ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಮೃತರ ಅಂತ್ಯಕ್ರಿಯೆಯು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಶನಿವಾರದಂದು ನೆರವೇರಿತು. ಮೃತರು ಪತ್ನಿ, ಮೈಸೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ಪುತ್ರ ಸಚಿನ್ ಅವರನ್ನು ಅಗಲಿದ್ದಾರೆ.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದ ಸಂದರ್ಭ ಸಾಹಿತ್ಯ ಪರಿಷತ್ ಭವನ ನಿರ್ಮಿಸಲು ಅಪಾರ ಶ್ರಮ ಪಟ್ಟಿದ್ದ ಶಿವಾನಂದ್ ಅವರು, ಕಲೆ, ಸಾಹಿತ್ಯ, ನಾಟಕ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.ಸುಮಾರು ಎರಡು ದಶಕಗಳಷ್ಟು ಸುದೀರ್ಘ ಅವಧಿಯಲ್ಲಿ ವರದಿಗಾರರಾಗಿಯೂ ಸೇವೆ ಸಲ್ಲಿಸಿದ್ದರು. ಯಡೂರಿನ ಬಿಟಿಸಿಜಿ ಪ್ರಥಮ ದರ್ಜೆ ಕಾಲೇಜು ಅನ್ನು ಸರ್ಕಾರಿ ಕಾಲೇಜನ್ನಾಗಿ ಪರಿವರ್ತಿಸಲು ಶಿವಾನಂದ್ ಅವರು ಅವಿರತವಾಗಿ ಶ್ರಮಿಸಿದ್ದರು. ಪಟ್ಟಣದ ಕಿರಣ ಕಲಾವೇದಿಕೆಯಲ್ಲಿ ಸಕ್ರಿಯ ಸದಸ್ಯರಾಗಿ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಡುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು.