ಕನ್ನಡಪ್ರಭ ವಾರ್ತೆ ಮೈಸೂರು
ಕುವೆಂಪುನಗರದ ಗಾನಭಾರತಿ ಸಂಗೀತ ಸಭಾದಲ್ಲಿ ಅಖಿಲ ಭಾರತ ವಿಮಾ ಪಿಂಚಣಿದಾರರ ಸಂಘವು ಶನಿವಾರ ಆಯೋಜಿಸಿದ್ದ ನಿರುದ್ಯೋಗ, ಕಡಿಮೆ ಉದ್ಯೋಗ ಹಾಗೂ ಉದ್ಯೋಗ ರಹಿತ ಅಭಿವೃದ್ಧಿ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.
ನಮ್ಮ ದೇಶದಲ್ಲಿ ಉದ್ಯೋಗ ಸೃಷ್ಟಿಗೆ ಅಪಾರವಾದ ಅವಕಾಶ ಇದೆ. ಆದರೆ, ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿರುವ ಸರ್ಕಾರಗಳು, ಬಡತನ ಹೆಚ್ಚಾಗಿರುವ ಕಾರಣ ಜನಸಂಖ್ಯೆ ಹೆಚ್ಚಳವಾಗಿದೆ. ಇದರಿಂದ ನಿರುದ್ಯೋಗ ಪ್ರಮಾಣ ಹೆಚ್ಚುತ್ತಿದೆಂದು ತಮ್ಮ ಹೊಣೆಗಾರಿಕೆಯಿಂದ ಜಾರಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಅವರು ಖಂಡಿಸಿದರು.ವಿವಿಧ ಖಾಸಗಿ ಕಂಪನಿಗಳಲ್ಲಿನ ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕುತ್ತಿದ್ದು, ಇದರಿಂದ ನಿರುದ್ಯೋಗ ಪ್ರಮಾಣ ಹೆಚ್ಚುತ್ತಿದೆ. ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ.65 ರಷ್ಟು ಜನ ದುಡಿಯುವವರಿದ್ದಾರೆ. ಆದರೆ, ದುಡಿಯಲು ಸಿದ್ಧರಿರುವರಿಗೆ ವಿದ್ಯಾರ್ಹತೆ ಮತ್ತು ಕೌಶಲ್ಯಕ್ಕೆ ಸರಿಸಮನಾದ ಉದ್ಯೋಗ ಸಿಗುತ್ತಿಲ್ಲ ಎಂದರು.
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಸುನಂದಾ ಮಾತನಾಡಿ, ನಿರುದ್ಯೋಗದ ಮೂಲ ಬಂಡಾವಳಶಾಹಿ ಆರ್ಥಿಕತೆಯಲ್ಲಿ ಅಡಗಿದೆ. ಭಾರತ ಅಭಿವೃದ್ಧಿಯತ್ತ ಮುನ್ನಡೆಯುತ್ತಿದ್ದು, ಪ್ರಕಾಶಿಸುತ್ತಿದೆ ಎನ್ನುವುದರಲ್ಲಿ ಅರ್ಥವಿಲ್ಲ. ದೇಶದ ಅಭಿವೃದ್ಧಿ ಕೇವಲ ರಸ್ತೆ, ಕಟ್ಟಡ ನಿರ್ಮಾಣವಲ್ಲ. ನಿರುದ್ಯೋಗ ಸಮಸ್ಯೆ ಕಡಿಮೆ ಇರಬೇಕು. ಆದರೆ, ದೇಶದಲ್ಲಿ ನಿರುದ್ಯೋಗ ಕಾಡುತ್ತಿದೆ ಎಂದರು.
----
ಬಹುತೇಕರು ಸಂಬಳ ಪಡೆಯುವ ವಿವಿಧ ಕೆಲಸ ಬಿಟ್ಟು, ಸರ್ಕಾರ ಜಾರಿಗೆ ತಂದಿರುವ ಯೋಜನೆ ಮೂಲಕ ಸ್ವಯಂ ಉದ್ಯೋಗ ಆರಂಭಿಸುತ್ತಾರೆ. ಇದರಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ. ಇದನ್ನು ಸರ್ಕಾರಗಳು ದೊಡ್ಡ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿವೆ. ಆದರೆ, ಸ್ವಯಂ ಉದ್ಯೋಗ ನಡೆಸುವವರ ಆದಾಯ ಕಡಿಮೆ ಇದೆ.
----
- ಎಚ್.ಎಸ್. ಸುನಂದಾ, ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ,