ಕುಂಡ್ಯೋಳಂಡ ಹಾಕಿ ಹಬ್ಬ : 27ರಂದು ಸೆಮಿ ಫೈನಲ್, 28 ರಂದು ಫೈನಲ್

KannadaprabhaNewsNetwork |  
Published : Apr 21, 2024, 02:20 AM IST
ಫೈನಲ್ | Kannada Prabha

ಸಾರಾಂಶ

24ನೇ ಕುಂಡ್ಯೋಳಂಡ ಹಾಕಿ ಹಬ್ಬದ ಸೆಮಿಫೈನಲ್‌ ಮತ್ತು ಫೈನಲ್‌ ಪಂದ್ಯಾವಳಿ ಏ. 27 ಮತ್ತು 28ರಂದು ನಡೆಯಲಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ನಾಪೋಕ್ಲುವಿನ ಕೆಪಿಎಸ್ ಶಾಲೆಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊಡವ ಕುಟುಂಬಗಳ ನಡುವಿನ ಪ್ರತಿಷ್ಠಿತ 24ನೇ ಕುಂಡ್ಯೋಳಂಡ ಹಾಕಿ ಹಬ್ಬದ ಸೆಮಿ ಫೈನಲ್ ಹಾಗೂ ಫೈನಲ್ ಪಂದ್ಯಾವಳಿಯು ಏ.27 ಮತ್ತು 28 ರಂದು ನಡೆಯಲಿದೆ.

ಎರಡು ದಿನ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂಡ್ಯೋಳಂಡ ಕುಟುಂಬದ ಪಟ್ಟೆದಾರ ಕುಂಡ್ಯೋಳಂಡ ಎ.ನಾಣಯ್ಯ ವಹಿಸಲಿದ್ದಾರೆ.

27 ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಸೆಮಿ ಫೈನಲ್ ಪಂದ್ಯಾವಳಿಯ ಸಭಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಚೆಪ್ಪುಡಿರ ಮೊಣ್ಣಪ್ಪ ಪೂಣಚ್ಚ ಪಾಲ್ಗೊಳ್ಳಲಿದ್ದು, ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ ಉಪಸ್ಥಿತರಿರುವರು.

ಎರಡನೇ ಪಂದ್ಯದ ಅತಿಥಿಯಾಗಿ ಡಾ.ಕಲಿಯಾಟಂಡ ಚಿಣ್ಣಪ್ಪ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮೇ.ಜ.ಬಾಚಮಂಡ ಎ.ಕಾರ್ಯಪ್ಪ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಪಟುಗಳು, ಪಂದ್ಯಾವಳಿಯಲ್ಲಿ ಕಾರ್ಯನಿರ್ವಹಿಸಿದ ಅಂಪೈರ್‌ಗಳು, ತಾಂತ್ರಿಕವರ್ಗ ಮತ್ತು ಸಹಕಾರ ನೀಡಿದ ಎಲ್ಲರನ್ನು ಅಭಿನಂದಿಸಿ ಗೌರವಿಸಲಾಗುವುದು.

28 ರಂದು ಬೆಳಗ್ಗೆ 10.30 ಗಂಟೆಗೆ ನಡೆಯಲಿರುವ ಫೈನಲ್ ಪಂದ್ಯಾವಳಿಯ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಪಾಲ್ಗೊಳ್ಳಲಿದ್ದು, ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ ಉಪಸ್ಥಿತರಿರುವರು.

ಅತಿಥಿಗಳಾಗಿ ಸಂಸದ ಪ್ರತಾಪ್ ಸಿಂಹ, ಹೈದರಾಬಾದ್ ವಿದೇಶಿ ತನಿಖಾ ಘಟಕದ ಉಪ ನಿರ್ದೇಶಕ ಮುಕ್ಕಾಟಿರ ಪುನಿತ್ ಕುಟ್ಟಯ್ಯ, ಉದ್ಯಮಿ ಕೊಡಂಗಡ ರವಿ ಕರುಂಬಯ್ಯ, ಐಆರ್‌ಎಸ್ ಜಾರಿ ನಿರ್ದೇಶನಾಲಯದ ಉಪ ನಿರ್ದೇಶಕ ಡಾ.ಕೊಟ್ಟಂಗಡ ಪೆಮ್ಮಯ್ಯ, ನಾರಾಯಣ ಆರೋಗ್ಯ ಸಮೂಹದ ಮುಖ್ಯ ವೈದ್ಯಕೀಯ ನಿರ್ದೇಶಕ ಡಾ.ಪುಚ್ಚಿಮಾಡ ಎಂ.ಉತ್ತಪ್ಪ (ಸಂತೋಷ್), ಪಾಂಡಂಡ ಲೀಲಾ ಕುಟ್ಟಪ್ಪ, ಒಲಂಪಿಯನ್ ಡಾ.ಅಂಜಪರವಂಡ ಬಿ.ಸುಬ್ಬಯ್ಯ, ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿಕಂಡ ಮಹೇಶ್ ನಾಚಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಇಬ್ನಿ ಕೂರ್ಗ್ ವ್ಯವಸ್ಥಾಪಕ ನಿರ್ದೇಶಕ ಕ್ಯಾಪ್ಟನ್ ಸಬಾಸ್ಟಿಯನ್, ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ನ ಪ್ರಧಾನ ವ್ಯವಸ್ಥಾಪಕ ಪೀಟರ್, ನಾಪೋಕ್ಲು ಗ್ರಾ.ಪಂ. ಉಪಾಧ್ಯಕ್ಷ ಕುಲ್ಲೇಟ್ಟಿರ ಹೇಮಾವತಿ ಅರುಣ್ ಬೇಬಾ, ಟಾಟಾ ಕಾಫಿ ವ್ಯವಸ್ಥಾಪಕ ನಿರ್ದೇಶಕ ಪಿ.ಎ.ಮಂದಣ್ಣ, ನಾಪೋಕ್ಲು ಕೆಪಿಎಸ್ ಸ್ಕೂಲ್‌ನ ಪ್ರಾಂಶುಪಾಲೆ ಮೇದುರ ವಿಶಾಲ ಕುಶಾಲಪ್ಪ, ಉಪ ಪ್ರಾಂಶುಪಾಲೆ ಎಂ.ಎಸ್.ಶಿವಣ್ಣ, ಕ್ರೀಡಾ ಇಲಾಖೆಯ ಉಪ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಚಕ್ರವರ್ತಿ, ಅತಿಥಿಗಳಾಗಿ ಆರ್.ವಿ.ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಪಿ.ಶ್ಯಾಮ್, ಆರ್.ವಿ.ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಡಿ.ಪಿ.ನಾಗರಾಜ್, ಕಾಮಾಕ್ಷಿ ಆಸ್ಪತ್ರೆಯ ಮುಖ್ಯಸ್ಥ ಮಹೇಶ್ ಶೆಣೈ, ಉದ್ಯಮಿ ಕಂಬೆಯಂಡ ಶ್ಯಾಮ್, ರಿಪಬ್ಲಿಕ್ ಕನ್ನಡ ಚಾನಲ್ ನ ಪ್ರಧಾನ ಸಂಪಾದಕ ಚೇರಂಡ ಕಿಶನ್ ಪಾಲ್ಗೊಳ್ಳಲಿದ್ದಾರೆ ಎಂದು ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ, ಹಾಕಿ ಹಬ್ಬದ ಅಧ್ಯಕ್ಷ ರಮೇಶ್ ಮುದ್ದಯ್ಯ ಹಾಗೂ ಸಂಚಾಲಕ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!