ಬೆಳಗಾವಿಯಲ್ಲಿ ಮಟಕಾ ದಂಧೆ ಮೇಲೆ ಪೊಲೀಸರ ಸರಣಿ ದಾಳಿ

KannadaprabhaNewsNetwork |  
Published : Nov 23, 2026, 03:15 AM IST
ಬಿಜೆಪಿ  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿನಗರದಲ್ಲಿ ಅಕ್ರಮವಾಗಿ ಮಟಕಾ ದಂಧೆ ನಡೆಸುತ್ತಿದ್ದವರ ವಿರುದ್ಧ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದು, ಮಾರ್ಕೆಟ್, ಶಹಾಪುರ ಹಾಗೂ ಮಾಳಮಾರುತಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪ್ರತ್ಯೇಕ ದಾಳಿ ನಡೆಸಿ ಒಟ್ಟು ಆರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ₹11,010 ನಗದು ಹಾಗೂ ಓಸಿ ಚೀಟಿಗಳನ್ನು ಜಪ್ತಿ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿನಗರದಲ್ಲಿ ಅಕ್ರಮವಾಗಿ ಮಟಕಾ ದಂಧೆ ನಡೆಸುತ್ತಿದ್ದವರ ವಿರುದ್ಧ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದು, ಮಾರ್ಕೆಟ್, ಶಹಾಪುರ ಹಾಗೂ ಮಾಳಮಾರುತಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪ್ರತ್ಯೇಕ ದಾಳಿ ನಡೆಸಿ ಒಟ್ಟು ಆರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ₹11,010 ನಗದು ಹಾಗೂ ಓಸಿ ಚೀಟಿಗಳನ್ನು ಜಪ್ತಿ ಮಾಡಿದ್ದಾರೆ.ನ.19ರಂದು ಮಾರ್ಕೆಟ್ ಠಾಣೆಯ ಪಿಎಸ್‌ಐ ಮಣಿಕಂಠ ಪೂಜಾರಿ ಹಾಗೂ ಸಿಬ್ಬಂದಿ ನಗರದ ಖಂಜರ ಗಲ್ಲಿಯಲ್ಲಿ ದಾಳಿ ನಡೆಸಿ, ಮಟಕಾ ಆಟ ನಡೆಸುತ್ತಿದ್ದ ಸಾಕೀಬ ಮೊಹಮ್ಮದಲಿ ಅಡ್ಡವಾಲೆ (30) ಹಾಗೂ ಫಹೀಮ ಜಲಾನಿ ಕೊತ್ವಾಲ್ ಎಂಬುವರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿತರು ಸ್ವಂತ ಲಾಭಕ್ಕಾಗಿ ಅಂಕಿ-ಸಂಖ್ಯೆಗಳ ಮೇಲೆ ಹಣ ಹಚ್ಚಿಸಿಕೊಂಡು ಮಟಕಾ ಆಟ ನಡೆಸುತ್ತಿರುವುದು ಪತ್ತೆಯಾಗಿದೆ. ಅವರಿಂದ ₹1,210 ನಗದು ಹಾಗೂ ಓಸಿ ಚೀಟಿಗಳನ್ನು ಜಪ್ತಿ ಮಾಡಲಾಗಿದೆ. ಈ ಕುರಿತು ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ನ.20ರಂದು ಶಹಾಪುರ ಠಾಣೆ ಪೊಲೀಸರು ಖಾಸಬಾಗದ ಮರಗಮ್ಮ ಗಲ್ಲಿಯ ಸಾರ್ವಜನಿಕ ಸ್ಥಳದಲ್ಲಿ ದಾಳಿ ನಡೆಸಿ, ಕಪಿಲೇಶ್ವರ ಕಾಲನಿಯ ಸಂತೋಷ ನಾರಾಯಣ ಕನುಕಲಿ (53) ಹಾಗೂ ಶುಭಂ ಸಂತೋಷ ಕನುಕಲಿ ಎಂಬುವರನ್ನು ವಶಕ್ಕೆ ಪಡೆದಿದ್ದಾರೆ. ಅವರಿಂದ ₹2,380 ನಗದು ಹಾಗೂ ಓಸಿ ಚೀಟಿಗಳನ್ನು ಜಪ್ತಿ ಮಾಡಿದ್ದಾರೆ. ಮಟಕಾದಿಂದ ಸಂಗ್ರಹಿಸಿದ ಹಣವನ್ನು ಗಜಾನನ ಗರಡ ಎಂಬಾತನಿಗೆ ನೀಡುತ್ತಿರುವುದಾಗಿ ವಿಚಾರಣೆ ವೇಳೆ ತಿಳಿದುಬಂದಿದ್ದು, ಈ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಇದೇ ದಿನ ಮಾಳಮಾರುತಿ ಠಾಣೆ ಪೊಲೀಸರು ಯಮುನಾಪುರ ಗ್ರಾಮದ ಕೊಲ್ಲಾಪುರ ಹೋಟೆಲ್ ಬಳಿ ದಾಳಿ ನಡೆಸಿ, ಮಟಕಾ ಆಡುತ್ತಿದ್ದ ಯಮುನಾಪುರದ ಹೊಳೆಪ್ಪ ಶಂಕರ ಗಸ್ತಿ (32) ಹಾಗೂ ಕಂಗ್ರಾಳಿಯ ಅರ್ಜುನ ಪರಶುರಾಮ ಕೋಳಿ ಎಂಬುವರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿತರಿಂದ ₹7,420 ನಗದು ಹಾಗೂ ಓಸಿ ಚೀಟಿಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಈ ಪ್ರತ್ಯೇಕ ಕಾರ್ಯಾಚರಣೆಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ದಾಳಿ ನಡೆಸಿದ ಪಿಎಸ್‌ಐಗಳಾದ ಮಣಿಕಂಠ ಪೂಜಾರಿ, ಹೊನ್ನಪ್ಪ ತಳವಾರ, ಆನಂದ ಆದಗೊಂಡ ಹಾಗೂ ಸಿಬ್ಬಂದಿಯ ಕಾರ್ಯವನ್ನು ಪೊಲೀಸ್ ಆಯುಕ್ತರು ಮತ್ತು ಡಿಸಿಪಿಗಳು ಶ್ಲಾಘಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬರದಲ್ಲಿ ಆಸರೆಯಾದ ಕಳಸಕೊಪ್ಪ ಕೆರೆ
ವಿವಾದಿತ ಕೃತಿ ಮುಟ್ಟುಗೋಲಿಗೆ ಮಹಾಸಭೆ ಆಗ್ರಹ