ಕನ್ನಡಪ್ರಭ ವಾರ್ತೆ ಬೆಂಗಳೂರು
ಆ.11ರಂದು ಸೋಮವಾರದಿಂದ ಆ.22 ರಂದು ಶುಕ್ರವಾರದವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ವಿರೋಧಪಕ್ಷಗಳು ಸರ್ಕಾರದ ವಿರುದ್ಧ ಯಾವ ವಿಷಯಗಳನ್ನು ಪ್ರಸ್ತಾಪಿಸಬಹುದು? ಇದಕ್ಕೆ ಆಡಳಿತರೂಢ ಪಕ್ಷವಾಗಿ ನಾವು ಹೇಗೆ ತಿರುಗೇಟು ನೀಡಬೇಕು ಎಂಬ ಕುರಿತು ಚರ್ಚಿಸಲು ಆ.12 ರಂದು ಸಂಜೆ 6 ಗಂಟೆಗೆ ಮುಖ್ಯಮಂತ್ರಿ, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.
ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಪರಿಷತ್‌ನ ಸಭಾನಾಯಕ ಎನ್.ಎಸ್.ಬೋಸುರಾಜು, ಪಕ್ಷದ ಕಾರ್ಯಾಧ್ಯಕ್ಷರು, ಶಾಸಕರು ಹಾಗೂ ಪರಿಷತ್ ಸದಸ್ಯರು, ಲೋಕಸಭೆ, ರಾಜ್ಯಸಭೆ ಸದಸ್ಯರು, ವಿಧಾನಸಭೆ ಬಾಹ್ಯ ಬೆಂಬಲಿತ ಸದಸ್ಯರಿಗೆ ಆಹ್ವಾನ ನೀಡಲಾಗಿದೆ.ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹುತೇಕ ಶಾಸಕರ ಅಹವಾಲು ವೈಯಕ್ತಿಕವಾಗಿ ಆಲಿಸಿದ್ದಾರೆ. ಹೀಗಾಗಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರ ಸಮಸ್ಯೆಗಳು ಚರ್ಚೆಯಾಗುವ ಸಾಧ್ಯತೆ ಕಡಿಮೆ ಇದೆ ಎಂದು ಹೇಳಲಾಗಿದೆ.
ಪಾಯಿಂಟರ್ಸ್
* ಆ.11ರಿಂದ ಆ.22ರ ವರೆಗೂ ನಡೆಯಲಿರುವ ವಿಧಾನಮಂಡಲ ಅಧಿವೇಶನ.* ಈ ಹಿನ್ನೆಲೆಯಲ್ಲಿ ಆ.12ರ ಸಂಜೆ 6ಕ್ಕೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ.
* ಈಗಾಗಲೇ ಶಾಸಕರ ಸಭೆ ನಡೆಸಿ ಸಮಸ್ಯೆ ಆಲಿಸಿರುವ ಸಿಎಂ. ಹೀಗಾಗಿ ಸಿಎಲ್‌ಪಿ ಸಭೆಯಲ್ಲಿ ಕ್ಷೇತ್ರಗಳ ಸಮಸ್ಯೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇಲ್ಲ.* ಅಧಿವೇಶನದಲ್ಲಿ ಸರ್ಕಾರದ ಸಾಧನೆಗಳನ್ನು ಸಮರ್ಥಿಸಿಕೊಳ್ಳುವ ಬಗ್ಗೆ ಸಮಾಲೋಚನೆ ನಿರೀಕ್ಷೆ.