ಬಾಕಿ ಕಡತ ನಿಗದಿತ ಅವಧಿಯೊಳಗೆ ಇತ್ಯರ್ಥ ಮಾಡಿ: ಶಾಸಕ ಶ್ರೀನಿವಾಸ ಮಾನೆ

KannadaprabhaNewsNetwork |  
Published : May 30, 2025, 12:11 AM IST
ಫೋಟೊ:29ಎಚ್‌ಎನ್‌ಎಲ್3 | Kannada Prabha

ಸಾರಾಂಶ

ಇಲ್ಲಿನ ತಮ್ಮ ಜನಸಂಪರ್ಕ ಕಚೇರಿಯಲ್ಲಿ ತಹಸೀಲ್ದಾರ್ ಅವರೊಂದಿಗೆ ಸಭೆ ನಡೆಸಿ, ತಾಲೂಕಿನ ಕೆಲ ಗ್ರಾಮಗಳಲ್ಲಿ ಹೊಲಗಳಿಗೆ ತೆರಳುವ ರಸ್ತೆಗಳು ಒತ್ತುವರಿಯಾಗಿ ರೈತರಿಗೆ ತೊಂದರೆಯಾಗುತ್ತಿದೆ.

ಹಾನಗಲ್ಲ: ರೈತರ ಜಮೀನಿನ ಸಂಪರ್ಕದ ರಸ್ತೆಗಳ ಒತ್ತುವರಿ ತೆರವುಗೊಳಿಸುವುದು, ತಹಸೀಲ್ದಾರ್ ಕಚೇರಿಯಲ್ಲಿ ಬಾಕಿ ಇರುವ ಕಡತಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥ ಪಡಿಸುವುದು ಸೇರಿದಂತೆ ಶೀಘ್ರ ಕ್ರಮ ಜರುಗಿಸಿ ಸಾರ್ವಜನಿಕರ ಅಲೆದಾಟ ತಪ್ಪಿಸುವಂತೆ ಶಾಸಕ ಶ್ರೀನಿವಾಸ ಮಾನೆ ಅವರು ತಹಸೀಲ್ದಾರ್ ಎಸ್.ರೇಣುಕಾ ಅವರಿಗೆ ಸೂಚಿಸಿದರು.ಇಲ್ಲಿನ ತಮ್ಮ ಜನಸಂಪರ್ಕ ಕಚೇರಿಯಲ್ಲಿ ತಹಸೀಲ್ದಾರ್ ಅವರೊಂದಿಗೆ ಸಭೆ ನಡೆಸಿ, ತಾಲೂಕಿನ ಕೆಲ ಗ್ರಾಮಗಳಲ್ಲಿ ಹೊಲಗಳಿಗೆ ತೆರಳುವ ರಸ್ತೆಗಳು ಒತ್ತುವರಿಯಾಗಿ ರೈತರಿಗೆ ತೊಂದರೆಯಾಗುತ್ತಿದೆ. ಪರಿಶೀಲನೆ ಕೈಗೊಂಡು ಒತ್ತುವರಿ ತೆರವುಗೊಳಿಸಲು ಕಾನೂನು ಕ್ರಮ ಕೈಗೊಳ್ಳಿ. ಗ್ರಾಮಠಾಣಾಕ್ಕೆ ಹತ್ತಿಕೊಂಡು ಇರುವ ಕಾಲುವೆಗಳು ಸಹ ಒತ್ತುವರಿಯಾಗಿದ್ದು, ಅವುಗಳ ತೆರವಿಗೆ ಸಹ ಮುಂದಾಗುವಂತೆ ಸೂಚಿಸಿದರು.ಮುಜರಾಯಿ ಖಾತೆಯಲ್ಲಿ ಬಹಳ ವರ್ಷಗಳಿಂದ ಬಳಕೆಯಾಗದೇ ಉಳಿದಿರುವ ಅನುದಾನವನ್ನು ಮುಜರಾಯಿ ದೇವಸ್ಥಾನಗಳಿಗೆ ಬಿಡುಗಡೆ ಮಾಡುವಂತೆ ಮುಜರಾಯಿ ಸಚಿವರಿಗೆ ಮನವಿ ಮಾಡಿದ್ದು, ಕೆಲವು ಅಂಶಗಳ ಮಾಹಿತಿಯನ್ನು ಸಲ್ಲಿಸುವಂತೆ ಪತ್ರ ಬಂದಿದ್ದು, ತಕ್ಷಣ ಮಾಹಿತಿ ದೊರಕಿಸುವಂತೆ ತಿಳಿಸಿದರು.ಈಗಾಗಲೇ ಅನುಮೋದನೆಯಾಗಿರುವ ಫಲಾನುಭವಿಗಳಿಗೆ ಹಕ್ಕುಪತ್ರ, ಆಸ್ತಿ ನೋಂದಣಿ ಪತ್ರ ಹಾಗೂ ಇ ಸ್ವತ್ತು ತಲುಪಿಸಲು ವ್ಯವಸ್ಥೆ ಮಾಡಿಕೊಳ್ಳಿ. ಶೀಘ್ರದಲ್ಲಿ ಫಲಾನುಭವಿಗಳಿಗೆ ವಿತರಣೆಗೆ ಕ್ರಮ ಕೈಗೊಳ್ಳಿ. ಬಗರ್ ಹುಕುಂ ಸಮಿತಿಯಲ್ಲಿ ಅನುಮೋದನೆಯಾದ ಪ್ರಕರಣಗಳಿಗೆ ಹಕ್ಕುಪತ್ರ ನೀಡಲು ಗಮನ ನೀಡಿ ಎಂದು ಶಾಸಕ ಮಾನೆ ತಹಶೀಲ್ದಾರ್ ಎಸ್. ರೇಣುಕಾ ಅವರಿಗೆ ಸೂಚನೆ ನೀಡಿದ್ದಾರೆ.ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ಜಾಥಾ

ಹಾವೇರಿ: ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾಸ್ಪತ್ರೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಪೊಲೀಸ್ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ಮೇ 31 ರಂದು ಬೆಳಗ್ಗೆ 10 ಗಂಟೆಗೆ ಜಾಥಾ ಕಾರ್ಯಕ್ರಮ ನಗರದ ಜಿಲ್ಲಾಸ್ಪತ್ರೆಯಲ್ಲಿ ಜರುಗಲಿದೆ.ಪ್ರಧಾನ ಕೌಟುಂಬಿಕ ನ್ಯಾಯಾಧೀಶರು, ಪ್ರಭಾರ ಜಿಲ್ಲಾ ವ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಂ.ಜಿ.ಶಿವಳ್ಳಿ ಉದ್ಘಾಟನೆ ನೆರವೇರಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಚ್.ಜತ್ತಿ, ಕಾರ್ಯದರ್ಶಿ ಪಿ.ಎಸ್.ಹೆಬ್ಬಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ ಸುರಗಿಹಳ್ಳಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಪಿ.ಆರ್.ಹಾವನೂರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ತಂಬಾಕು ನಿಯಂತ್ರಣಾಧಿಕಾರಿ ಡಾ. ಜಗದೀಶ ಪಾಟೀಲ, ಜಿಲ್ಲಾ ಎನ್.ಒ.ಎಚ್.ಪಿ. ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ಕಲ್ಪನಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಭಾರತಿ ಎಚ್., ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಹಾಗೂ ಜಿಲ್ಲಾ ಶೂಶ್ರುಷಕ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಸರಸ್ವತಿ ವೈ.ಎಚ್. ಭಾಗವಹಿಸಲಿದ್ದಾರೆ.

PREV

Recommended Stories

ನವೆಂಬರ್‌-ಡಿಸೆಂಬರ್‌ನಲ್ಲಿ 5 ಪಾಲಿಕೆ ಚುನಾವಣೆ: ಡಿಸಿಎಂ
ಹಿಪ್ಪರಗಿ ಜಲಾಶಯಕ್ಕೆ ೧,೧೯,೨೦೦ ಕ್ಯುಸೆಕ್‌ ಒಳಹರಿವು