ಮಾದಕ ದ್ರವ್ಯ ಸೇವನೆಯಿಂದ ಗಂಭೀರ ಪರಿಣಾಮ

KannadaprabhaNewsNetwork |  
Published : Aug 09, 2026, 02:30 AM IST
ಪೋಟೊ8.5ಕೊಪ್ಪಳ ನಗರದ ಅರುಣೋದಯ ವ್ಯಸನಮುಕ್ತ ಕೇಂದ್ರದಲ್ಲಿ ಮೇರಾ ಯುವ ಭಾರತ ಕೊಪ್ಪಳ, ಯುವ ಧ್ವನಿ ಸಂಸ್ಥೆ ಮೋರನಹಳ್ಳಿ ಹಾಗೂ ಮಹಿಳಾ ಧ್ವನಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನವನ್ನು ಆಚರಿಸಲಾಯಿತು. | Kannada Prabha

ಸಾರಾಂಶ

2025ರ ವಿಶ್ವ ಮಾದಕ ದ್ರವ್ಯ ವರದಿ ಪ್ರಕಾರ ಜಗತ್ತಿನಾದ್ಯಂತ ಸುಮಾರು 316 ದಶಲಕ್ಷ ಜನರು ಮಾದಕ ದ್ರವ್ಯ ಬಳಸಿದ್ದಾರೆ

ಕೊಪ್ಪಳ: ನಗರದ ಅರುಣೋದಯ ವ್ಯಸನಮುಕ್ತ ಕೇಂದ್ರದಲ್ಲಿ ಮೇರಾ ಯುವ ಭಾರತ ಕೊಪ್ಪಳ, ಯುವ ಧ್ವನಿ ಸಂಸ್ಥೆ ಮೋರನಹಳ್ಳಿ ಹಾಗೂ ಮಹಿಳಾ ಧ್ವನಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ಯುವ ಅಧಿಕಾರಿ ಮೇಘಾ ಜಿ.ಕೆ.ಮಾತನಾಡಿ, ಜೂ.26ರಂದು ವಿಶ್ವಾದ್ಯಂತ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನ ಆಚರಿಸಲಾಗುತ್ತದೆ. ಮಾದಕ ದ್ರವ್ಯ ಸೇವನೆಯಿಂದ ವ್ಯಕ್ತಿಯ ಆರೋಗ್ಯ ಮಾತ್ರವಲ್ಲದೆ ಕುಟುಂಬ ಹಾಗೂ ಸಮಾಜದ ಮೇಲೂ ಗಂಭೀರ ಪರಿಣಾಮ ಬೀರುತ್ತದೆ ಎಂದರು.

2025ರ ವಿಶ್ವ ಮಾದಕ ದ್ರವ್ಯ ವರದಿ ಪ್ರಕಾರ ಜಗತ್ತಿನಾದ್ಯಂತ ಸುಮಾರು 316 ದಶಲಕ್ಷ ಜನರು ಮಾದಕ ದ್ರವ್ಯ ಬಳಸಿದ್ದಾರೆ. ಈ ಪೈಕಿ ಸುಮಾರು 64 ದಶಲಕ್ಷ ಜನರು ಮಾದಕ ದ್ರವ್ಯ ಬಳಕೆಯಿಂದ ಉಂಟಾಗುವ ಅಸ್ವಸ್ಥತೆಗಳಿಂದ ಬಳಲುತ್ತಿದ್ದಾರೆ. ಈ ಅಂಕಿ-ಅಂಶಗಳು ವ್ಯಸನದ ವಿರುದ್ಧ ಜಾಗೃತಿ, ತಡೆಗಟ್ಟುವಿಕೆ ಹಾಗೂ ಸೂಕ್ತ ಚಿಕಿತ್ಸೆಯ ಅಗತ್ಯ ಎತ್ತಿ ತೋರಿಸುತ್ತವೆ ಎಂದು ಹೇಳಿದರು.

ಮಾದಕ ದ್ರವ್ಯಗಳಿಗೆ ಇಲ್ಲ ಎನ್ನೋಣ:

ವ್ಯಸನ ಮುಕ್ತ ಭಾರತ ನಿರ್ಮಿಸೋಣ ಎಂಬ ಸಂಕಲ್ಪದೊಂದಿಗೆ ಪ್ರತಿಯೊಬ್ಬರೂ ಸಮಾಜದಲ್ಲಿ ಜಾಗೃತಿ ಮೂಡಿಸಲು ಕೈಜೋಡಿಸಬೇಕು. ವಿಶೇಷವಾಗಿ ಯುವಜನರು ದುಶ್ಚಟಗಳಿಂದ ದೂರವಿದ್ದು ಆರೋಗ್ಯಕರ ಬದುಕಿನತ್ತ ಹೆಜ್ಜೆ ಹಾಕಬೇಕು ಎಂದು ಕರೆ ನೀಡಿದರು.

ಬಿ.ಎನ್.ಹೊರಪೇಟಿ ಮಾತನಾಡಿ, ವ್ಯಸನವು ವ್ಯಕ್ತಿಯ ಆರೋಗ್ಯ, ಕುಟುಂಬದ ನೆಮ್ಮದಿ ಹಾಗೂ ಸಮಾಜದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತದೆ. ಮಾದಕ ದ್ರವ್ಯಗಳಿಂದ ದೂರವಿದ್ದು ಆರೋಗ್ಯಕರ, ಶಿಸ್ತುಬದ್ಧ ಹಾಗೂ ಜವಾಬ್ದಾರಿಯುತ ಜೀವನ ನಡೆಸಬೇಕು. ಯುವಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ವ್ಯಸನಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.

1098 ಜಿಲ್ಲಾ ಸಂಯೋಜಕ ಶರಣಪ್ಪ ಸಿಂಗನಾಳ ಮಾತನಾಡಿ, ವ್ಯಸನಕ್ಕೆ ಬಲಿಯಾದವರ ಕುಟುಂಬಗಳು ನೆಮ್ಮದಿ ಕಳೆದುಕೊಳ್ಳುವುದಲ್ಲದೆ ಕುಟುಂಬದ ಸದಸ್ಯರು ಹಾಗೂ ಮಕ್ಕಳು ಮಾನಸಿಕ ಒತ್ತಡಕ್ಕೆ ಒಳಗಾಗುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಹೀಗಾಗಿ ಪ್ರತಿಯೊಬ್ಬರೂ ದುಶ್ಚಟಗಳಿಂದ ದೂರವಿದ್ದು ಆರೋಗ್ಯಕರ ಬದುಕಿನತ್ತ ಹೆಜ್ಜೆ ಇಡಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ವ್ಯಸನ ಬೇಡ–ಆರೋಗ್ಯಕರ ಜೀವನವೇ ನಮ್ಮ ಗುರಿ. ಮಾದಕ ದ್ರವ್ಯಗಳಿಗೆ ಇಲ್ಲ ಎನ್ನೋಣ, ವ್ಯಸನಮುಕ್ತ ಭಾರತ ಕಟ್ಟೋಣ ಎಂಬ ಘೋಷ ವಾಕ್ಯ ಕೂಗುವ ಮೂಲಕ ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಶಿಕ್ಷಕಿ ಗೀತಾಂಜಲಿ, ಕುಬೇಂದ್ರಾಚಾರ್, ಶಿವರಾಜ್ ಕಂಬಳಿ, ಶರಣು ವಿವೇಕಿ, ಚಿಕಿತ್ಸಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡ ನಾಡು-ನುಡಿ ನಮ್ಮ ಅಸ್ಮಿತೆಯ ಪ್ರತೀಕ: ಬಿ.ಎನ್. ವಾಸರೆ
ಭಾರತ ಸೇವಾದಳದಿಂದ ಉತ್ತಮ ನಾಗರಿಕರ ಸೃಷ್ಟಿ: ಎಂ.ಬಿ. ಪೈ