ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ
ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯ ಎಸ್‌ಆರ್‌ಎ ಮೈದಾನದಲ್ಲಿ ಶನಿವಾರ ಪ್ರಜಾಧ್ವನಿ-ಭಾಗ2 ಸಮಾವೇಶದಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಛೀಮಾರಿ ಹಾಕಿದ ನಂತರ ಕೇಂದ್ರ ಸರ್ಕಾರ ಕಾಟಾಚಾರಕ್ಕೆ ಬರ ಪರಿಹಾರ ನೀಡಿದೆ. ನ್ಯಾಯಾಲಯಕ್ಕೂ ಗೌರವ ನೀಡದ ಬಿಜೆಪಿ ಸರ್ಕಾರದ ವರ್ತನೆ ಖಂಡನೀಯ ಎಂದು ಕಿಡಿಕಾರಿದರು.
ರಾಜ್ಯಕ್ಕೆ ಭೀಕರ ಬರಗಾಲ ಬಂದಿದೆ. ರಾಜ್ಯದ ಪಾಲಿನ ಬರ ಪರಿಹಾರ ಕೊಡಿ ಕೊಡಿ ಅಂತ ಕೇಳಿ ಕೇಳಿ ಸಾಕಾಯ್ತು. ದೆಹಲಿಗೆ ಬಂದು ಪ್ರತಿಭಟನೆ ಕೂಡ ಮಾಡಿದೆವು. ಆದರೂ ರಾಜ್ಯದ ಪಾಲಿನ ಹಣ ಕೊಡಲಿಲ್ಲ. ನಾವು ಕಾನೂನು ಹೋರಾಟ ಶುರು ಮಾಡಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆವು. ಸುಪ್ರೀಂಕೋರ್ಟ್ ಸ್ಪಷ್ಟ ಸೂಚನೆ ಕೊಡುವವರೆಗೂ ಏಕೆ ರಾಜ್ಯಕ್ಕೆ ಒಂದು ಪೈಸೆಯನ್ನೂ ಕೊಡಲಿಲ್ಲ ಮೋದಿಯವರೇ. ಇಂಥಾ ದ್ರೋಹ ಏಕೆ ಮಾಡಿದಿರಿ ಎಂದು ಜನರೆದುರೇ ಮೋದಿಯವರನ್ನು ಪ್ರಶ್ನಿಸಿದರು.ನಾವು ಹಣ ಕೇಳಿದ್ದು ಗ್ಯಾರಂಟಿಗಲ್ಲ:
ಮೋದಿಯವರೇ ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದಿದ್ದರು. ಪ್ರತಿಭಟನೆ ಮಾಡಿ ನೂರಾರು ರೈತರು ಮೃತಪಟ್ಟರೂ ಈ ರೈತರ ಸಾವಿನ ಬಗ್ಗೆ ನಿಮಗೆ ಸಣ್ಣ ಕರುಣೆಯೂ ಬರಲಿಲ್ಲ. ಮೋದಿಯವರೇ, ಡಾಲರ್ ಎದುರು ರುಪಾಯಿ ಮೌಲ್ಯ ಕಡಿಮೆ ಮಾಡುತ್ತೇವೆ ಅಂದಿರಿ. ಆದರೆ ಈಗ ಡಾಲರ್ ಎದುರು ರುಪಾಯಿ ಮೌಲ್ಯ ಯಾವ ಮಟ್ಟಕ್ಕೆ ಏರಿಕೆ ಆಗಿದೆ ನೋಡಿ. 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದ್ರಿ. ಕೆಲಸ ಕೇಳಿದ್ರೆ ಪಕೋಡ ಮಾರಾಟ ಮಾಡಿ ಅಂದವರು ನೀವು. ಮೋದಿಯವರೇ, ಬೆಲೆ ಏರಿಕೆಗೆ ಬ್ರೇಕ್ ಹಾಕ್ತೀವಿ ಅಂತ ಭಾರತೀಯರನ್ನು ನಂಬಿಸಿ ಬಕರಾ ಮಾಡಿದಿರಿ. ಡೀಸೆಲ್, ಪೆಟ್ರೋಲ್, ಗೊಬ್ಬರ, ಗ್ಯಾಸ್ ಬೆಲೆ ಗಗನಕ್ಕೆ ಏರಿಸಿದರಲ್ಲಾ, ಇಂಥಾ ನಂಬಿಕೆ ದ್ರೋಹನಾ ಸ್ವಾಮಿ ನೀವು ಮಾಡೋದು ಎಂದು ಖಾರವಾಗಿಯೇ ಪ್ರಶ್ನಿಸಿದರು.
ರಾಜ್ಯದ 5 ಗ್ಯಾರಂಟಿ ಸಂಪೂರ್ಣ ಯಶಸ್ವಿಗೊಂಡಿವೆ. ಲೋಕಸಭೆಯಲ್ಲಿ ಕಾಂಗ್ರೆಸ್‌ಗೆ ಆಶೀರ್ವಾದ ಮಾಡಿದರೆ 20 ಗ್ಯಾರಂಟಿಗಳೂ ನಿಶ್ಚಿತ ನಿಮ್ಮ ಮನೆ ಬಾಗಿಲಿಗೆ ಬರಲಿವೆ ಎಂದು ಭರವಸೆ ನೀಡಿದ ಸಿಎಂ, ಪ್ರಧಾನಿ ನರೇಂದ್ರ ಮೋದಿ ಬಾಯಿ ಬರೀ ಸಂವಿಧಾನ ವಿರೋಧಿ ಮಾತುಗಳನ್ನೇ ಆಡುತ್ತಾರೆ. ದೇಶದ 140 ಕೋಟಿ ಜನರ ರಕ್ಷಣೆಯ ಜವಾಬ್ದಾರಿ ಅವರ ಮೇಲಿದೆ. ಕೇವಲ ಆರ್‌ಎಸ್‌ಎಸ್ ಅಜೆಂಡಾದೊಂದಿಗೆ ಹಿಂದು-ಮುಸ್ಲಿಂ ಎಂದು ಜನರ ಭಾವನೆಗಳಿಗೆ ಧಕ್ಕೆ ತಂದು ದೇಶವನ್ನು ಒಡೆದು ಹಿಂದುಸ್ಥಾನ ಮಾಡಲು ಹೊರಟಿದ್ದಾರೆ. ಇದನ್ನು ಕಾಂಗ್ರೆಸ್ ಸಹಿಸುವುದಿಲ್ಲ ಎಂದು ಕಿಡಿಕಾರಿದರು.
ಗದ್ದಿಗೌಡರಲ್ಲ ನಿದ್ದೆಗೌಡರು:
ಈ ಬಾರಿ ನೀವು ಬಿಜೆಪಿಯ ಗದ್ದಿಗೌಡರನ್ನು ಸೋಲಿಸಲೇಬೇಕು. ಕಾಂಗ್ರೆಸ್ಸಿನ ಸಂಯುಕ್ತಾ ಪಾಟೀಲ್ ಪಾರ್ಲಿಮೆಂಟಿನಲ್ಲಿ ನಿಮ್ಮ ಧ್ವನಿ ಆಗಿರ್ತಾರೆ. ಆದ್ದರಿಂದ ಗೆಲ್ಲಿಸಿ ಕಳುಹಿಸಿ ಎಂದು ಮುಖ್ಯಮಂತ್ರಿ ಕರೆ ನೀಡಿದರು
ಜೀತದಾಳಾಗಿ ಕೆಲಸ ಮಾಡುವೆ:
ವೇದಿಕೆ ಮೇಲೆ ಸಚಿವರಾದ ಆರ್.ಬಿ. ತಿಮ್ಮಾಪುರ, ಶಿವಾನಂದ ಪಾಟೀಲ, ಶಾಸಕರಾದ ಲಕ್ಷ್ಮಣ ಸವದಿ, ವಿನಯ ಕುಲಕರ್ಣಿ, ಜೆ.ಟಿ. ಪಾಟೀಲ, ಪ್ರಕಾಶ ಹುಕ್ಕೇರಿ, ವಿಜಯಾನಂದ ಕಾಶಪ್ಪನವರ, ಅಜಯಕುಮಾರ ಸರನಾಯಕ, ಬಿ.ಆರ್. ಯಾವಗಲ್, ವಿಪ ಸದಸ್ಯ ಸುನೀಲಗೌಡ ಪಾಟೀಲ, ಮಾಜಿ ಶಾಸಕರಾದ ಎಸ್.ಆರ್. ಪಾಟೀಲ, ಉಮಾಶ್ರಿ, ಆನಂದ ನ್ಯಾಮಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಉಸ್ತುವಾರಿ ಸಯ್ಯದ್, ರಕ್ಷಿತಾ ಈಟಿ, ಮುತ್ತಣ್ಣ ಬೆನ್ನೂರ, ಸುಶೀಲಕುಮಾರ ಬೆಳಗಲಿ, ಸಿದ್ದು ಕೊಣ್ಣೂರ ಸೇರಿದಂತೆ ಅನೇಕರಿದ್ದರು.
ಮುಸ್ಲಿಮರ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ ಮೋದಿ:ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ದೇಶದಲ್ಲಿ 102 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ ನಡೆದ ಬಳಿಕ ಬಿಜೆಪಿ ಸೋಲುತ್ತದೆ ಎನ್ನುವ ಸುಳಿವು ಮೋದಿಯವರಿಗೆ ಸ್ಪಷ್ಟವಾಗಿ ಸಿಕ್ಕಿದೆ. ಈ ಕಾರಣಕ್ಕೆ ಭಯಾನಕ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ಕೊಡುತ್ತಿದ್ದಾರೆ ಎನ್ನುವ ಸುಳ್ಳನ್ನು ಹೇಳುವ ಮೂಲಕ ಹಿಂದುಳಿದವರನ್ನು ಮುಸ್ಲಿಮರ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ಎಚ್ಚರ ವಹಿಸಿ ಎಂದು ಎಚ್ಚರಿಸಿದರು.ಮೋದಿ ಮೀಸಲಾತಿ ವಿಚಾರದಲ್ಲೂ ಸುಳ್ಳು ಹೇಳುತ್ತಿದ್ದಾರೆ. ಇವರಿಗೆ ಸಂವಿಧಾನದ ತಿಳಿವಳಿಕೆ ಇಲ್ಲ. ಈ ಮಟ್ಟದ ಸುಳ್ಳು ಹೇಳುವ ಇವರಿಗೆ ನಾಚಿಕೆ, ಮಾನ ಮರ್ಯಾದೆ ಏನಾದರೂ ಇದೆಯಾ ಎಂದು ಖಾರವಾಗಿ ಪ್ರಶ್ನಿಸಿದರು.
ಮಂಡಲ್ ವರದಿ ವಿರೋಧಿಸಿ ಹಿಂದುಳಿದವರ ಹಾದಿ ತಪ್ಪಿಸಿ ಆತ್ಮಹತ್ಯೆಗೆ ದೂಡಿದ್ದು ಇದೇ ಬಿಜೆಪಿ. ಹಿಂದುಳಿದವರ ಮೀಸಲಾತಿ ವಿರೋಧಿಸಿ ಕೋರ್ಟ್‌ಗೆ ಹೋಗಿದ್ದ ರಾಮಾಜೋಯಿಸ್ ಬಿಜೆಪಿಯವರು. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕೊಟ್ಟಾಗ ಅದನ್ನು ವಿರೋಧಿಸಿ ಪ್ರತಿಭಟಿಸಿದ್ದು ಇದೇ ಬಿಜೆಪಿ. ಹಿಂದುಳಿದವರ, ಮಹಿಳೆಯರ ವಿರೋಧಿಯಾಗಿರುವ ಇವರು ಈಗ ಹಿಂದುಳಿದವರನ್ನು ಮುಸ್ಲಿಮರ ವಿರುದ್ಧ ಎತ್ತಿ ಕಟ್ಟಿ ಏಕ ಕಾಲದಲ್ಲಿ ಎರಡೂ ಸಮುದಾಯಗಳ ಜೀವಗಳ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.