ಕಮಿಷನ್‌ಗಾಗಿ ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ: ಶ್ರೀರಾಮುಲು ಆರೋಪ

KannadaprabhaNewsNetwork |  
Published : Jul 31, 2025, 12:46 AM IST
೩೦ಎಚ್‌ಪಿಎಲ್೧-ಪೋಟೊ-ಹರಪನಹಳ್ಳಿಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಅವರನ್ನು ಬಿಜೆಪಿ ಮುಖಂಡರು ಸನ್ಮಾನಿಸಿದರು. | Kannada Prabha

ಸಾರಾಂಶ

ರಾಜ್ಯದಲ್ಲಿ ಯೂರಿಯಾ ರಸಗೊಬ್ಬರಕ್ಕಾಗಿ ಹಾಹಾಕಾರ ಉಂಟಾಗಿದ್ದು, ಇತ್ತ ಕಾಂಗ್ರೆಸ್ ನಾಯಕರು ಸಿಎಂ ಕುರ್ಚಿಯಾಗಿ ಪೈಪೋಟಿಗೆ ಇಳಿದಿದ್ದಾರೆ.

ಕನ್ನಡಪ್ರಭ ವಾರ್ತೆ ಹರಪನಹಳ್ಳಿ

ರಾಜ್ಯದಲ್ಲಿ ಯೂರಿಯಾ ರಸಗೊಬ್ಬರಕ್ಕಾಗಿ ಹಾಹಾಕಾರ ಉಂಟಾಗಿದ್ದು, ಇತ್ತ ಕಾಂಗ್ರೆಸ್ ನಾಯಕರು ಸಿಎಂ ಕುರ್ಚಿಯಾಗಿ ಪೈಪೋಟಿಗೆ ಇಳಿದಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಕಾಂಗ್ರೆಸ್ ವಿರುದ್ಧ ಹಾರಿಹಾಯ್ದರು.

ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಈಗಾಗಲೇ ರಾಜ್ಯಕ್ಕೆ ಬೇಕಾದ ಅಗತ್ಯ ರಸಗೊಬ್ಬರ ಪೂರೈಕೆ ಮಾಡಿದೆ. ಆದರೆ ರಾಜ್ಯ ಸರ್ಕಾರ ಅದನ್ನು ಸಮರ್ಪಕವಾಗಿ ರೈತರಿಗೆ ವಿತರಿಸದೆ ಕಾಳಸಂತೆಯಲ್ಲಿ ಹೆಚ್ಚಿನ ಕಮಿಷನ್‌ಗಾಗಿ ಮಾರಾಟ ಮಾಡುತ್ತಿದೆ ಎಂದು ಆರೋಪಿಸಿದರು.ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಸ್ವತಃ ಕಾಂಗ್ರೆಸ್ ಶಾಸಕರೆ ಅನುದಾನದ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಸಿಎಂ ಹುದ್ದೆ ಮೇಲೆ ಕಣ್ಣು ಇಟ್ಟಿದ್ದಾರೆ. ಇದೆಲ್ಲ ಬೆಳವಣಿಗೆ ಗಮನಿಸಿದರೆ ರಾಜ್ಯ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಗೋಚರಿಸುತ್ತದೆ ಎಂದರು.ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ಬಿ.ನಾಗೇಂದ್ರ ತಪ್ಪು ಮಾಡಿರುವ ಬಗ್ಗೆ ಸಾಕ್ಷಿ ಸಮೇತ ದಾಖಲೆಗಳು ಸಿಕ್ಕಿವೆ. ಆ ಕಾರಣಕ್ಕಾಗಿ ಅವರು ಮಂತ್ರಿಸ್ಥಾನಕ್ಕೆ ರಾಜಿನಾಮೆ ಕೊಟ್ಟಿದ್ದಾರೆ. ನಮ್ಮ ಸರ್ಕಾರದಲ್ಲಿ ನಾನೇನಾದರೂ ಹಗರಣ ಮಾಡಿದ್ದರೆ ಈಗ ಅವರದ್ದೇ ಸರ್ಕಾರ ಇದೆ, ಬೇಕಾದರೆ ತನಿಖೆ ನಡೆಸಲಿ ತಪ್ಪಿದ್ದಲ್ಲಿ ನಾನು ಶಿಕ್ಷೆ ಅನುಭವಿಸಲು ಸಿದ್ಧ ಎಂದು ನಾಗೇಂದ್ರ ಹೇಳಿಕೆಗೆ ತಿರುಗೇಟು ನೀಡಿದರು.ರಾಜ್ಯ ಬಿಜೆಪಿಯಲ್ಲಿರುವ ಭಿನ್ನಮತವನ್ನು ಸರಿಪಡಿಸಲು ರಾಷ್ಟ್ರೀಯ ನಾಯಕರು ನನಗೆ ಜವಬ್ದಾರಿ ಕೊಟ್ಟರೆ ಎಲ್ಲರನ್ನೂ ಒಟ್ಟುಗೂಡಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.ಈ ಸಂದರ್ಭ ಬಿಜೆಪಿ ಮುಖಂಡರಾದ ಆರುಂಡಿ ನಾಗರಾಜ್, ಡಾ. ರಮೇಶ ಕುಮಾರ, ವಕೀಲ ಪ್ರಾಣೇಶ್, ಗೀರಜ್ಜಿ ನಾಗರಾಜ್, ಶ್ರೀನಿವಾಸ ನಾಯಕ, ಈಡಿಗರ ಅಂಜಿನಪ್ಪ, ಗಿರೀಶ್ ಸೇರಿದಂತೆ ಮತ್ತಿತರರು ಇದ್ದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ