ಅಧಿಕ ಬೆಲೆಗೆ ಬಿತ್ತನೆ ಬೀಜ ಮಾರಾಟ: ಕ್ರಮಕ್ಕೆ ಬಿಜೆಪಿ ಒತ್ತಾಯ

KannadaprabhaNewsNetwork |  
Published : Jun 02, 2024, 01:45 AM IST
ಅಧಿಕ ಬೆಲೆಗೆ ಬಿತ್ತನೆ ಬೀಜ ಸರಬರಾಜು ಮಾಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕೆಂದು ಆಗ್ರಹಿಸಿ ಬಿಜೆಪಿ ರೈತ ಮೋರ್ಚಾದ ಕಾರ್ಯಕರ್ತರು ಶನಿವಾರ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಚಿಕ್ಕಮಗಳೂರುಅಧಿಕ ಬೆಲೆಗೆ ಬಿತ್ತನೆ ಬೀಜ ಸರಬರಾಜು ಮಾಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕೆಂದು ಆಗ್ರಹಿಸಿ ಬಿಜೆಪಿ ರೈತ ಮೋರ್ಚಾದ ಕಾರ್ಯಕರ್ತರು ಶನಿವಾರ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಅಧಿಕ ಬೆಲೆಗೆ ಬಿತ್ತನೆ ಬೀಜ ಸರಬರಾಜು ಮಾಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕೆಂದು ಆಗ್ರಹಿಸಿ ಬಿಜೆಪಿ ರೈತ ಮೋರ್ಚಾದ ಕಾರ್ಯಕರ್ತರು ಶನಿವಾರ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಮನವಿ ಸಲ್ಲಿಸಿದರು.

ರಾಜ್ಯ ಸರ್ಕಾರ ಬಿತ್ತನೆ ಬೀಜಗಳನ್ನು ಕಳೆದ ವರ್ಷದ ದರಕ್ಕಿಂತ ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ಮನವಿಯಲ್ಲಿ ತಿಳಿಸಿದರು.ರೈತಾಪಿ ವರ್ಗ ಈಗಾಗಲೇ ಮಳೆ ಕೊರತೆ, ಬರಗಾಲ, ಸಾಲ ಬಾಧೆ ಸೇರಿದಂತೆ ವಿವಿಧ ಸಮಸ್ಯೆಗಳಿಂದ ತತ್ತರಿಸಿರುವ ಸಮಯದಲ್ಲಿ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ ಬೆಲೆ ನೀಡಿ ಬಿತ್ತನೆ ಬೀಜ ಖರೀದಿಸಿ ಕೃಷಿ ಚಟುವಟಿಕೆ ನಡೆಸಲು ಅಶಕ್ತರಾಗಿದ್ದಾರೆ ಎಂದು ಹೇಳಿದರು.ರೈತರಿಗೆ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರ ಕೆಲ ಬಿತ್ತನೆ ಬೀಜಗಳ ದರಗಳನ್ನು ಏಕಾಏಕಿ ಏರಿಕೆಮಾಡಿ ಗಾಯದ ಮೇಲೆ ಉಪ್ಪು ಸವರುವ ಕೆಲಸ ಮಾಡುತ್ತಿದೆ. ಮುಂಗಾರಿನಲ್ಲಿ ಬಿತ್ತನೆಗೆ ಅನುಕೂಲವಾಗುವಂತೆ ಬೀಜಗಳಿಗೆ ಹಿಂದಿನ ವರ್ಷದ ದರದಲ್ಲೇ ಸರಬರಾಜು ಮಾಡಬೇಕು ಎಂದು ಆಗ್ರಹಿಸಿದರು.ಬಿತ್ತನೆ ಬೀಜ ವಿಚಾರದಲ್ಲಿ ಸರ್ಕಾರ ಒಂದು ವೇಳೆ ಸೂಕ್ತ ನಿಧಾರ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ರೈತಾಪಿ ವರ್ಗ ದವರೊಂದಿಗೆ ಜೊತೆಗೂಡಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.ಈ ಸಂದರ್ಭದಲ್ಲಿ ರೈತ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಮುಗುಳುವಳ್ಳಿ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನೇಶ್ ಪಾದಮನೆ, ಉಪಾಧ್ಯಕ್ಷ ನಾಗರಾಜ್, ಸಾಮಾಜಿಕ ಜಾಲತಾಣದ ಪ್ರಸನ್ನ, ನಗರ ಮಂಡಲ ಅಧ್ಯಕ್ಷ ನಿಶಾಂತ್, ಗ್ರಾಮಾಂತರ ಮಂಡಲ ಅಧ್ಯಕ್ಷ ಉಮೇಶ್, ಸತೀಶ್, ಕೇಶವ ಹಾಜರಿದ್ದರು.

ಪೋಟೋ ಫೈಲ್‌ ನೇಮ್‌ 1 ಕೆಸಿಕೆಎಂ 4ಅಧಿಕ ಬೆಲೆಗೆ ಬಿತ್ತನೆ ಬೀಜ ಸರಬರಾಜು ಮಾಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕೆಂದು ಆಗ್ರಹಿಸಿ ಬಿಜೆಪಿ ರೈತ ಮೋರ್ಚಾದ ಕಾರ್ಯಕರ್ತರು ಶನಿವಾರ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಮನವಿ ಸಲ್ಲಿಸಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ