ರಾಜಕೀಯ ಬಿಟ್ಟು ಸಹಕಾರ ಸಂಘಗಳ ಅಭಿವೃದ್ಧಿಗೆ ಕೆಲಸ ಮಾಡಿ: ಸಿ.ಎಸ್.ಪುಟ್ಟರಾಜು

KannadaprabhaNewsNetwork |  
Published : Nov 15, 2026, 01:45 AM IST
14ಕೆಎಂಎನ್ ಡಿ20  | Kannada Prabha

ಸಾರಾಂಶ

ಸಹಕಾರ ಸಂಘಗಳಿಂದ ಗ್ರಾಮಗಳು, ರೈತ ಸಮುದಾಯದ ಅಭಿವೃದ್ಧಿ ಸಾಧ್ಯ. ಇಲ್ಲಿ ಯಾವುದೇ ರಾಜಕೀಯ ಮಾಡಬಾರದು, ಎಲ್ಲರು ಒಗ್ಗಟ್ಟಿನಿಂದ ಸಂಘದ ಅಭಿವೃದ್ಧಿಗೆ ಕೆಲಸ ಮಾಡಬೇಕು. ಪ್ರಾಥಮಿಕ ಸಹಕಾರ ಸಂಘಗಳು ರೈತರಿಗೆ ಹೆಚ್ಚಿನ ಮಟ್ಟದಲ್ಲಿ ಸಾಲ ಸೌಲಭ್ಯ ನೀಡಬೇಕು.

ಕನ್ನಡಪ್ರಭ ವಾರ್ತೆ ಪಾಂಡವಪುರ

ರೈತರ ಬೆನ್ನೆಲುಬಾಗಿರುವ ಸಹಕಾರ ಸಂಘಗಳ ಅಭಿವೃದ್ಧಿಗೆ ರಾಜಕೀಯ ಬಿಟ್ಟು ಎಲ್ಲರೂ ಜತೆಗೂಡಿ ಕೆಲಸ ಮಾಡಬೇಕು ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.

ತಾಲೂಕಿನ ನಾರಾಯಣಪುರ ಗ್ರಾಮದ ಶಾಲಾ ಆವರಣದಲ್ಲಿ ರಾಜ್ಯ ಸಹಕಾರ ಮಹಾ ಮಂಡಳಿ, ಜಿಲ್ಲಾ ಸಹಕಾರ ಒಕ್ಕೂಟ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಮನ್ಮುಲ್, ಸಹಕಾರ ಇಲಾಖೆ, ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ಹಾಗೂ ಎಲ್ಲಾ ಸಹಕಾರ ಸಂಘಗಳ ವತಿಯಿಂದ ನಡೆದ 73ನೇ ಸಹಕಾರ ಸಪ್ತಾಹದಲ್ಲಿ ಸಹಕಾರ ಧ್ವಜಾರೋಹಣ ನೇರವೇರಿಸಿ ಮಾತನಾಡಿದರು.

ಸಹಕಾರ ಸಂಘಗಳಿಂದ ಗ್ರಾಮಗಳು, ರೈತ ಸಮುದಾಯದ ಅಭಿವೃದ್ಧಿ ಸಾಧ್ಯ. ಇಲ್ಲಿ ಯಾವುದೇ ರಾಜಕೀಯ ಮಾಡಬಾರದು, ಎಲ್ಲರು ಒಗ್ಗಟ್ಟಿನಿಂದ ಸಂಘದ ಅಭಿವೃದ್ಧಿಗೆ ಕೆಲಸ ಮಾಡಬೇಕು. ಪ್ರಾಥಮಿಕ ಸಹಕಾರ ಸಂಘಗಳು ರೈತರಿಗೆ ಹೆಚ್ಚಿನ ಮಟ್ಟದಲ್ಲಿ ಸಾಲ ಸೌಲಭ್ಯ ನೀಡಬೇಕು ಎಂದರು.

ಸಿಎಂ ಡಿ.ಕೆ.ಶಿವಕುಮಾರ್ ಅವರು ಹೋಬಳಿಯಲ್ಲಿರುವ ಶಿಕ್ಷಣ ಸಂಸ್ಥೆಗಳು ಆಯ ವ್ಯಾಪ್ತಿಯ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸುವಂತೆ ಮನವಿ ಮಾಡಿದ್ದಾರೆ. ಅದರಂತೆ ನಮ್ಮ ಎಸ್‌ಟಿಜಿ ಶಿಕ್ಷಣ ಟ್ರಸ್ಟ್ ವತಿಯಿಂದ ಈ ಗ್ರಾಮದಲ್ಲಿ ಇರುವ ಸರ್ಕಾರಿ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜನ್ನು ಅಭಿವೃದ್ಧಿ ಪಡಿಸಲಾಗುವುದು ಎಂದರು.

ಶಾಲೆ ಮುಂದೆ ನನ್ನ ಹಿರಿಯ ಅಣ್ಣ ಸಿ.ಎಸ್.ದೇವೇಗೌಡರ ಹೆಸರಿನಲ್ಲಿ 1 ಎಕರೆ ಭೂಮಿ ಖರೀದಿಸಿದ್ದು, ಆ ಭೂಮಿಯನ್ನು ಗ್ರಾಮದ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ದಾನವಾಗಿ ನೀಡಲಾಗುವುದು ಎಂದು ಘೋಷಿಸಿದರು.

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ಸಹಕಾರಿ ಸಂಘಗಳು ರೈತರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಲು ಕೆಲಸ ಮಾಡಬೇಕು. ರೈತರಿಗೆ ಸಾಲ ಸೌಲಭ್ಯ ನೀಡಿಲಾಗಿದ್ದು, ಎಷ್ಟು ರೈತರನ್ನು ಆರ್ಥಿಕವಾಗಿ ಬಲಪಡಿಸಲಾಗಿದೆ ಎನ್ನುವ ಬಗ್ಗೆ ಗಮನಹರಿಸಬೇಕು ಎಂದರು.

ಸಹಕಾರಿ ಸಂಘದಲ್ಲಿ ಹೆಚ್ಚಿನ ಬೋನಸ್ ನೀಡಬೇಕು. 200ಕ್ಕೂ ಅಧಿಕ ಸೇವೆ ನೀಡಲು ಅವಕಾಶ ಇದ್ದು, ಅವುಗಳನ್ನು ಸಮರ್ಪಕವಾಗಿ ನೀಡಬೇಕು. ಖಾಸಗಿ ಫೈನಾನ್ಸ್‌ಗಳಲ್ಲಿ ನೀಡುವ ವೇಗದಲ್ಲೇ ಸಾಲ ಸೌಲಭ್ಯ ಒದಗಿಸಬೇಕು ಎಂದರು.

ಜಿಲ್ಲಾ ಒಕ್ಕೂಟದ ಅಧ್ಯಕ್ಷ ಎಂ.ನಂದೀಶ್ ಮಾತನಾಡಿ, ಸಹಕಾರ ಸಪ್ತಾಹದಲ್ಲಿ ಸಹಕಾರ ಸಂಘಗಳಲ್ಲಿನ ಸಮಸ್ಯೆಗಳು, ಸವಾಲುಗಳ ಬಗ್ಗೆ ಚರ್ಚೆಯಾಗಬೇಕು. ಸಹಕಾರ ಸಂಘದಲ್ಲಿ ಬದಲಾಗುವ ಕಾಯ್ದೆ ತಿದ್ದುಪಡಿಗಳ ಅರಿವು ಮೂಡಿಸಬೇಕು ಎಂದರು.

ಡಾ.ಎಲ್.ಸ್ವಾಮೀಗೌಡ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ಮಂಡ್ಯ ಜಿಲ್ಲೆಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿದೆ. ಸಹಕಾರಿ ಕ್ಷೇತ್ರ, ಚಳವಳಿಯ ಬಗ್ಗೆ ಅಧ್ಯಾಯನ ಮಾಡಲು ವಿದೇಶಿಗರು ಬಂದರೆ ಮಂಡ್ಯ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದರು ಅಷ್ಟರ ಮಟ್ಟಿಗೆ ಸಾಧನೆ ಮಾಡಿದೆ ಎಂದರು.

ಸಮಾರಂಭದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚ್ಚಿನ ಚಲುವರಾಯಸ್ವಾಮಿ, ಮನ್ಮುಲ್ ಅಧ್ಯಕ್ಷ ಎಂ.ಕೆ.ಹರೀಶ್ ಮಾತನಾಡಿದರು. ಕಾರ್ಯಕ್ರಮಕ್ಕೂ ಮುನ್ನ ಸೊಸೈಟಿ ಕಟ್ಟಡದಲ್ಲಿ ಧ್ವಜಾರೋಹಣ ನೆರವೇರಿಸಿ ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಯಿತು. ಇದೇ ವೇಳೆ ಹಿರಿಯ ಸಹಕಾರಿಗಳಾದ ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಎಂ.ಸಿ.ಯಶವಂತ್ ಕುಮಾರ್, ಎನ್.ಈಶ್ವರಯ್ಯ, ರಾಧಾಕೃಷ್ಣ ಅವರನ್ನು ಅಭಿನಂಧಿಸಲಾಯಿತು.

ಕಾರ್ಯಕ್ರಮದಲ್ಲಿ ಸೊಸೈಟಿ ಅಧ್ಯಕ್ಷ ಎಸ್.ಜೆ.ಚನ್ನಕೃಷ್ಣೇಗೌಡ ಅಧ್ಯಕ್ಷತೆ ವಹಿಸಿದ್ದರು. ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಗುರುಸ್ವಾಮಿ, ಕ.ರಾ.ಸ.ಮಾ.ಮ.ಮಂ ನಿರ್ದೇಶಕ ಎಸ್.ಎಲ್.ಮೋಹನ್, ಟಿಎಪಿಸಿಎಂಎಸ್ ಅಧ್ಯಕ್ಷ ಪಿ.ಎಲ್.ಆದರ್ಶ, ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ಜಯಕುಮಾರ್, ಶಿವಪ್ಪ, ಜಿಲ್ಲಾ ಒಕ್ಕೂಟದ ಉಪಾಧ್ಯಕ್ಷೆ ಎಂ.ಪಿ.ಜ್ಯೋತಿ,ರಾಮಕೃಷ್ಣೇಗೌಡ, ಎಸ್.ನಾಗೇಂದ್ರ, ಕೆ.ಎಲ್. ದೊಡ್ಡಲಿಂಗೇಗೌಡ, ಹೆಚ್.ಎನ್.ಕೃಷ್ಣ, ಮಹೇಶ್, ಚಂದ್ರು, ಸೋಮಶೇಖರ್, ರಮೇಶ್, ಡಿಸಿಸಿ ಬ್ಯಾಂಕ್ ಸಿಇಒ ವನಜಾಕ್ಷಿ, ಸಹಕಾರ ಸಂಘಗಳ ಉಪ ನಿಬಂಧಕರಾದ ಶೀಲಾ, ಎಚ್.ಆರ್.ನಾಗಭೂಷಣ್, ಮನ್ಮುಲ್ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕ ಆರ್.ಪ್ರಸಾದ್, ಸೊಸೈಟಿ ಉಪಾಧ್ಯಕ್ಷೆ ಎನ್.ಎಸ್.ವಿನೋದ ಸೇರಿದಂತೆ ಎಲ್ಲಾ ನಿರ್ದೇಶಕರು, ಅಧಿಕಾರಿಗಳು, ವಿವಿಧ ಸಹಕಾರ ಸಂಘಗಳ ಆಡಳಿತ ಮಂಡಳಿ, ಸಿಬ್ಬಂದಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇಶದ ಅಭಿವೃದ್ಧಿಗೆ ಯುವಶಕ್ತಿ ಆಧಾರಸ್ತಂಭ: ಕಾಳೇಗೌಡ
ಶಾಸಕ ಪೊನ್ನಣ್ಣ, ಅಶೋಕ್ ಪೂವಯ್ಯಗೆ ಸನ್ಮಾನ