ಗೋವಿಂದದ್ವಯರಿಗೆ ಸರ್ಪಂಗಳ ಪ್ರಶಸ್ತಿ ಪ್ರದಾನ

KannadaprabhaNewsNetwork |  
Published : Oct 28, 2024, 01:25 AM IST
27ಗೋವಿಂದ | Kannada Prabha

ಸಾರಾಂಶ

ಕಟೀಲು ಮೇಳದ ಹಿರಿಯ ಭಾಗವತರಾದ ಪದ್ಯಾಣ ಗೋವಿಂದ ಭಟ್ ಅವರನ್ನು ಸರ್ಪಂಗಳ ಸುಬ್ರಮಣ್ಯ ಭಟ್ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಚೌಕಿ ಸಹಾಯಕ ಕಾಟುಕುಕ್ಕೆ ಗೋವಿಂದ ನಾಯ್ಕ ಅವರಿಗೆ ಸರ್ಪಂಗಳ ಕಲಾ ಸೇವಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಜೀವ ವಿಮಾ ಅಧಿಕಾರಿಗಳಾಗಿ ನಿವೃತ್ತರಾಗಿದ್ದ, ಕಲಾಪ್ರೇಮಿ ಸರ್ಪಂಗಳ ಸುಬ್ರಮಣ್ಯ ಭಟ್ ಸ್ಮರಣೆಯಲ್ಲಿ ಪ್ರತೀ ವರ್ಷ ಆಯೋಜಿಸುತ್ತಾ ಬಂದ ಸರ್ಪಂಗಳ ಯಕ್ಷೋತ್ಸವ ಈ ಬಾರಿ ಭಾನುವಾರ ಯಕ್ಷಗಾನ ಕಲಾರಂಗದ ಐ.ವೈ.ಸಿ. ಸಭಾಂಗಣದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಕಟೀಲು ಮೇಳದ ಹಿರಿಯ ಭಾಗವತರಾದ ಪದ್ಯಾಣ ಗೋವಿಂದ ಭಟ್ ಅವರನ್ನು ಸರ್ಪಂಗಳ ಸುಬ್ರಮಣ್ಯ ಭಟ್ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಚೌಕಿ ಸಹಾಯಕರಾಗಿ ಐದು ದಶಕ ಸೇವೆ ಸಲ್ಲಿಸಿದ ಕಾಟುಕುಕ್ಕೆ ಗೋವಿಂದ ನಾಯ್ಕ ಅವರಿಗೆ ಸರ್ಪಂಗಳ ಕಲಾ ಸೇವಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಈರ್ವರನ್ನು ಸನ್ಮಾನಿಸಿದರು. ಕಾರ್ಯಕ್ರಮದ ಪ್ರಾಯೋಜಕರಾದ ಡಾ. ನರೇಂದ್ರ ಶೆಣೈ ಮತ್ತು ಡಾ. ಶೈಲಜಾ ಭಟ್ ಉಪಸ್ಥಿತರಿದ್ದರು.

ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರ್ವಹಿಸಿದ್ದರು. ಬಳಿಕ ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರಿಂದ ಕನಕಾಂಗಿ ಕಲ್ಯಾಣ ಯಕ್ಷಗಾನ ಪ್ರದರ್ಶನಗೊಂಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ