ಭದ್ರಾವತಿ: ನಗರದ ಹೊಸಮನೆ ನಿವಾಸಿ, ಹಿರಿಯ ಕ್ರೀಡಾಪಟು ಬಿ.ನಂಜೇಗೌಡ ಅವರು ದಕ್ಷಿಣ ಕನ್ನಡ ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಜ.13 ಮತ್ತು 14ರಂದು ಆಯೋಜಿಸಲಾಗಿದ್ದ 42ನೇ ಸ್ಟೇಟ್ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್‌ಶಿಪ್ ಪಂದ್ಯಾವಳಿಯ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಾಸ್ಟರ್ಸ್ ಅಸೋಸಿಯೇಷನ್ ವತಿಯಿಂದ ಜ.6 ಮತ್ತು 7ರಂದು ಹೊಸಕೋಟೆ ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಪಂದ್ಯಾವಳಿಯ 75 ವರ್ಷ ಮೇಲ್ಪಟ್ಟವರ ವಯೋಮಾನದ ವಿಭಾಗದ 400 ಮೀಟರ್ ಓಟದಲ್ಲಿ ಹಾಗೂ ಉದ್ದ ಜಿಗಿತದಲ್ಲಿ ತೃತೀಯ ಸ್ವಾನದೊಂದಿಗೆ ಪ್ರಶಸ್ತಿ ಪತ್ರ ಹಾಗೂ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ನಂಜೇಗೌಡ ಅವರು ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಇದುವರೆಗೂ ಸುಮಾರು 45 ಪದಕಗಳನ್ನು ಪಡೆದುಕೊಂಡಿದ್ದಾರೆ.- - - -ಡಿ15ಬಿಡಿವಿಟಿ1: ಬಿ.ನಂಜೇಗೌಡ