12 ವರ್ಷದ ಅಪ್ರಾಪ್ತ ಬಾಲಕನಿಗೆ ಆಮಿಷವೊಡ್ಡಿ ಪ್ರತ್ಯೇಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರನ್ನು ವಿಟ್ಲ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಕೊಳ್ನಾಡು ಗ್ರಾಮದ ಕಾಡುಮಠ ಅಳ್ಳಿಕಂಡೆ ನಿವಾಸಿ ಜವಾದ್ (32), ಸಾಲೆತ್ತೂರು ಕಟ್ಟೆ ಕಾಲೋನಿ ನಿವಾಸಿ ಶಾಹಿದ್ (32) ಹಾಗೂ ಸಾಲೆತ್ತೂರು ಕಟ್ಟೆ ನಿವಾಸಿ ರಿಯಾಝ್ ಅಲಿಯಾಸ್ ಅಬ್ದುಲ್ ಗಫೂರ್ (42) ಬಂಧಿತ ಆರೋಪಿಗಳು.
ಬಂಟ್ವಾಳ: 12 ವರ್ಷದ ಅಪ್ರಾಪ್ತ ಬಾಲಕನಿಗೆ ಆಮಿಷವೊಡ್ಡಿ ಪ್ರತ್ಯೇಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರನ್ನು ವಿಟ್ಲ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಕೊಳ್ನಾಡು ಗ್ರಾಮದ ಕಾಡುಮಠ ಅಳ್ಳಿಕಂಡೆ ನಿವಾಸಿ ಜವಾದ್ (32), ಸಾಲೆತ್ತೂರು ಕಟ್ಟೆ ಕಾಲೋನಿ ನಿವಾಸಿ ಶಾಹಿದ್ (32) ಹಾಗೂ ಸಾಲೆತ್ತೂರು ಕಟ್ಟೆ ನಿವಾಸಿ ರಿಯಾಝ್ ಅಲಿಯಾಸ್ ಅಬ್ದುಲ್ ಗಫೂರ್ (42) ಬಂಧಿತ ಆರೋಪಿಗಳು.
ಸಂತ್ರಸ್ತ ಬಾಲಕನ ದೂರಿನಂತೆ, 2026ರ ಫೆಬ್ರವರಿಯಿಂದ ಆಗಸ್ಟ್‌ವರೆಗೆ ಆರೋಪಿಗಳಾದ ಜವಾದ್, ಶಾಹಿದ್, ರಿಯಾಝ್ ಅಲಿಯಾಸ್ ಅಬ್ದುಲ್ ಗಫೂರ್ ಸೇರಿದಂತೆ ಇತರ ಮೂವರು ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಸೆ.4ರಂದು ದೂರು ನೀಡಲಾಗಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಒಟ್ಟು ಆರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಪ್ರಕರಣಗಳಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮಕ್ಕಳ ಸಹಾಯವಾಣಿ 1098ಕ್ಕೆ ಮಾಹಿತಿ ನೀಡಲಾಗಿದ್ದು, ಮಕ್ಕಳ ಕಲ್ಯಾಣ ಸಮಿತಿಯ ಅಧಿಕಾರಿಗಳು ಬಾಲಕನ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಬಾಲಕನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಪ್ರಕರಣದಲ್ಲಿ ಆರೋಪಿಗಳಾಗಿರುವ ಇತರರ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.