ಕನ್ನಡಪ್ರಭ ವಾರ್ತೆ ಮಳವಳ್ಳಿ
ತಾಪಂ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ದೂರು ಕೇಂದ್ರದ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರಚಾರ ಪಡಿಸಬೇಕು. ಸಾರ್ವಜನಿಕರು ಯಾರೇ ದೂರವಾಣಿ ಮೂಲಕ ಸಮಸ್ಯೆ ಹೇಳಿಕೊಂಡರೇ ತಹಸೀಲ್ದಾರ್ ಲೊಕೇಶ್ ಹಾಗೂ ತಾಪಂ ಇಒ ಶ್ರೀನಿವಾಸ್ ಸ್ಪಂದಿಸಬೇಕು ಎಂದರು.
ಮೈಕ್ರೋ ಫೈನಾನ್ಸ್ ಹಾವಳಿ ಗ್ರಾಮೀಣ ಪ್ರದೇಶದಲ್ಲಿ ಮಿತಿ ಮೀರಿದ್ದು, ನೂರಾರು ಮಹಿಳೆಯರು ಶೋಷಣೆಗೆ ಒಳಗಾಗುತ್ತಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಮೈಕ್ರೋ ಫೈನಾನ್ಸ್ ಕಂಪನಿಗಳು ತಾಲೂಕಿನಲ್ಲಿ ನಡೆಸಿರುವ ವಾಹಿವಾಟು ಬಗ್ಗೆ ಮಾಹಿತಿ ನೀಡಿದರೇ ಸದನದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆತಟ್ಟಲು ಚರ್ಚೆ ನಡೆಸಲಾಗುವುದು. ಮಹಿಳಾ ಚಟುವಟಿಕೆಗಳು, ಸ್ತ್ರೀ ಶಕ್ತಿ ಸಂಘ ಸೇರಿದಂತೆ ಮಹಿಳಾ ಸಬಲೀಕರಣ ಇಲಾಖೆಗಳು ಒತ್ತು ನೀಡಬೇಕೆಂದು ಹೇಳಿದರು.ಅತಿಯಾದ ರಸಗೊಬ್ಬರ ಬಳಕೆಯಿಂದ ಭೂಮಿಯ ಫಲವತ್ತತೆ ಕುಂಠಿತಗೊಳ್ಳುತ್ತಿದೆ. ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯ ಅಧಿಕಾರಿಗಳು ಆಂದೋಲನ ನಡೆಸಿ ರೈತರಿಗೆ ಸಾವಯವ ಕೃಷಿಗೆ ಒತ್ತು ನೀಡುವಂತೆ ತಿಳಿವಳಿಕೆ ನೀಡಲು ಮುಂದಾಗಬೇಕು. ಅತಿಯಾದ ರಾಸಾಯನಿಕ ಗೊಬ್ಬರ ಬಳಕೆಯಿಂದ ಹೆಚ್ಚುತ್ತಿರುವ ಪೋರೈಡ್ ಅಂಶ ತಡೆಗಟ್ಟಲು ಸಹಕಾರ ನೀಡಬೇಕೆಂದರು.
ಅಕ್ರಮ ಖಾತೆ ಮಾಡಿಸಿಕೊಂಡು ಸರ್ಕಾರದ ಭೂಮಿಯನ್ನು ಪರಭಾರೆ ಮಾಡಿಕೊಂಡವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಲು ಕಂದಾಯ ಇಲಾಖೆ ಅಧಿಕಾರಿಗಳು ಮುಂದಾಗಬೇಕು. ಅಕ್ರಮ ಭೂ ಪ್ರಕರಣದಲ್ಲಿ ಭಾಗಿಯಾದವರ ಹೆಸರನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದರು.
ಅರಣ್ಯ ಬೇಸಾಯದಿಂದ ಹೆಚ್ಚು ಲಾಭ ಪಡೆಯಬಹುದು ಎಂಬುದರ ಬಗ್ಗೆ ರೈತರಿಗೆ ಅಧಿಕಾರಿಗಳು ತಿಳಿವಳಿಕೆ ನೀಡಬೇಕು. ನಿರುದ್ಯೋಗಿ ಯುವಕರಿಗೆ ಕೃಷಿಯಿಂದಲೇ ಉದ್ಯೋಗ ನೀಡಲು ಸಾಧ್ಯವಾಗಿದ್ದು, ಯುವಕರು ಸ್ವಾವಲಂಬಿ ಜೀವನ ನಡೆಸಲು ಕೃಷಿಯ ಜೊತೆಗೆ ಹೈನುಗಾರಿಕೆಗೆ ಹೆಚ್ಚು ಒತ್ತು ನೀಡುವ ಬಗ್ಗೆ ಅರಿವು ಮೂಡಿಸುವಂತೆ ಸಲಹೆ ನೀಡಿದರು.
ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸರ್ಕಾರದಿಂದ ಸಿಗು ಸೌಲಭ್ಯಗಳ ಬಗ್ಗೆ ಕಚೇರಿ ಮುಂದಿನ ನೋಟಿಸ್ ಬೊರ್ಡ್‌ಗಳಲ್ಲಿ ಪ್ರಕಟಿಸಬೇಕು. ಸಾರ್ವಜನಿಕರಿಗೆ ಇಲಾಖೆಯಿಂದ ಬೇಕಾದ ಮಾಹಿತಿಯನ್ನು ಬೊರ್ಡ್‌ಗಳಲ್ಲಿ ಪ್ರತಿ ನಿತ್ಯ ನೀಡಬೇಕು. ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮಗಳಲ್ಲಿಯೂ ಹಬ್ಬಗಳು ಪ್ರಾರಂಭವಾಗುವುದರಿಂದ ಪೊಲೀಸ್ ಬಂದೋಬಸ್ತ್ ಸಮರ್ಪಕವಾಗಿ ನಿರ್ವಹಿಸಬೇಕು ಎಂದರು.
ಕಾಲುವೆಗಳ ದುರಸ್ಥಿ ಕಾರ್ಯ ನಡೆಯುವುದರಿಂದ ಯಾವ ಭಾಗಕ್ಕೆ ನೀರು ಕೊಡುವುದಿಲ್ಲ ಎಂಬುವುದರ ಬಗ್ಗೆ ರೈತರು ವ್ಯವಸಾಯ ಮುಂಚಿತವಾಗಿ ಜಿಲ್ಲಾಧಿಕಾರಿಗಳ ಮೂಲಕ ಪ್ರಕಟಣೆ ಹೊರಡಿಸಲು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಮುಂದಾಗಬೇಕು ಎಂದರು.
ತಾಲೂಕು ಮಟ್ಟದ ಅಧಿಕಾರಿಗಳು ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನ ಬಳಕೆ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ತಹಸೀಲ್ದಾರ್ ಲೊಕೇಶ್, ತಾಪಂ ಇಒ ಶ್ರೀನಿವಾಸ್, ಡಿವೈಎಸ್‌ಪಿ ಕುಮಾರ್, ಗ್ಯಾರಂಟಿ ಯೋಜನೆ ಅನುಷ್ಠಾನ ಅಧ್ಯಕ್ಷ ಮಾದೇಶ್ ಇದ್ದರು.