ಸಂವೇದನಾ-2 ರಕ್ತದಾನ ಪ್ರಶಸ್ತಿ

KannadaprabhaNewsNetwork |  
Published : Mar 16, 2026, 04:15 AM IST
ಬೆಳಗಾವಿ | Kannada Prabha

ಸಾರಾಂಶ

ಬೆಂಗಳೂರಿನ ಗಾಂಧಿ ಭವನದಲ್ಲಿ ಕರ್ನಾಟಕದ ನ್ಯಾಷನಲ್ ಇಂಟಿಗ್ರೇಟೆಡ್ ಫೋರಮ್ ಆಫ್ ಆರ್ಟಿಸ್ಟ್ಸ್ಆ್ಯಂಡ್‌ ಆಕ್ಟಿವಿಸ್ಟ್ಸ್(ಎನ್‌ಐಎಫ್‌ಎಎಸಿ) ವತಿಯಿಂದ ಸಂವೇದನಾ-2 ರಕ್ತದಾನ ಪ್ರಶಸ್ತಿ ಸಮಾರಂಭದಲ್ಲಿ ಬೆಳಗಾವಿಯ ಕೆ.ಎಲ್.ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಶ್ರೀ.ಬಿ.ಎಂ.ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲಯ ಸೇರಿದಂತೆ ಎನ್‌ಎಸ್ಎಸ್ ಘಟಕ-3 ಸಂಯೋಜನಾಧಿಕಾರಿಯಾದ ಡಾ.ಸಂದೀಪ ಸಗರೆ ಅವರಿಗೆ ಪ್ರತ್ಯೇಕ ಮೂರು ಪ್ರಶಸ್ತಿಗಳು ಲಭಿಸಿದ್ದು, ವರ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್ ಇಂಗ್ಲೆಂಡ್ ವತಿಯಿಂದ ಪ್ರಶಂಸಾಪತ್ರಗಳನ್ನು ಪ್ರದಾನ ಮಾಡಿ ಗೌರವಿಸಲಾಯಿತು.

ಕನ್ನಡಪ್ರಭ ವಾರ್ತೆ ಬೆಳಗಾವಿ

ರಕ್ತದಾನ ಚಳುವಳಿಯಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಸಂಸ್ಥೆಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಜೀವ ಉಳಿಸುವ ಮಾನವೀಯ ಸೇವೆಗೆ ಗೌರವ ಸೂಚಕವಾಗಿ ವರ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್, ಇಂಗ್ಲೆಂಡ್ ವತಿಯಿಂದ ಪ್ರಶಂಸಾಪತ್ರಗಳನ್ನು ಪ್ರದಾನ ಮಾಡಲಾಯಿತು. ಕರ್ನಾಟಕದ ಎಲ್ಲ ಜಿಲ್ಲೆಗಳಿಂದ ಸುಮಾರು 214 ಪ್ರಶಸ್ತಿ ಪುರಸ್ಕೃತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜೊತೆಗೆ ಅತ್ಯುತ್ತಮ ಸಾಧನೆ ಮಾಡಿದ ಸಂಸ್ಥೆಗಳಿಗೆ ಬೆಸ್ಟ್ ಔಟ್‌ಸ್ಟ್ಯಾಂಡಿಂಗ್ ಆರ್ಗನೈಸೇಶನ್ ಪ್ರಶಸ್ತಿ ಪ್ರದಾನ ಮಾಡಲಾಯಿತು.ಕಾರ್ಯಕ್ರಮವನ್ನು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಶನ್ (ಎನ್‌ಐಎಂಎ), ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್‌), ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಹಾಗೂ ಯೆನೆಪೋಯ ವಿಶ್ವವಿದ್ಯಾಲಯಗಳ ಸಹಯೋಗದಲ್ಲಿ ಯಶಸ್ವಿಯಾಗಿ ಜರುಗಿತು.ಸಮಾರಂಭದಲ್ಲಿ ಪದ್ಮಶ್ರೀ ಪುರಸ್ಕೃತ ಡಾ.ಸಿ.ಆರ್.ಚಂದ್ರಶೇಖರ್, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಕುಲಪತಿ ಡಾ.ಗೋವಿಂದಪ್ಪ, ರಾಜ್ಯ ಎನ್‌ಎಸ್‌ಎಸ್‌ ಅಧಿಕಾರಿ ಡಾ.ಪ್ರತಾಪ್ ಲಿಂಗಯ್ಯ, ಎನ್‌ಐಎಂಎ ರಾಜ್ಯಾಧ್ಯಕ್ಷ ಡಾ.ಸಿದ್ದಪ್ಪ, ಡಾ.ಗುರುಮೂರ್ತಿ (ಬಿಎಸ್‌ಎಫ್‌), ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಎ.ಬಿ.ಶೆಟ್ಟಿ ಹಾಗೂ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್‌ನ ಪ್ರಧಾನ ಕಾರ್ಯದರ್ಶಿ ಅಂಬಾಸಿಡರ್ ಡಾ.ನೀಲಿಮಾ, ಎನ್‌ಐಎಫ್‌ಎಎಸಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಲಿಯಾ ಆರ್.ಕೆ.ಅಬ್ರಹಾಂ ಹಾಗೂ ಸಂಯುಕ್ತ ಕಾರ್ಯದರ್ಶಿ ಪ್ರಶಾಂತ್ ಉಪಸ್ಥಿತರಿದ್ದರು. ಎಲ್ಲ ಸಹಭಾಗಿಗಳು, ಸ್ವಯಂಸೇವಕರು ಹಾಗೂ ಸಂಸ್ಥೆಗಳಿಗೆ ಆಯೋಜಕರು ಕೃತಜ್ಞತೆ ಸಲ್ಲಿಸಿದರು. ಡಾ.ಅಶ್ವಿನಿ ಶೆಟ್ಟಿ ಅವರು ಎನ್‌ಐಎಫ್‌ಎಎಸಿ ಸಂಸ್ಥೆಯ ಚಟುವಟಿಕೆಗಳನ್ನು ಪರಿಚಯಿಸಿದರು. ನವಾಜ್ ಅವರು ಸಭಿಕರನ್ನು ಸ್ವಾಗತಿಸಿದರು. ಪ್ರಿಯಾ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಸಕಲ ಸೌಲಭ್ಯ
ಎಲ್ಲ ಕ್ಷೇತ್ರದಲ್ಲಿಯೂ ಛಾಪು ಮೂಡಿಸಿದ ಮಹಿಳೆಯರು