ಸಾಮಾನ್ಯ ಸಂಸದನಾಗಿ ಕ್ಷೇತ್ರದ ಅಭಿವೃದ್ಧಿಗೆ ಸೇವೆ: ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಜೋಶಿ

KannadaprabhaNewsNetwork |  
Published : Apr 04, 2024, 01:01 AM IST
ಪೊಟೋ ಪೈಲ್ ನೇಮ್ ೩ಎಸ್‌ಜಿವಿ೩ ತಾಲೂಕಿನ ಕೋಣನಕೇರಿ ಗ್ರಾಮದಲ್ಲಿ ದುಂಡಶಿ ಮಹಾಶಕ್ತಿ ಕೇಂದ್ರದ ಬೂತ್ ಮಟ್ಟದ ಪ್ರಮುಖರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಧಾರವಾಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಷಿ ಮಾತನಾಡಿದರು | Kannada Prabha

ಸಾರಾಂಶ

ಶಿಗ್ಗಾಂವಿ- ಸವಣೂರ ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ೬ ಪಥ ಸೇರಿದಂತೆ ಒಟ್ಟು ೩೯ ರಸ್ತೆಗಳನ್ನು ಅಭಿವೃದ್ದಿ ಮಾಡಲಾಗಿದೆ. ದೇಶದಲ್ಲಿ ಬದಲಾವಣೆಯಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.

ಕನ್ನಡಪ್ರಭ ವಾರ್ತೆ ಶಿಗ್ಗಾಂವಿ

ನನ್ನ ಕ್ಷೇತ್ರ ವ್ಯಾಪ್ತಿಯ ಜನರ ಭಾವನೆಗೆ ಬೆಲೆ ಕೊಡುವ ಒಬ್ಬ ಸಾಮಾನ್ಯ ಸಂಸದನಾಗಿ ಕಳೆದ ೩೦ ವರ್ಷಗಳಿಂದ ರಾಜಕೀಯ ಸೇವೆಯಲ್ಲಿದ್ದೇನೆ ಎಂದು ಧಾರವಾಡ ಲೋಕಸಭಾ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.

ತಾಲೂಕಿನ ಕೋಣನಕೇರಿ ಗ್ರಾಮದಲ್ಲಿ ದುಂಡಶಿ ಮಹಾಶಕ್ತಿ ಕೇಂದ್ರದ ಬೂತ್ ಮಟ್ಟದ ಪ್ರಮುಖರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

೫ ಲಕ್ಷ ಕೋಟಿಯಲ್ಲಿ ಜೆಜೆಎಂ ಯೋಜನೆ ಪ್ರಗತಿಯಲ್ಲಿದೆ. ಮೋದಿಯವರ ನೀರಿನ ಅಭಾವ ನೀಗಿಸುವ ಪರಿಲಕ್ಪನೆಯಿಂದ ಇದು ಸಾಧ್ಯವಾಗಿದೆ. ಶಿಗ್ಗಾಂವಿ- ಸವಣೂರ ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ೬ ಪಥ ಸೇರಿದಂತೆ ಒಟ್ಟು ೩೯ ರಸ್ತೆಗಳನ್ನು ಅಭಿವೃದ್ದಿ ಮಾಡಲಾಗಿದೆ. ದೇಶದಲ್ಲಿ ಬದಲಾವಣೆಯಾಗುತ್ತಿದೆ ಎಂದರು.

ಬಿಜೆಪಿ ಮುಖಂಡ ಶಶಿಧರ ಯಲಿಗಾರ ಮಾತನಾಡಿ, ನಾನು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ೧೪ ಸಾವಿರ ಮತಗಳನ್ನು ಪಡೆದಿದ್ದು, ಇದನ್ನು ಸೇರಿಸಿ ೬೦ ಸಾವಿರ ಮತಗಳ ಅಂತರದಿಂದ ಜೋಶಿ ಅವರನ್ನು ಮತ್ತೊಮ್ಮೆ ಗೆಲ್ಲಿಸಿ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯವರನ್ನಾಗಿ ಮಾಡಲು ಪಣ ತೊಟ್ಟಿದ್ದೇನೆ ಎಂದರು.

ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಮಾತನಾಡಿ, ಕೇಂದ್ರ ಬಿಜೆಪಿ ಸರಕಾರ ಅಭಿವೃದ್ದಿ ಮಾಡುತ್ತಿದ್ದರೆ, ರಾಜ್ಯ ಕಾಂಗ್ರೆಸ್ ಸರಕಾರದ ದುರಾಡಳಿತ ಮುಂದುವರಿದಿದೆ.

ಭಾಜಪ ತಾಲೂಕಾಧ್ಯಕ್ಷ ಶಿವಾನಂದ ಮ್ಯಾಗೇರಿ ಮಾತನಾಡಿ, ಮೋದಿಯವರ ದೂರದೃಷ್ಟಿಯ ಸುಭದ್ರ ಭಾರತ ನಿರ್ಮಾಣಕ್ಕೆ ಮೋದಿ ಅವರನ್ನು ಜೋಶಿಯವರ ಮೂಲಕ ಬೆಂಬಲಿಸೋಣ. ವಿಕಸಿತ ಭಾರತಕ್ಕೆ ಮೋದಿಯವರನ್ನು ಬೆಂಬಲಿಸುವ ಜೊತೆಗೆ ಪ್ರಹ್ಲಾದ್‌ ಜೋಶಿ ಅವರನ್ನು ಗೆಲ್ಲಿಸೋಣ ಎಂದರು.

ಈ ಸಂದರ್ಭದಲ್ಲಿ ತಿಪ್ಪಣ್ಣ ಸಾತಣ್ಣವರ, ಶೋಭಾ ನಿಸ್ಸಿಮಗೌಡ್ರ, ಸುಭಾಸ್ ಚೌಹಾಣ್, ಡಾ. ಮಲ್ಲೇಶಪ್ಪ ಹರಿಜನ, ಕೊಣನಕೇರಿ ಗ್ರಾಪಂ ಸದಸ್ಯ ಬಸವರಾಜ ನಾರಾಯಣಪೂರ, ಕುಮಾರ ಮಾಸನಕಟ್ಟಿ, ಬಸವಣ್ಣೇವ್ವ ಶಿಗ್ಗಾಂವಿ, ಹನುಮವ್ವ ದೇವಗಿರಿ, ಹನುಮಂತಪ್ಪ ತೆಮ್ಮಿನಕೊಪ್ಪ, ಚನ್ನಪ್ಪ ಬಿಂದ್ಲಿ, ರಾಜಣ್ಣ ಕಾಮನಹಳ್ಳಿ, ಪರಶುರಾಮ ಹಿರೇಮಠ ಸೇರಿದಂತೆ ಭಾಜಪ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಇದ್ದರು.

PREV

Recommended Stories

ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ