ರಸ್ತೆ-ಸೇತುವೆ ನಿರ್ಮಾಣ ಕಾಮಗಾರಿ ವೀಕ್ಷಿಸಿದ ಶೇಷಾದ್ರಿ

KannadaprabhaNewsNetwork |  
Published : Sep 23, 2025, 01:03 AM IST
22ಕೆಆರ್ ಎಂಎನ್ 8.ಜೆಪಿಜಿರಾಮನಗರದ ಕಾಯಿಸೊಪ್ಪಿನ ಬೀದಿಯಿಂದ ವಿವೇಕಾನಂದ ನಗರ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣ ಕಾಮಗಾರಿಯನ್ನು ನಗರಸಭೆ ಅಧ್ಯಕ್ಷ  ಕೆ.ಶೇಷಾದ್ರಿ ವೀಕ್ಷಣೆ ಮಾಡಿದರು. | Kannada Prabha

ಸಾರಾಂಶ

ರಾಮನಗರ: ನಗರ ಮೂಲಸೌಕರ್ಯ ಅಭಿವೃದ್ಧಿ ನಿಧಿ (ಯುಐಡಿಎಫ್) ಅನುದಾನದಲ್ಲಿ ನಗರಸಭೆ ವ್ಯಾಪ್ತಿಯ ವಿವಿಧ ‍ವಾರ್ಡುಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳು ಮತ್ತು ಗುಂಡಿ ಬಿದ್ದಿರುವ ರಸ್ತೆಗಳನ್ನು ನಗರಸಭಾ ಅಧ್ಯಕ್ಷ ಕೆ.ಶೇಷಾದ್ರಿ ಸೋಮವಾರ ನಗರಸಭಾ ಸದಸ್ಯರು ಮತ್ತು ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು.

ರಾಮನಗರ: ನಗರ ಮೂಲಸೌಕರ್ಯ ಅಭಿವೃದ್ಧಿ ನಿಧಿ (ಯುಐಡಿಎಫ್) ಅನುದಾನದಲ್ಲಿ ನಗರಸಭೆ ವ್ಯಾಪ್ತಿಯ ವಿವಿಧ ‍ವಾರ್ಡುಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳು ಮತ್ತು ಗುಂಡಿ ಬಿದ್ದಿರುವ ರಸ್ತೆಗಳನ್ನು ನಗರಸಭಾ ಅಧ್ಯಕ್ಷ ಕೆ.ಶೇಷಾದ್ರಿ ಸೋಮವಾರ ನಗರಸಭಾ ಸದಸ್ಯರು ಮತ್ತು ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು.

ನಗರದ ಕಾಯಿಸೊಪ್ಪಿನ ಬೀದಿಯಿಂದ ವಿವೇಕಾನಂದ ನಗರ ಸಂಪರ್ಕ ಕಲ್ಪಿಸಲು 2021- 22ರ ವಿಶೇಷ ಅನುದಾನದಡಿ 3 ಕೋಟಿ 75 ಲಕ್ಷ ವೆಚ್ಚದಲ್ಲಿ ಅರ್ಕಾವತಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿ ವೀಕ್ಷಣೆ ನಂತರ ಅವರು ಸುದ್ಧಿಗಾರರೊಂದಿಗೆ ಮಾತನಾಡಿದರು.

ಈ ಹಿಂದೆ ಗ್ರಾಮೀಣ ಭಾಗದ ಜನರು ಪಟ್ಟಣ ಪ್ರದೇಶಕ್ಕೆ ಬಂದು ತಮ್ಮ ವಹಿವಾಟು ನಡೆಸುತ್ತಿದ್ದ ಅತೀ ಸಮೀಪದ ಪುರಾತನ ರಸ್ತೆಯಾಗಿತ್ತು. ಅರ್ಕಾವತಿ ನದಿಗೆ ಸೇತುವೆ ನಿರ್ಮಾಣ ಮಾಡಬೇಕೆಂಬ ಹಲವು ದಿನಗಳ ಈ ಭಾಗದ ಜನರ ಮನವಿಯಂತೆ ಸೇತುವೆ ಮಂಜೂರಾಗಿದ್ದು, ಕೆಲಸ ಭರದಿಂದ ಸಾಗುತ್ತಿದೆ ಎಂದು ತಿಳಿಸಿದರು.

ಶಾಂತಿಲಾಲ್ ಬಡಾವಣೆಗೆ ಹೋಗುವ ಮುಖ್ಯ ರಸ್ತೆ, ವಿವೇಕಾನಂದನಗರ ರಾಯರ ದೊಡ್ಡಿ ಮುಖ್ಯ ರಸ್ತೆ, ಯುಐಡಿಎಫ್‌ ನಡಿ ನಡೆಯುತ್ತಿರುವ ರಸ್ತೆ, ಚರಂಡಿ ಹಾಗೂ ಮಳೆ ಹಾನಿಯಿಂದ ಗುಂಡಿ ಬಿದ್ದಿರುವ ರಸ್ತೆಗಳನ್ನು ವೀಕ್ಷಿಸಿದರು. ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಕೂಡಲೇ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಿಸಿ ಸಾರ್ವಜನಿಕರ ಓಡಾಟಕ್ಕೆ ಅನುವು ಮಾಡಿ ಕೊಡಬೇಕು. ಪ್ರಮುಖವಾಗಿ ಅಭಿವೃದ್ದಿ ಕಾಮಗಾರಿಯಲ್ಲಿ ಅಧಿಕಾರಿ ಗಳು ಖುದ್ದಾಗಿ ಸ್ಥಳದಲ್ಲಿದ್ದು ಗುಣಮಟ್ಟ ಕಾಪಾಡಬೇಕು. ಈ ಬಗ್ಗೆ ನನಗೆ ಸಾರ್ವಜನಿಕರಿಂದ ದೂರು ಬಾರದಂತೆ ಗಮನ ಹರಿಸಿ ಎಂದು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು ನಗರ ಪ್ರದೇಶಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಅತೀ ಸಮೀಪದಲ್ಲಿದೆ. ಒಂದು ದಿನದ ಪ್ರವಾಸಕ್ಕೆ ಹೇಳಿ ಮಾಡಿಸಿದಂತಿದೆ. ಹಾಗಾಗಿ ರಂಗರಾಯರದೊಡ್ಡಿ ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ ಮಾಡ ಲಾಗುವುದು. ಇದರ ಜೊತೆಗೆ ನಗರದ ನೀರಿನ ಜೀವ ಸೆಲೆಯಾಗಿರುವ ಬೋಳಪ್ಪನ ಹಳ್ಳಿ, ಅಮಾನಿಕೆರೆ ಅಭಿವೃದ್ದಿ ಮಾಡಬೇಕಿದೆ. ವಾಕಿಂಗ್ ಪಾಥ್, ಕೆರೆ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಅಧಿಕಾರಿ ಗಳೊಂದಿಗೆ ಚರ್ಚೆ ನಡೆಸಿದ ಕೆ.ಶೇಷಾದ್ರಿ, ವಾಯು ವಿಹಾರಿಗಳು ಮತ್ತು ಪ್ರವಾಸಿಗರು ಬೋಟಿಂಗ್ ನಡೆಸಲು ಅನುಕೂಲ ಮಾಡಲಾಗುವುದು. ಇದರಿಂದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ ನೀಡಿದಂತಾಗುತ್ತದೆ.‌ ಆ ಚಿಂತನೆಯಲ್ಲಿ ನಗರದಲಿ ಹಲವು ಕರ‍್ಯಕ್ರಮಗಳನ್ನು ರೂಪಿಸುತ್ತಿರುವುದಾಗಿ ಹೇಳಿದರು.ಈ ವೇಳೆ ಅಪರ ಜಿಲ್ಲಾಧಿಕಾರಿ ಚಂದ್ರಯ್ಯ, ನಗರಕೋಶ ಯೋಜನಾಧಿಕಾರಿ ಶೇಖರ್, ನಗರಸಭೆ ಪೌರಾಯುಕ್ತ ಡಾ.ಜಯಣ್ಣ, ಎಇಇ ವಿಶ್ವನಾಥ್, ಎಂಜಿನಿಯರ್ ನಿರ್ಮಲಾ, ಅಧಿಕಾರಿ ನಾಗರಾಜು, ಮುಖಂಡರಾದ ಲಕ್ಷ್ಮಿಕಾಂತ್, ಶ್ರೀನಿವಾಸ್, ಕಬಡ್ಡಿ ವಿಜಿ, ನಾರಾಯಣಪ್ಪ, ಶಿವರಾಜು ಮತ್ತಿತರರು ಹಾಜರಿದ್ದರು.

22ಕೆಆರ್ ಎಂಎನ್ 8.ಜೆಪಿಜಿ

ರಾಮನಗರದ ಕಾಯಿಸೊಪ್ಪಿನ ಬೀದಿಯಿಂದ ವಿವೇಕಾನಂದ ನಗರ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣ ಕಾಮಗಾರಿಯನ್ನು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ವೀಕ್ಷಣೆ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ