ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಈ ವೇಳೆ ಮಾತನಾಡಿದ ಪ್ರತಿಭಟನಾನಿರತರು, ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪಿಸಿ ೧೦ ತಿಂಗಳು ಕಳೆದರೂ ಇದುವರೆಗೆ ಲೋಕಾರ್ಪಣೆ ಮಾಡಿಲ್ಲ. ಪ್ರತಿಮೆ ಲೋಕಾರ್ಪಣೆ ಮಾಡಲು ಕ್ರಮ ತೆಗೆದುಕೊಳ್ಳಬೇಕೆಂದು ಪ್ರತಿಮೆ ಎದುರಿನಲ್ಲಿಯೇ ಎರಡು ತಿಂಗಳ ಹಿಂದೆ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರೂ, ಮನವಿಗೆ ಸ್ಪಂದಿಸದೆ ಕಾಲಹರಣ ಮಾಡಿ ಪ್ರತಿಮೆಯ ಅನಾವರಣ ಮುಂದೂಡುತ್ತಿದ್ದಾರೆ. ಇದರ ವಿರುದ್ಧ ಉಗ್ರ ಪ್ರತಿಭಟನೆ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿ ಎರಡು ತಿಂಗಳು ಕಳೆದರೂ ಇನ್ನೂ ಅನಾವರಣ ಮಾಡಲು ಹಿಂದೇಟು ಹಾಕು ತಿರುವ ತಾಲ್ಲೂಕು ಆಡಳಿತದ ಕಾರ್ಯ ವೈಖರಿ ಖಂಡಿಸಿ ಇಂದು ಅರೆಬೆತ್ತಲೆ ಚಳವಳಿ ಮಾಡು ತ್ತಿದ್ದೇವೆ ಎಂದರು.
ನಮ್ಮ ಮನವಿಯನ್ನು ಹಾಸನ ಜಿಲ್ಲಾಧಿಕಾರಿ ಹಾಗೂ ರಾಜ್ಯ ಸರ್ಕಾರಕ್ಕೆ ಸಲ್ಲಿಸಿ ದ್ದೇವೆ. ಸೆ.೨೦ರ ಒಳಗೆ ಪ್ರತಿಮೆ ಅನಾ ವರಣ ಮಾಡದಿದ್ದರೆ ತಾಲೂಕು ಕಚೇರಿಯ ಲಬೋ " ಚಳವಳಿ ಮುಂಭಾಗ "ಲಬೋ ಯನ್ನು ಹಮ್ಮಿಕೊಳ್ಳ ಲಾಗುವುದು ಎಂದು ಎಚ್ಚರಿಸಿದರು. ಸೆ.೨೦ರ ನಂತರವೂ ಪ್ರತಿಮೆ ಲೋಕಾರ್ಪಣೆಗೆ ಕ್ರಮ ಕೈಗೊಳ್ಳದಿದ್ದರೆ ರಾಜಕೀಯ ನಾಯಕರು ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರೊಂದಿಗೆ ಅದ್ದೂರಿ ಕಾರ್ಯಕ್ರಮದೊಂದಿಗೆ ಪ್ರತಿಮೆ ಅನಾವರಣ ಮಾಡಲಾಗುವುದು ಎಂದರು.ತಾಲೂಕು ಕಚೇರಿ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಮುಂಭಾಗ ಅರೆಬೆತ್ತಲೆ ಚಳವಳಿ ನಡೆಸಿ, ತದನಂತರ ತಾಲೂಕು ಕಚೇರಿ ಮುಂಭಾಗ ಮೆರವಣಿಗೆ ನಡೆಸಿ, ತಹಸೀಲ್ದಾರ್ ಜಿ.ಎಸ್. ಶಂಕರಪ್ಪ ಅವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ತಹಸೀಲ್ದಾರ್, ಜಿಲ್ಲಾಡಳಿತ ಹಾಗೂ ಸರ್ಕಾರದ ಗಮನಕ್ಕೆ ತಂದು ಶೀಘ್ರವೇ ಪ್ರತಿಮೆ ಲೋಕಾ ರ್ಪಣೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.