ದೇಶಪ್ರೇಮ ಮೂಡಿಸಲು ಸೇವಾದಳ ಸಹಕಾರಿ: ಕಟ್ಟಿಮನಿ

KannadaprabhaNewsNetwork |  
Published : Dec 31, 2025, 03:15 AM IST
30ಸಿಡಿಎನ್‌02 | Kannada Prabha

ಸಾರಾಂಶ

ವಿದ್ಯಾರ್ಥಿಗಳಲ್ಲಿ ಶಿಸ್ತು, ಸೇವಾ ಮನೋಭಾವ ಹಾಗೂ ದೇಶಪ್ರೇಮ ಮೂಡಿಸಲು ಸೇವಾದಳ ಸಹಕಾರಿಯಾಗಿದೆ ಎಂದು ಬಿಇಒ ಚಿದಾನಂದ ಕಟ್ಟಿಮನಿ ಹೇಳಿದರು.

ಕನ್ನಡಪ್ರಭ ವಾರ್ತೆ ಚಡಚಣ

ವಿದ್ಯಾರ್ಥಿಗಳಲ್ಲಿ ಶಿಸ್ತು, ಸೇವಾ ಮನೋಭಾವ ಹಾಗೂ ದೇಶಪ್ರೇಮ ಮೂಡಿಸಲು ಸೇವಾದಳ ಸಹಕಾರಿಯಾಗಿದೆ ಎಂದು ಬಿಇಒ ಚಿದಾನಂದ ಕಟ್ಟಿಮನಿ ಹೇಳಿದರು.

ಸಮೀಪದ ಅರ್ಜನಾಳ ಗ್ರಾಮದಲ್ಲಿ ಭಾರತ ಸೇವಾದಳ ಅಮೃತ ಮಹೋತ್ಸವ ಅಂಗವಾಗಿ ಸೋಮವಾರ ಆಯೋಜಿಸಿದ್ದ ಭಾರತ ಸೇವಾದಳ ಸಪ್ತಾಹ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಭಾರತ ಸೇವಾದಳ ವಲಯ ಸಂಘಟಕ ನಾಗೇಶ ಡೋಣೂರ ಮಾತನಾಡಿ, ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿ, ಶಿಸ್ತು, ಸಂಯಮ, ರಾಷ್ಟ್ರೀಯ ಭಾವೈಕ್ಯತೆ, ಪರಿಸರ ಪ್ರೇಮ ಹಾಗೂ ಸೇವಾ ಮನೋಭಾವನೆ ಮೂಡಿಸುವ ಶಿಕ್ಷಣದ ಜೊತೆಗೆ ಮೌಲ್ಯ ಶಿಕ್ಷಣ, ನೈತಿಕ ಶಿಕ್ಷಣ ನೀಡಿ ಅವರನ್ನು ದೇಶದ ಸಚ್ಚಾರಿತ್ರ್ಯವಂತ ನಾಗರಿಕರನ್ನಾಗಿ ರೂಪಿಸುವ ಕಾರ್ಯ ಸೇವಾದಳ ಮುಖ್ಯ ಉದ್ದೇಶವಾಗಿದೆ. ಅದಕ್ಕಾಗಿ ಎಲ್ಲ ಶಾಲೆಗಳಲ್ಲಿ ಸೇವಾದಳ ಘಟಕಗಳನ್ನು ಕಡ್ಡಾಯವಾಗಿ ತೆಗೆಯಬೇಕು ಎಂದು ತಿಳಿಸಿದರು.

ಸೇವಾದಳ ಸಪ್ತಾಹ ಆಚರಣೆ ಅಂಗವಾಗಿ ಮಕ್ಕಳಿಗೆ ವಿವಿಧ ಚಟುವಟಿಕೆಗಳನ್ನು, ಸ್ಪರ್ಧೆಗಳನ್ನು ಏರ್ಪಡಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಸಂಘಟಕ ಆರ್.ಎಸ್.ಗೋಡಿಕಾರ, ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಶಿವಾನಂದ ತೇಲಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ