ಕನ್ನಡಪ್ರಭ ವಾರ್ತೆ ಶ್ರೀಮಂಗಲ
ವಿಶೇಷ ಜನಾಂಗ:
ಮುಖ್ಯ ಅತಿಥಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ ಗುಡ್ಡಗಾಡು ಪ್ರದೇಶದಲ್ಲಿ ತಮ್ಮ ನಾಗರಿಕತೆ ಹಾಗೂ ಬದುಕನ್ನು ಕಂಡುಕೊಂಡ ಒಂದು ವಿಶೇಷ ಜನಾಂಗ ಕೊಡವರಾಗಿದ್ದು, ಇತರ ಜನಾಂಗ ಮತ್ತು ಧರ್ಮಕ್ಕಿಂತ ತಮ್ಮ ಸಂಸ್ಕೃತಿ, ಆಚರಣೆಗಳು ವಿಭಿನ್ನವಾಗಿರುವ ಪರಂಪರೆಯನ್ನು ಹೊಂದಿರುವ ಜನಾಂಗವಾಗಿದೆ ಎಂದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಟಿ. ಶೆಟ್ಟಿಗೇರಿ ಕೊಡವ ಸಮಾಜದ ಅಧ್ಯಕ್ಷ ಕೈಬುಲೀರ ಹರೀಶ್ ಅಪ್ಪಯ್ಯ ಅವರು 10 ದಿನದ ಕಾರ್ಯಕ್ರಮ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮ ನಿರಾಯಾಸವಾಗಿ ಆಗಿದೆ. ಪ್ರತಿ ವರ್ಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಾಂಸ್ಕೃತಿಕ ಸಮಿತಿ ಸಂಚಾಲಕ ಚೆಟ್ಟಂಗಡ ರವಿ ಸುಬ್ಬಯ್ಯ ಅವರು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಮುಂದಿನ ವರ್ಷ 10ನೇ ವರ್ಷದ ಕಾರ್ಯಕ್ರಮವಿದ್ದು ಕೊಡವಾಮೆಗೆ ಉತ್ತಮ ಸಂದೇಶ ನೀಡುವ ಕಾರ್ಯಕ್ರಮ ನೀಡುವಂತೆ ಎಲ್ಲರಲ್ಲಿ ಕೋರಿದರು. 10 ದಿನದ ಕಾರ್ಯಕ್ರಮದಲ್ಲಿ ಪ್ರತಿದಿನ ನೂರಾರು ಜನರು ಪಾಲ್ಗೊಂಡಿದ್ದು ಅವರಿಗೆಲ್ಲರಿಗೂ ಊಟದ ವ್ಯವಸ್ಥೆ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಉಪಾಧ್ಯಕ್ಷ ಮಚ್ಚಮಾಡ ಸುಮಂತ್ ಅವರು ಮಾತನಾಡಿ 1984ರಲ್ಲಿ ತುಂಬಾ ಆರ್ಥಿಕ ಕಷ್ಟವಿದ್ದ ಕಾಲದಲ್ಲಿ ನಮ್ಮ ಹಿರಿಯರು ಈ ಕೊಡವ ಸಮಾಜವನ್ನು ಸ್ಥಾಪನೆ ಮಾಡಲು ಮುಂದಾದರು. ನಂತರ ನ್ಯಾಯ ಪೀಠವನ್ನು ಸಹ ಸ್ಥಾಪನೆ ಮಾಡಲಾಯಿತು. ನಂತರದಲ್ಲಿ ಬಹಳಷ್ಟು ಆರ್ಥಿಕ ಸಂಕಷ್ಟ ದೊಂದಿಗೆ ಬಹಳಷ್ಟು ದಾನಿಗಳ ನೆರವಿನಿಂದ ಹಿರಿಯರ ಶ್ರಮ ಸೇವೆ ಯೊಂದಿಗೆ ಟಿ. ಶೆಟ್ಟಿಗೇರಿ ಕೊಡವ ಸಮಾಜದ ಬೆಳೆದು ಬಂದ ದಾರಿಯನ್ನು ಅವರು ಸ್ಮರಿಸಿದರು.
ವೇದಿಕೆಯಲ್ಲಿ ಟಿ. ಶೆಟ್ಟಿಗೇರಿ ರೂಟ್ಸ್ ವಿದ್ಯಾಸಂಸ್ಥೆ ಮುಖ್ಯ ಶಿಕ್ಷಕಿ ನೆಲ್ಲೀರ ಪೂರ್ಣಿಮಾ, ಪೆರುಮಾಳೇಶ್ವರ ಆಟೋ ಮಾಲೀಕ ಮತ್ತು ಚಾಲಕರ ಸಂಘದ ಅಧ್ಯಕ್ಷ ಚೊಟ್ಟೆಯಂಡ ಮಾಡ ಪ್ರವೀಣ್ ಮೇದಪ್ಪ, ಸಂಭ್ರಮ ಮಹಿಳಾ ಕ್ರೀಡೆ ಮತ್ತು ಸಾಂಸ್ಕೃತಿಕ ಸಂಸ್ಥೆ ಕಾರ್ಯದರ್ಶಿ ತೀತಿರ ಲೀನಾ ಸತೀಶ್, ಟಿ.ಶೆಟ್ಟಿಗೇರಿ ಕೊಡವ ಸಮಾಜದ ಪೊಮ್ಮಕ್ಕಡ ಕೂಟ ಅಧ್ಯಕ್ಷ ಕೋಟ್ರಮಾಡ ರೇಷ್ಮಾ ಕಾರ್ಯಪ್ಪ, ಕೊಡವ ಎಳ್ತ್ ಕಾರಡ ಕೂಟದ ಅಧ್ಯಕ್ಷ ಚೆಟ್ಟಂಗಡ ರವಿ ಸುಬ್ಬಯ್ಯ, ಕೊಡವ ಸಮಾಜದ ಕಾರ್ಯದರ್ಶಿ ಕೋಟ್ರಮಾಡ ಸುಮಂತ್ ಮಾದಪ್ಪ, ಜಂಟಿ ಕಾರ್ಯದರ್ಶಿ ಆಂಡಮಾಡ ಸತೀಶ್ ವಿಶ್ವನಾಥ್, ಖಜಾಂಚಿ ಚಂಗುಲಂಡ ಸತೀಶ್, ಕ್ರೀಡಾ ಸಂಚಾಲಕ ತಡಿಯಂಗಡ ಶಮ್ಮಿ ಸುಬ್ಬಯ್ಯ, ನಿರ್ದೇಶಕರುಗಳಾದ ಚಂಗುಲಂಡ ಅಶ್ವಿನಿ ಸತೀಶ್, ಮುಕ್ಕಾಟಿರ ಸಂದೀಪ್, ಕರ್ನಂಡ ರೂಪದೇವಯ್ಯ, ತೀತಿರ ಅನಿತ ಸುಬ್ಬಯ್ಯ, ಬಾದುಮಂಡ ವಿಷ್ಣು ಕಾರ್ಯಪ್ಪ, ಬೊಳ್ಳೇರ ಅಪ್ಪುಟ ಪೊನ್ನಪ್ಪ ಹಾಜರಿದ್ದರು.
ವಿಶೇಷ ಜನಾಂಗ:
ಅಧ್ಯಕ್ಷತೆ ವಹಿಸಿ ಮಾತನಾಡಿದ ಟಿ. ಶೆಟ್ಟಿಗೇರಿ ಕೊಡವ ಸಮಾಜದ ಅಧ್ಯಕ್ಷ ಕೈಬುಲೀರ ಹರೀಶ್ ಅಪ್ಪಯ್ಯ ಅವರು 10 ದಿನದ ಕಾರ್ಯಕ್ರಮ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮ ನಿರಾಯಾಸವಾಗಿ ಆಗಿದೆ. ಪ್ರತಿ ವರ್ಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಾಂಸ್ಕೃತಿಕ ಸಮಿತಿ ಸಂಚಾಲಕ ಚೆಟ್ಟಂಗಡ ರವಿ ಸುಬ್ಬಯ್ಯ ಅವರು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಮುಂದಿನ ವರ್ಷ 10ನೇ ವರ್ಷದ ಕಾರ್ಯಕ್ರಮವಿದ್ದು ಕೊಡವಾಮೆಗೆ ಉತ್ತಮ ಸಂದೇಶ ನೀಡುವ ಕಾರ್ಯಕ್ರಮ ನೀಡುವಂತೆ ಎಲ್ಲರಲ್ಲಿ ಕೋರಿದರು. 10 ದಿನದ ಕಾರ್ಯಕ್ರಮದಲ್ಲಿ ಪ್ರತಿದಿನ ನೂರಾರು ಜನರು ಪಾಲ್ಗೊಂಡಿದ್ದು ಅವರಿಗೆಲ್ಲರಿಗೂ ಊಟದ ವ್ಯವಸ್ಥೆ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದು ಸಂತಸ ವ್ಯಕ್ತಪಡಿಸಿದರು.