ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ. ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿ, ಅಧ್ಯಕ್ಷರ ನೇಮಕಾತಿಗೆ ಮೊದಲ ಹಂತದಲ್ಲಿ ಶಾಸಕರನ್ನು ಪರಿಗಣಿಸಲಾಗುವುದು. ನಾನು ಹಾಗೂ ಉಪಮುಖ್ಯಮಂತ್ರಿಗಳು ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ ಪಕ್ಷದ ವರಿಷ್ಠರಿಗೆ ನೀಡಲಾಗಿದ್ದು, ಅನುಮತಿಯನ್ನು ನಿರೀಕ್ಷಿಸಲಾಗಿದೆ ಎಂದರು.
ಕನ್ನಡಪ್ರಭ ವಾರ್ತೆ ಹಾವೇರಿ
ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ. ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿ, ಅಧ್ಯಕ್ಷರ ನೇಮಕಾತಿಗೆ ಮೊದಲ ಹಂತದಲ್ಲಿ ಶಾಸಕರನ್ನು ಪರಿಗಣಿಸಲಾಗುವುದು. ನಾನು ಹಾಗೂ ಉಪಮುಖ್ಯಮಂತ್ರಿಗಳು ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ ಪಕ್ಷದ ವರಿಷ್ಠರಿಗೆ ನೀಡಲಾಗಿದ್ದು, ಅನುಮತಿಯನ್ನು ನಿರೀಕ್ಷಿಸಲಾಗಿದೆ ಎಂದರು.
150 ದಿನದ ಉದ್ಯೋಗಕ್ಕೆ ಕೇಂದ್ರವಿನ್ನೂ ಒಪ್ಪಿಲ್ಲ:
ಬರ ಪರಿಹಾರದಲ್ಲಿ ರೈತರ ಪಾಲಿನ ಮೊತ್ತದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಬೆಳೆಹಾನಿ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ನಿಗದಿಯಾಗಿರುವ ಪರಿಹಾರ ಮೊತ್ತ ನೀಡಲಾಗುವುದು. ಹಾವೇರಿ ಜಿಲ್ಲೆಗೆ ಕುಡಿಯುವ ನೀರು, ಮೇವು, ಉದ್ಯೋಗ ಸೇರಿದಂತೆ ವಿವಿಧ ಕಾರ್ಯಗಳಿಗೆ ₹226 ಕೋಟಿ ಬಿಡುಗಡೆ ಮಾಡಲಾಗಿದೆ. ಎಲ್ಲಾ ಜಿಲ್ಲಾ ಮಂತ್ರಿಗಳು, ಜಿಲ್ಲಾಧಿಕಾರಿಗಳಿಗೆ ಬರಗಾಲದ ಪರಿಸ್ಥಿತಿಯ ಬಗ್ಗೆ ನಿಗಾ ವಹಿಸುವುದಲ್ಲದೇ, ಕುಡಿಯುವ ನೀರಿಗೆ ಕೊರತೆ ಬರದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಎನ್ ಆರ್ ಜಿ ಎಸ್ ಅಡಿ ಬರಗಾಲದ ಪರಿಸ್ಥಿತಿಯಲ್ಲಿ 150 ಮಾನವ ದಿನಗಳ ಉದ್ಯೋಗ ನೀಡುವ ಕೇಂದ್ರದ ನಿಯಮವಿದೆ. ಈ ಕ್ರಮಕ್ಕೆ ಕೇಂದ್ರ ಸರ್ಕಾರದವರು ಅನುಮತಿ ನೀಡಬೇಕಿದ್ದು, ಇದುವೆರಗೆ ಈ ಅನುಮತಿಯನ್ನು ನೀಡಿಲ್ಲ ಎಂದರು.
ಇಡೀ ದೇಶದಲ್ಲಿ 12 ರಾಜ್ಯಗಳಲ್ಲಿ ಬರಗಾಲ ಪರಿಸ್ಥಿತಿಯಿದೆ. ಬರ ಅಧ್ಯಯನದ ಕೇಂದ್ರ ತಂಡ ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲಿಸಿದೆ. ಆದರೂ ಕೇಂದ್ರದಿಂದ ಬರಪರಿಹಾರ ಬಿಡುಗಡೆಯಾಗಿಲ್ಲ. ರಾಜ್ಯದ ದುಡ್ಡನ್ನು ರಾಜ್ಯಕ್ಕೆ ಬಿಡುಗಡೆ ಮಾಡುತ್ತಿಲ್ಲ ಎಂದರು.
ವಕೀಲನಾಗಿರುವುದರಿಂದಲೇ ಕಾನೂನು ಬಾಹಿರ ತನಿಖೆಯ ಆದೇಶ ವಾಪಸ್:
ಕುಮಾರಸ್ವಾಮಿಯವರು ವಕೀಲರಾಗಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ತನಿಖೆಯ ಆದೇಶವನ್ನು ವಾಪಸ್ಸು ಪಡೆದಿರುವುದು ಸರಿಯೇ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನಾನು ವಕೀಲನಾಗಿರುವುದರಿಂದ ಹಿಂದಿನ ತನಿಖಾ ಆದೇಶ ಕಾನೂನು ರೀತ್ಯವಿರಲಿಲ್ಲವೆಂದು ವಾಪಸ್ಸು ಪಡೆಯಲಾಗಿದೆ. ನನಗೆ ಕಾನೂನಿನ ಅರಿವು ಇಲ್ಲದಿದ್ದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿಯಂತೆ ನಾನು ಕಾನೂನುಬಾಹಿರವಾಗಿದ್ದರೂ ತನಿಖೆಯ ಬಗ್ಗೆ ಸಮ್ಮತಿಸುತ್ತಿದೆ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.