ಉಡುಪಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ಡಾ.ಲೊರೇನ್ಸ್ ಡಿಸೋಜಾ ನಿಧನ

KannadaprabhaNewsNetwork |  
Published : Nov 13, 2024, 12:02 AM ISTUpdated : Nov 13, 2024, 12:03 AM IST
12ಲಾರೆನ್ಸ್ | Kannada Prabha

ಸಾರಾಂಶ

ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ಡಾ.ಲೊರೇನ್ಸ್ ಸಿ. ಡಿಸೋಜಾ (75) ಅವರು ದೀರ್ಘಕಾಲದ ಅಸೌಖ್ಯದಿಂದ ಮಂಗಳವಾರ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ನಿಧನರಾದರು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ಡಾ.ಲೊರೇನ್ಸ್ ಸಿ. ಡಿಸೋಜಾ (75) ಅವರು ದೀರ್ಘಕಾಲದ ಅಸೌಖ್ಯದಿಂದ ಮಂಗಳವಾರ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ನಿಧನರಾದರು.1948 ನವೆಂಬರ್ 28ರಂದು ಶಿರ್ವ ಸಮೀಪದ ಪೆರ್ನಾಲ್‌ನಲ್ಲಿ ಜನಿಸಿದ ಅವರು 1977ರಲ್ಲಿ ಧರ್ಮಗುರುವಾಗಿ ಯಾಜಕ ದೀಕ್ಷೆಯನ್ನು ಪಡೆದರು. ಬಳಿಕ ಹಲವಾರು ಹುದ್ದೆಗಳನ್ನು ಅಲಂಕರಿಸಿ ಯಶಸ್ವಿಯಾಗಿ ನಿಭಾಯಿಸಿದ್ದರು.ನಾಲ್ಕು ದಶಕಗಳ ಸುದೀರ್ಘ ಧಾರ್ಮಿಕ ಸೇವೆಯ ಬಳಿಕ 2020ರಲ್ಲಿ ತಮ್ಮ ಅನಾರೋಗ್ಯದ ಸಮಸ್ಯೆಯಿಂದಾಗಿ ನಿವೃತ್ತಿ ಹೊಂದಿ ಕಲ್ಯಾಣಪುರದಲ್ಲಿ ನಿವೃತ್ತ ಯಾಜಕರ ನಿವಾಸ ಮಿಲಾಗ್ರಿಸ್ ಹೋಮ್‌ನಲ್ಲಿ ವಾಸ್ತವ್ಯ ಹೊಂದಿದ್ದರು.ಅವರ ನಿಧನಕ್ಕೆ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ, ಶ್ರೇಷ್ಠಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಕುಲಪತಿ ಡಾ.ರೋಶನ್ ಡಿಸೋಜಾ, ಧರ್ಮಪ್ರಾಂತ್ಯದ ಧರ್ಮಗುರುಗಳು ಹಾಗೂ ಭಕ್ತವೃಂದ ಕಂಬನಿ ಮಿಡಿದಿದ್ದಾರೆ.ಮೃತ ಲೋರೆನ್ಸ್ ಸಿ. ಡಿಸೋಜಾ ಅವರ ಅಂತ್ಯಕ್ರಿಯೆ ನ.16ರಂದು ಬೆಳಗ್ಗೆ ನಡೆಯಲಿದ್ದು, 8ಗಂಟೆಗೆ ಸಾರ್ವಜನಿಕ ದರ್ಶನ ಕಲ್ಯಾಣಪುರ ಮೌಂಟ್ ರೋಸರಿ ಚರ್ಚಿನಲ್ಲಿ ನಡೆಯಿಲಿದೆ. 9.30ಕ್ಕೆ ಬಲಿಪೂಜೆಯೊಂದಿಗೆ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಡೆನಿಸ್ ಡೆಸಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿವೇಗ ಎಂದರೆ ನಿರ್ಲಕ್ಷ್ಯದ ಚಾಲನೆ ಅಲ್ಲ: ಹೈಕೋರ್ಟ್‌
‘ಜಾಹೀರಾತಲ್ಲಿ ಗಾಂಧೀಜಿ ಬಳಕೆ ಗಾಂಧೀಜಿಯರ ಮೌಲ್ಯಗಳ ಹತ್ಯೆ’