ರಾಜೀ ಸಂಧಾನ ಮೂಲಕ ೧೯೯೬ ಪ್ರಕರಣಗಳ ಇತ್ಯರ್ಥ

KannadaprabhaNewsNetwork |  
Published : Jul 13, 2025, 01:18 AM IST
೧೨ಬಿಎಸ್ವಿ೦೪- ಬಸವನಬಾಗೇವಾಡಿಯ ನ್ಯಾಯಾಲಯದಲ್ಲಿ ಶನಿವಾರ ಲೋಕ ಅದಾಲತ್ ಜರುಗಿತು. | Kannada Prabha

ಸಾರಾಂಶ

ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಪಟ್ಟಣದ ನ್ಯಾಯಾಲಯದ ಸಂಕೀರ್ಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ನಾಲ್ಕು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಒಟ್ಟು ೮,೭೮೩ ಬಾಕಿಯಿರುವ ಪ್ರಕರಣಗಳಲ್ಲಿ ೨,೭೮೩ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಯಿತು. ಇದರಲ್ಲಿ ಒಟ್ಟು ೧,೯೯೬ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.

ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ

ಪಟ್ಟಣದ ನ್ಯಾಯಾಲಯದ ಸಂಕೀರ್ಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ನಾಲ್ಕು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಒಟ್ಟು ೮,೭೮೩ ಬಾಕಿಯಿರುವ ಪ್ರಕರಣಗಳಲ್ಲಿ ೨,೭೮೩ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಯಿತು. ಇದರಲ್ಲಿ ಒಟ್ಟು ೧,೯೯೬ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.

ತೆಗೆದುಕೊಂಡ ಪ್ರಕರಣಗಳಲ್ಲಿ ಅಪರಾಧ ಪ್ರಕರಣಗಳು, ಎಂವ್ಹಿಸಿ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೆಂಟೇನೆನ್ಸ್ ಪ್ರಕರಣಗಳು, ಪಾಲು ವಾಟ್ನಿ ದಾವೆಗಳು, ಎಲ್‌ಎಸಿಇಪಿ ಪ್ರಕರಣಗಳು, ಎಂವ್ಹಿಸಿ, ಇಪಿ ಪ್ರಕರಣಗಳು, ಅಪರಾಧ ದಂಡ ಪ್ರಕರಣಗಳನ್ನು ರಾಜೀ ಸಂಧಾನ ಮೂಲಕ ಇತ್ಯರ್ಥ ಪಡಿಸಲಾಯಿತು. ಪೂರ್ವದಾವೆ ಪ್ರಕರಣಗಳಲ್ಲಿ, ಟ್ರಾಫಿಕ್ ಚಲನ್ ಪ್ರಕರಣಗಳು, ಕಂದಾಯ ಇಲಾಖೆಯ ಕಂದಾಯ ಅದಲಾತ್ ಪ್ರಕರಣಗಳು ಹಾಗೂ ಬ್ಯಾಂಕಿನ ಪ್ರಕರಣಗಳು, ಹೆಸ್ಕಾಂ ವಿಭಾಗದ ವಿದ್ಯುತ್ ಬಾಕಿ ಪಾವತಿ ಪ್ರಕರಣಗಳು ಸೇರಿ ಒಟ್ಟು ೨,೮೧,೦೫೧ ಪ್ರಕರಣಗಳಲ್ಲಿ ೨,೦೪,೪೭೦ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು. ಈ ಪ್ರಕರಣಗಳಲ್ಲಿ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಶಶಿಧರ ಗೌಡ, ಹೆಚ್ಚುವರಿ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಈಶ್ವರ ಮುಸಲ್ಮಾರಿ, ನ್ಯಾಯಾಧೀಶ ಅಮಿತ ಘಟ್ಟಿ, ಹೆಚ್ಚುವರಿ ಸಿವ್ಹಿಲ್ ನ್ಯಾಯಾಧೀಶ ಈರಪ್ಪ ಢವಳೇಶ್ವರ ಇತ್ಯರ್ಥಪಡಿಸಿದರು. ಲೋಕ ಅದಾಲತನಲ್ಲಿ ಸಂಧಾನಕಾರರಾಗಿ ಜಿ.ಎಸ್.ಚಿಂಚೋಳ್ಳಿ, ಐ.ಎಂ.ಪರಮಗೊಂಡ, ವೈ.ಎನ್.ಲಂಕೆನ್ನವರ, ಬಿ.ಪಿ.ಪತ್ತಾರ, ವೀರಣ್ಣ ಮರ್ತುರ ಇನ್ನೀತರ ವಕೀಲರು ಭಾಗವಹಿಸಿದರು. ಲೋಕ ಅದಾಲತ್‌ನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಆಡಳಿತ ಸಹಾಯಕರು, ನ್ಯಾಯಾಲಯ ಸಿಬ್ಬಂದಿ, ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಇಲಾಖೆಯ ಸಿಬ್ಬಂದಿ, ವಕೀಲರು ಇತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಸ್ತಕ್ಷೇಪ ನಿಲ್ಲಿಸಿ ಎಂದ ಸಿದ್ದು, ಡಿಕೆ ಕೇರಳ ಸಿಎಂ ತಿರುಗೇಟು
ನಾಯಕತ್ವ ಬದಲಾವಣೆ ಗೊಂದಲದ ನಡುವೆಯೇ ಕಸರತ್ತು ಸಿದ್ದರಾಮಯ್ಯ ಬಜೆಟ್‌ ತಯಾರಿ