ಪ್ರತಿಮಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಗೆ ವಿಧಿಸಿ

KannadaprabhaNewsNetwork | Published : Nov 10, 2023 1:01 AM

ಸಾರಾಂಶ

ರಾಮನಗರ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಕೆ.ಎಸ್. ಪ್ರತಿಮಾ ಹತ್ಯೆ ಖಂಡಿಸಿ ಹಾಗೂ ಹತ್ಯೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು.

ರಾಮನಗರ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಕೆ.ಎಸ್. ಪ್ರತಿಮಾ ಹತ್ಯೆ ಖಂಡಿಸಿ ಹಾಗೂ ಹತ್ಯೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪದಾಧಿಕಾರಿಗಳು, ನಂತರ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ವೇಳೆ ನೌಕರರ ಸಂಘದ ಜಿಲ್ಲಾಧಿಕಾರ ಕೆ.ಸತೀಶ್ ಮಾತನಾಡಿ, ದಿನದಿಂದ ದಿನಕ್ಕೆ ಸರ್ಕಾರಿ ನೌಕರರ ಅಧಿಕಾರಿಗಳು ಹಾಗೂ ನೌಕರರ ಮೇಲೆ ಒತ್ತಡ, ಹಲ್ಲೆ ದೌರ್ಜನ್ಯದಂತಹ ಪ್ರಕರಣಗಳು ಹೆಚ್ಚಾಗುತ್ತಿದೆ. ಅತೀರೇಕದ ಹಂತ ತಲುಪಿ ಸಾರ್ವಜನಿಕ ಸೇವೆಗೆ ತನ್ನ ಬದುಕನ್ನು ಮುಡುಪಾಗಿಟ್ಟ ದಕ್ಷ ಮತ್ತು ಪ್ರಾಮಾಣಿಕ ಸರ್ಕಾರಿ ನೌಕರರ ಬದುಕು ಕೊಲೆಯಲ್ಲಿ ಅಂತ್ಯವಾಗುತ್ತಿರುವ ಧಾರುಣ ಸ್ಥಿತಿ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಹಿರಿಯ ಭೂ ವಿಜ್ಞಾನಿ ಕೆ.ಎಸ್.ಪ್ರತಿಮಾ ಅವರ ಹತ್ಯೆಯು ಇಡೀ ನಾಗರಿಕ ಸಮಾಜಕ್ಕೆ ದಿಗ್ಬ್ರಮೆ ಉಂಟು ಮಾಡಿದೆ. ಇಂತಹ ಸಮಾಜಘಾತುಕ ಕೃತ್ಯ ನಡೆಸಿರುವ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಜತೆಗೆ, ಮಹಿಳಾಧಿಕಾರಿ ಹತ್ಯೆ ಹಿಂದೆ ಇನ್ಯಾವುದೆ ಕಾಣದ ಕೈಗಳು ಇದ್ದರೆ, ಅವರ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮುಂದೆ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ದಕ್ಷ ಮತ್ತು ಪ್ರಮಾಣಿಕ ಅಧಿಕಾರಿಗಳ ಮತ್ತು ನೌಕರರ ನಿರ್ಭಯವಾಗಿ ಕರ್ತವ್ಯ ನಿರ್ವಹಿಸಲು ಅನುಕೂಲವಾಗುವಂತೆ. ಎಲ್ಲಾ ಸರ್ಕಾರಿ ನೌಕರರ ಸುರಕ್ಷತೆಗೆ ಆದ್ಯತೆ ನೀಡುವ ಪರಿಣಾಮಕಾರಿ ಕಾನೂನು ರೂಪಿಸಬೇಕು ಎಂದು ಸತೀಶ್ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡರಾದ ಶಿವಸ್ವಾಮಿ, ಪ್ರಭಾಕರ್, ಸಿದ್ದರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು.9ಕೆಆರ್ ಎಂಎನ್‌ 1.ಜೆಪಿಜಿ

ರಾಮನಗರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

Share this article