೀದಿ, ಚರ್ಚ್‌ಗಳಿಗೆ ಭೇಟಿ ನೀಡುವ ಬದಲು ಸಂಕಷ್ಟಕ್ಕೆ ಸಿಲುಕಿರುವ ಸದಸ್ಯರ ಮನೆಗೆ ಭೇಟಿ ನೀಡಿ ಅರೋಗ್ಯ ವಿಚಾರಿಸುವ ಕೆಲಸ ಮಾಡಿರುವುದು ತೃಪ್ತಿ ತಂದಿದೆ ಎಂದರು.ಲಯನ್ಸ್ ಕಲ್ಪತರು ಸಂಸ್ಥೆಯ ತಾಲೂಕು ಅಧ್ಯಕ್ಷ ಎಚ್.ಬಿ.ಲೋಕೇಶ್ ಮಾತನಾಡಿ,ಪದಾಧಿಕಾರಿಗಳು, ಸದಸ್ಯರು ಹಾಗೂ ಸಂಘ, ಸಂಸ್ಥೆಗಳ ಸಹಕಾರದೊಂದಿಗೆ ಶಾಲಾ, ಕಾಲೇಜುಗಳಲ್ಲಿ ಸಸಿ ನೆಡುವುದು, ನೋಟ್ ಪುಸ್ತಕ ವಿತರಣೆ ಸೇರಿ ಹಲವು ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಜನಸ್ನೇಹಿ ಯೋಜನೆಗಳನ್ನು ರೂಪಿಸುವುದಾಗಿ ಹೇಳಿದರು.
ಲಯನ್ಸ್ ಸ್ಮಿತಾ ಡಿಸೋಜಾ, ನವೀನ್ ಚಂದ್ರಶೆಟ್ಟಿ, ಕಾರ್ಯದರ್ಶಿ ಡಾ.ವರದರಾಜು, ಖಜಾಂಚಿ ಆಂತೋಣಿ, ವೆಂಕಟೇಶ್, ಗೋವಿಂದರಾಜ್, ಎಚ್.ಬಿ.ಸತೀಶ್,ಎನ್.ಎಲ್.ಕುಮಾರ್,ಬಸವರಾಜು, ವಿಷ್ಣುವರ್ಧನ್, ಹನುಮಂತಪ್ಪ ಸೇರಿ ಹಲವರು ಪಾಲ್ಗೊಂಡಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಯಿತು.