ಉತ್ತಮ ನಾಗರಿಕರಾಗಿ ಬೆಳೆಸುವ ಸೇವಾದಳ

KannadaprabhaNewsNetwork |  
Published : Feb 22, 2024, 01:51 AM IST
ಕನ್ನೂರ ಗ್ರಾಮದ ಕುವೆಂಪು ಶತಮಾನೋತ್ಸವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಮಕ್ಕಳ ನಾಯಕತ್ವ ಶಿಬಿರಕ್ಕೆ ಚಾಲನೆ ನೀಡಲಾಯಿತು. | Kannada Prabha

ಸಾರಾಂಶ

ವಿಜಯಪುರ: ಸೇವಾದಳದ ಮೂಲಕ ಮಕ್ಕಳಲ್ಲಿ ದೇಶಪ್ರೇಮ, ದೇಶಭಕ್ತಿ, ಸೇವಾಮನೋಭಾವ ಮೂಡಿಸಿದರೇ ಉತ್ತಮ ನಾಗರಿಕರಾಗಿ ಬೆಳೆಯಲು ಸಾಧ್ಯ ಎಂದು ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಎ.ಎಸ್.ಲಾಳಸೇರಿ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಸೇವಾದಳದ ಮೂಲಕ ಮಕ್ಕಳಲ್ಲಿ ದೇಶಪ್ರೇಮ, ದೇಶಭಕ್ತಿ, ಸೇವಾಮನೋಭಾವ ಮೂಡಿಸಿದರೇ ಉತ್ತಮ ನಾಗರಿಕರಾಗಿ ಬೆಳೆಯಲು ಸಾಧ್ಯ ಎಂದು ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಎ.ಎಸ್.ಲಾಳಸೇರಿ ಹೇಳಿದರು.

ತಾಲೂಕಿನ ಕನ್ನೂರ ಗ್ರಾಮದ ಕುವೆಂಪು ಶತಮಾನೋತ್ಸವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಭಾರತ ಸೇವಾದಳ ಜಿಲ್ಲಾ ಸಮಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕುವೆಂಪು ಶತಮಾನೋತ್ಸವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಮಕ್ಕಳ ನಾಯಕತ್ವ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದ ಸೇವೆಗಾಗಿ ಹುಟ್ಟಿಕೊಂಡಿರುವ ಸೇವಾದಳ ಶಿಸ್ತು, ತಾಳ್ಮೆ,ಸೇವಾಮನೋಭಾವದಿಂದ ಬಲಿಷ್ಠ ಸಂಸ್ಥೆಯಾಗಿ ಬೆಳೆದಿದೆ. ರಾಷ್ಟ್ರದ ಗರಿಮೆಗೆ ಗರಿ ಮೂಡಿಸಿದ್ದು, ಸೇವಾದಳವಾಗಿದೆ ಹಾಗೂ ಶಾಲಾ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ರಾಷ್ಟ್ರೀಯ ಭಾವೈಕ್ಯ, ನಿಸ್ವಾರ್ಥ ಸೇವೆಯಂತಹ ಉದಾತ್ತ ಗುಣಗಳನ್ನು ಮೂಡಿಸುವ ಜೊತೆಗೆ ರಾಷ್ಟ್ರಧ್ವಜ, ರಾಷ್ಟ್ರಗೀತೆ ಕುರಿತಾದ ತರಬೇತಿ ನೀಡುತ್ತಿರುವ ಭಾರತ ಸೇವಾದಳದ ಕಾರ್ಯ ಶ್ಲಾಘನೀಯ ಎಂದರು.

ಶಾಲಾ ದೈಹಿಕ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಎಸ್.ಬೇನೂರ ಮಾತನಾಡಿ, ಸೇವಾದಳ ಚಟುವಟಿಕೆಗಳಿಂದ ಪ್ರತಿಯೊಬ್ಬರು ನಿತ್ಯ ಜೀವನದಲ್ಲಿ ಶಿಸ್ತು, ಸಂಯಮ, ದೇಶಭಕ್ತಿ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಪ್ರತಿ ಶಾಲೆಗಳಲ್ಲಿ ಮಕ್ಕಳಿಗೆ ರಾಷ್ಟ್ರಗೀತೆ, ನಾಡಗೀತೆಯನ್ನು ಸುಶ್ರಾವ್ಯವಾಗಿ ಹಾಡುವುದನ್ನು ಎಲ್ಲ ಶಿಕ್ಷಕರು ಕಲಿಸಬೇಕು ಎಂದರು.

ಗ್ರಾಮ ಪಂಚಾಯತಿ ಅಧ್ಯಕ್ಷ ವಿಠ್ಠಲ ಭಜಂತ್ರಿ ಮಾತನಾಡಿದರು. ಗ್ರಾಮ ಪಂಚಾಯತಿ ಸದಸ್ಯರಾದ ಮಾಳು ಅಥಣಿ, ಗಣೇಶ ಕೆಂಗಾರ, ಪ್ರಭಾರಿ ಮುಖ್ಯ ಗುರು ಮಾತೆ ಶಾಂತಾ ಸುಣಗಾರ, ಸೇವಾದಳ ಸಂಪನ್ಮೂಲ ಶಿಕ್ಷಕರಾದ ಸೋಮಶೇಖರ್ ರಾಠೋಡ, ಎಚ್ ಎಸ್ ನಿಮಾದಾರ, ಎಂ.ಜಿ.ಫರೀಟ್, ಎಲ್.ಎಲ್.ತೊರವಿ ಮುಂತಾದವರು ಇದ್ದರು.

ಭಾರತ ಸೇವಾದಳದ ವಲಯ ಸಂಘಟಕ ನಾಗೇಶ ಡೋಣೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರ್.ಪಿ.ಬೋಗಾರ ಕಾರ್ಯಕ್ರಮ ನಿರೂಪಿಸಿದರು. ಎಂ.ಎಂ.ತೆಲಗಿ ವಂದಿಸಿದರು.

PREV

Recommended Stories

ರಾಹುಲ್‌ ಗಾಂಧಿ ಧರಣಿಗೆ 4500 ಪೊಲೀಸರ ಭದ್ರತೆ
ಹಳಿತಪ್ಪಿದ ಬೆಂಗಳೂರು ಉಪನಗರ ರೈಲು ಯೋಜನೆ : ಕೆ-ರೈಡ್ ಜತೆಗಿನ ಎಲ್‌ ಆ್ಯಂಡ್‌ ಟಿ ಗುತ್ತಿಗೆ ರದ್ದು