ಪೌರ ಕಾರ್ಮಿಕರ ಸೇವೆ ಅನನ್ಯ: ಅನ್ನಪೂರ್ಣ ತುಕಾರಾಂ

KannadaprabhaNewsNetwork |  
Published : Sep 24, 2025, 01:00 AM IST
 ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಶಾಸಕಿ ಅನ್ನಪೂರ್ಣ ಈ ತುಕರಾಂ ಉದ್ಘಾಟಿಸಿದರು. | Kannada Prabha

ಸಾರಾಂಶ

ಪೌರ ಕಾರ್ಮಿಕರ ಭವನ ನಿರ್ಮಾಣಕ್ಕೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

ಸಂಡೂರು: ಸ್ವಚ್ಛತೆಯನ್ನು ಕಾಪಾಡುವ ಜೊತೆಗೆ ನಾಗರಿಕರಿಗೆ ಹಲವು ರೀತಿಯ ಸೌಲಭ್ಯವನ್ನು ಕಲ್ಪಿಸುವಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಪೌರ ಕಾರ್ಮಿಕರ ಸೇವೆ ಅನನ್ಯ ಎಂದು ಶಾಸಕಿ ಅನ್ನಪೂರ್ಣ ಈ ತುಕರಾಂ ಅಭಿಪ್ರಾಯಪಟ್ಟರು.

ಪಟ್ಟಣದ ಪುರಸಭೆ ಕಚೇರಿ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪೌರ ಕಾರ್ಮಿಕರ ಭವನ ನಿರ್ಮಾಣದ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಶಾಸಕರು, ಪೌರ ಕಾರ್ಮಿಕರ ಭವನ ನಿರ್ಮಾಣಕ್ಕೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

ಉಪನ್ಯಾಸ ನೀಡಿದ ಬಸವರಾಜ ಬಣಕಾರ, ನಾಗರಿಕತೆ ಆರಂಭವಾದಾಗಿನಿAದಲೇ ಪೌರ ಕಾರ್ಮಿಕರ ಸೇವೆ ಆರಂಭವಾಗಿದೆ. ಅವರ ಸೇವೆ ಶ್ಲಾಘನೀಯವಾಗಿದೆ. ಕೋಳಿ ಕೂಗುವ ಮುನ್ನವೇ ಅವರ ಸೇವೆ ಆರಂಭವಾಗಲಿದೆ. ಪೌರ ಕಾರ್ಮಿಕರಿಗೆ ಅಗತ್ಯ ಪರಿಕರಗಳನ್ನು ಒದಗಿಸಬೇಕು. ಹೆಲ್ತ್ ಕಿಟ್‌ಗಳನ್ನು ನೀಡಬೇಕು. ಅವರಿಗೆ ವಿಮಾ ಸೌಲಭ್ಯವನ್ನು ಕಲ್ಪಿಸಬೇಕು ಎಂದರಲ್ಲದೆ, ಸಾರ್ವಜನಿಕರು ಕಸವನ್ನು ಹಸಿ ಕಸ ಹಾಗೂ ಒಣ ಕಸ ಎಂದು ವಿಂಗಡಿಸಿ, ಕಸ ಸಂಗ್ರಹ ವಾಹನದಲ್ಲಿ ಹಾಕಬೇಕು ಎಂದು ತಿಳಿಸಿದರು.

ಪುರಸಭೆ ಅಧ್ಯಕ್ಷ ಎಸ್. ಸಿರಾಜ್ ಹುಸೇನ್ ಅವರು ಪೌರ ಕಾರ್ಮಿಕರ ಸೇವೆಯನ್ನು ಶ್ಲಾಘಿಸಿದರಲ್ಲದೆ, ಅವರ ಬೇಡಿಕೆಗಳನ್ನು ಈಡೇರಿಸಲು ಕ್ರಮಕೈಗೊಳ್ಳಲಾಗುವುದೆಂದರು.

ಪುರಸಭೆಯ ಮುಖ್ಯಾಧಿಕಾರಿ ಬಿ. ವಿನಯಕುಮಾರ್ ಗೌಡ ಅವರು ಮಾತನಾಡಿದರು. ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಪೌರ ಕಾರ್ಮಿಕರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಶಿವರಂಜನಿ ಹಾಗೂ ಕವಿತಾ ಪ್ರಾರ್ಥಿಸಿದರು. ಪ್ರಭುರಾಜ ಹಗರಿ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಪುರಸಭೆಯ ಉಪಾಧ್ಯಕ್ಷೆ ಎಂ.ಸಿ. ಲತಾ, ಸದಸ್ಯರು, ಪೌರ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ, ಉಪಾಧ್ಯಕ್ಷ ಟಿ. ವೆಂಕಟೇಶ, ಖಜಾಂಚಿ ಗಿರಿಯಪ್ಪ ಸೇರಿದಂತೆ ಇನ್ನಿತರೆ ಪದಾಧಿಕಾರಿಗಳು, ಸದಸ್ಯರು, ಪುರಸಭೆಯ ಸಿಬ್ಬಂದಿ ಉಪಸ್ಥಿತರಿದ್ದರು.

PREV

Recommended Stories

ಪಾಲಿಕೆಗಳ ಚುನಾವಣೆ ಮುಗಿವವರೆಗೆ ಬೆಂಗಳೂರಲ್ಲಿ ಮತಪಟ್ಟಿ ಪರಿಷ್ಕರಣೆ ಮುಂದೂಡಿ : ಕೇಂದ್ರ ಆಯುಕ್ತರಿಗೆ ಪತ್ರ
ಡ್ರಾಪ್‌ ನೆಪದಲ್ಲಿ ಗುತ್ತಿಗೆದಾರನ ದರೋಡೆ ಮಾಡಿದ್ದ ನಾಲ್ವರ ಬಂಧನ