ಕನ್ನಡಪ್ರಭ ವಾರ್ತೆ ಲೋಕಾಪುರ
ಸಮೀಪದ ತಿಮ್ಮಾಪುರ ರನ್ನ ನಗರದಲ್ಲಿನ ರೈತರ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ರೈತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ೨೦೨೫-೨೬ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಸಂಬಂಧಿಸಿದ ಎಲ್ಲಾ ಪೂರ್ವ ಸಿದ್ಧತೆಗಳು ಕಾರ್ಖಾನೆ ನಿರ್ದೇಶಕ ಮಂಡಳಿ ಹಾಗೂ ಅಡಳಿತಾಧಿಕಾರಿಗಳ ನೇತೃತ್ವದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಬಾರಿಯ ಹಂಗಾಮಿನಲ್ಲಿ ರೈತರಿಗೆ ಹೆಚ್ಚಿನ ಅನುಕೂಲ ಒದಗಿಸಲು ಮಿಲ್ ಸಂಪೂರ್ಣವಾಗಿ ಸಜ್ಜುಗೊಂಡಿದೆ. ಕಾರ್ಖಾನೆಯ ಏಳ್ಗೆಗೆ ಪ್ರತಿಯೊಬ್ಬರು ಅವಿತರವಾಗಿ ಪ್ರಯತ್ನಿಸಿ ಹೆಚ್ಚಿನ ಕಬ್ಬು ನುರಿಸಲು ಸಹಕಾರ ನೀಡಬೇಕು ಎಂದು ಹೇಳಿದರು.
ನಿರ್ದೇಶಕರಾದ ಎಚ್.ಎಲ್. ಪಾಟೀಲ ಮಾತನಾಡಿ, ರೈತರ ಹಿತಾಶಕ್ತಿ ನಮ್ಮ ಪ್ರಮುಖ ಗುರಿಯಾಗಿದ್ದು, ಉತ್ತಮ ಸೇವೆ ಹಾಗೂ ವೇಗವಾದ ಕಬ್ಬು ನುರಿತದಿಂದ ರೈತರಿಗೆ ಲಾಭ ಕಲ್ಪಿಸುವ ಉದ್ದೇಶದಿಂದ ಬೀಳಗಿ ಸುಗರ್ಸ್ ಮಿಲ್ ಯೂನಿಟ್-೨ (ರನ್ನ ನಗರ ತಿಮ್ಮಾಪುರ) ಪೂರ್ವ ಸಿದ್ಧತೆ ಪೂರ್ಣಗೊಳಿಸಲಾಗಿದೆ ಎಂದು ಹೇಳಿದರು.ನಿರ್ದೇಶಕರಾದ ಎಚ್.ಎಲ್. ಪಾಟೀಲ, ಮಂಜುನಾಥ ಅರಳಿಕಟ್ಟಿ, ಸುರೇಶಗೌಡ ಪಾಟೀಲ, ರೈತ ಮುಖಂಡ ವಿಠ್ಠಲ ತುಮ್ಮರಮಟ್ಟಿ ಸೇರಿ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.