)
ಕನ್ನಡಪ್ರಭ ವಾರ್ತೆ ಬೆಂಗಳೂರು
ಅವರಿಗೆ 88 ವರ್ಷವಾಗಿತ್ತು. ರಾಮಚಂದ್ರಗೌಡರು ಪತ್ನಿ ಯಶೋದಾ, ಪುತ್ರ ಹಾಗೂ ಬಿಜೆಪಿ ಮುಖಂಡ ಸಪ್ತಗಿರಿ ಗೌಡ, ಪುತ್ರಿ ಕವಿತಾ ಸೇರಿದಂತೆ ಅಪಾರ ಬಂಧು-ಬಳಗ ಹಾಗೂ ಸ್ನೇಹಿತರನ್ನು ಅಗಲಿದ್ದಾರೆ.
ಕುಟುಂಬದ ಸದಸ್ಯರು ಬಸವೇಶ್ವರನಗರದ ಅವರ ನಿವಾಸದಲ್ಲಿ ಸಂಜೆ 4 ಗಂಟೆವರೆಗೂ ಮೃತದೇಹ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಶಾಸಕರು, ಮಾಜಿ ಶಾಸಕರು, ಸಚಿವರು, ಮಾಜಿ ಸಚಿವರು, ಮುಖಂಡರು ಸೇರಿದಂತೆ ಸಾವಿರಾರು ಸಂಖ್ಯೆಯ ಸಾರ್ವಜನಿಕರು ಅಂತಿಮ ದರ್ಶನ ಪಡೆದು ಕಂಬನಿ ಮಿಡಿದರು.ಸಂಜೆ 5.30ಕ್ಕೆ ಕಾಮಾಕ್ಷಿಪಾಳ್ಯದ ಪೇಟೆ ಚೆನ್ನಪ್ಪ ಎಸ್ಟೇಟ್‌ನಲ್ಲಿ ಒಕ್ಕಲಿಗ ಸಪ್ರದಾಯದಂತೆ ಸರ್ಕಾರಿ ಗೌರವದೊಂದಿಗೆ ರಾಮಚಂದ್ರಗೌಡರ ಮೃತದೇಹದ ಅಂತಿಮ ವಿಧಿ-ವಿಧಾನ ನೆರವೇರಿಸಲಾಯಿತು. ಖುದ್ದು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಗೌರವದ ಭಾಗವಾಗಿ ರಾಮಚಂದ್ರಗೌಡ ಅವರ ಪತ್ನಿ ಯಶೋದಾ ಅವರಿಗೆ ರಾಷ್ಟ್ರಧ್ವಜ ಹಸ್ತಾಂತರಿಸಿದರು. ರಾಮಚಂದ್ರಗೌಡ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.
ರಾಮಚಂದ್ರಗೌಡರು 1938ರ ಡಿ.13ರಂದು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ಜನಿಸಿದರು. ಎಂಜಿನಿಯರಿಂಗ್ ಪದವೀಧರರಾಗಿದ್ದ ಅವರು ಕಾಲಾಂತರದಲ್ಲಿ ಬೆಂಗಳೂರಿನಲ್ಲಿ ನೆಲೆನಿಂತರು. ರಾಮಚಂದ್ರಗೌಡ ಅವರು 1953ರಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ಸೇರ್ಪಡೆ ಮುಖಾಂತರ ಸಾರ್ವಜನಿಕ ಜೀವನಕ್ಕೆ ಕಾಲಿರಿಸಿದರು. 1975-77ರಲ್ಲಿ ತುರ್ತು ಪರಿಸ್ಥಿತಿ ವಿರೋಧಿ ಹೋರಾಟದಲ್ಲಿ ಭಾಗಿಯಾಗಿದ್ದರು.
ರಾಮಚಂದ್ರಗೌಡ ಅವರು ಸತತ ಐದು ಅವಧಿಗೆ(1988-2018) ವಿಧಾನ ಪರಿಷತ್ತಿನ ಸದಸ್ಯರಾಗಿ ಸೇವೆ ಸಲ್ಲಿಸಿದರು. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಸುದೀರ್ಘ ಕಾಲ ರಾಜ್ಯದಲ್ಲಿ ಪಕ್ಷ ಸಂಘಟಿಸಿದರು. ಬಿ.ಎಸ್.ಯಡಿಯೂರಪ್ಪ ಅವರಿಗೆ ಹೆಗಲಿಗೆ ಹೆಗಲು ಕೊಟ್ಟು ರಾಜ್ಯದಲ್ಲಿ ಪಕ್ಷ ಬೆಳೆಸಲು ಶ್ರಮಿಸಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್, ಆದಿಚುಂಚನಗಿರಿ ಪೀಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜ್‌ನಾಥ್ ಸಿಂಗ್, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್, ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಸಿದ್ದರಾಮಯ್ಯ, ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.