ಹುಬ್ಬಳ್ಳಿ:
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕರು ಮಾತುಕತೆ ನಡೆಸಿ ತಮ್ಮ ಅಹವಾಲು ಆಲಿಸಿದ್ದಾರೆ. ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದ್ದಾರೆ. ಅಲ್ಲದೇ, ಪಕ್ಷದ ಹಿತದೃಷ್ಟಿಯಿಂದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಸೂಚಿಸಿದ್ದಾರೆ. ಹೀಗಾಗಿ ಪಕ್ಷದ ನಿರ್ಧಾರಕ್ಕೆ ಬದ್ಧವಾಗಿ ಮತ್ತೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದೇನೆ ಎಂದರು.
ಕಳೆದ 2 ದಿನಗಳಿಂದ ಪಶ್ಚಿಮ ಪದವೀಧರ ಕ್ಷೇತ್ರದ ವ್ಯಾಪ್ತಿಯ ನಾಲ್ಕು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಕಾರ್ಯಕರ್ತರ ಸಭೆಗಳಲ್ಲಿ ಭಾಗವಹಿಸಿದ್ದೇನೆ. ಧಾರವಾಡ ಸೇರಿದಂತೆ ವಿವಿಧೆಡೆ ತಮ್ಮ ಬೆಂಬಲಿಗರು ಹಾಗೂ ಶಿಕ್ಷಕ ಸಂಘಟನೆಯ ಕಾರ್ಯಕರ್ತರು ಮೋಹನ ಲಿಂಬಿಕಾಯಿ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪ್ರಚಾರವನ್ನು ಮತ್ತಷ್ಟು ಚುರುಕುಗೊಳಿಸಲಾಗುವುದು ಎಂದು ಹೇಳಿದರು.ಪದವೀಧರರು, ಶಿಕ್ಷಕರು ಹಾಗೂ ಸರ್ಕಾರಿ ನೌಕರರ ಹಿತ ಕಾಯುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಹಲವು ಕ್ರಮಕೈಗೊಂಡಿದೆ. ಎರಡು ವೇತನ ಆಯೋಗಗಳ ಶಿಫಾರಸುಗಳ ಜಾರಿ, ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ ಹಾಗೂ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆದ್ಯತೆ ನೀಡಲಾಗಿದೆ. ಹಳೆಯ ಪಿಂಚಣಿ ಯೋಜನೆ ಮರುಜಾರಿಗೂ ಪ್ರಯತ್ನ ನಡೆದಿದೆ. ಈ ಸಾಧನೆಗಳನ್ನು ಪರಿಗಣಿಸಿ ಮೋಹನ ಲಿಂಬಿಕಾಯಿ ಅವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಧಾರವಾಡ ಜಿಲ್ಲೆಯಲ್ಲಿ 35,117, ಗದಗದಲ್ಲಿ 21,594, ಹಾವೇರಿಯಲ್ಲಿ 24,648 ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ 16,039 ಸೇರಿ ಒಟ್ಟು 97,398 ಮತದಾರರಿದ್ದು, 137 ಮತಗಟ್ಟೆ ಸ್ಥಾಪಿಸಲಾಗುತ್ತಿದೆ ಎಂದರು.