ಮಂಡ್ಯ ಮಂಜುನಾಥ
ರಣ ಬಿಸಿಲಿಗೆ ಭೂಮಿ ಕಾದು ಕೆಂಡವಾಗಿದೆ. ಕೆರೆ-ಕಟ್ಟೆಗಳೆಲ್ಲಾ ಬತ್ತಿಹೋಗಿವೆ. ಅಂತರ್ಜಲ ಪಾತಾಳ ಸೇರಿಕೊಂಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಅಂತರ್ಜಲ ಮಟ್ಟದಲ್ಲಿ ಸುಮಾರು ಏಳು ಅಡಿಗಳಷ್ಟು ಕುಸಿತ ಕಂಡಿದೆ. ಕೃಷಿಗೆ ಆಸರೆಯಾಗಿದ್ದ ಕೊಳವೆ ಬಾವಿಗಳು ಬತ್ತಿಹೋಗುತ್ತಿರುವುದು ರೈತ ಸಮುದಾಯದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.
ಕಳೆದ ವರ್ಷ ಮಳೆ ಕೊರತೆಯಿಂದ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಲಿಲ್ಲ. ಕೆರೆ-ಕಟ್ಟೆಗಳಿಗೆ ಸಮರ್ಪಕವಾಗಿ ನೀರು ತುಂಬಿಸಲು ಸಾಧ್ಯವಾಗಲಿಲ್ಲ. ಬಿಸಿಲ ತಾಪ ತೀವ್ರಗತಿಯಲ್ಲಿ ಏರಿಕೆಯಾಗಿರುವುದರಿಂದ ಕೆರೆ-ಕಟ್ಟೆಗಳಲ್ಲಿದ್ದ ನೀರೆಲ್ಲವೂ ಬತ್ತಿಹೋಗಿವೆ. ಪರಿಣಾಮ ಅಂತರ್ಜಲದ ಮಟ್ಟವೂ ಗಣನೀಯ ಪ್ರಮಾಣದಲ್ಲಿ ಕುಸಿತಗೊಂಡಿದೆ. ನೀರಿಗೆ ಎಲ್ಲೆಡೆ ಹಾಹಾಕಾರ ಸೃಷ್ಟಿಯಾಗಿದ್ದು ಮಳೆಗಾಗಿ ಜನರು ನಿತ್ಯ ಎದುರುನೋಡುತ್ತಿದ್ದಾರೆ.ಕೆ.ಆರ್.ಪೇಟೆಯಲ್ಲಿ ಹೆಚ್ಚು ಕುಸಿತ:
ಕೊಳವೆ ಬಾವಿ ನಿರ್ಮಾಣಕ್ಕೆ ದುಂಬಾಲು:
ಅಂತರ್ಜಲ ಇಲಾಖೆಗೆ ಇದುವರೆಗೆ ಕೊಳವೆ ಬಾವಿ ನಿರ್ಮಾಣಕ್ಕೆ ೩೦೦ರಿಂದ ೪೦೦ ಅರ್ಜಿ ಸಲ್ಲಿಕೆಯಾಗಿದ್ದರೆ, ಅನಧಿಕೃತವಾಗಿ ನೂರಾರು ಮಂದಿ ರೈತರು ಕೊಳವೆ ಬಾವಿಗಳನ್ನು ನಿರ್ಮಿಸುತ್ತಿದ್ದಾರೆ. ಅಡಿಕೆ, ತೆಂಗು, ಬಾಳೆ, ಟಮೋಟೋ, ತರಕಾರಿ, ಹೂ ಸೇರಿದಂತೆ ನಾನಾ ರೀತಿಯ ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳುವುದಕ್ಕೆ ಕೇವಲ ಮಳೆಯನ್ನೇ ನಂಬಿ ಕೂರದ ರೈತರು ಕೊಳವೆ ಬಾವಿಗಳಿಗೆ ಮೊರೆಹೋಗಿದ್ದಾರೆ. ನೀರು ಸಮೃದ್ಧವಾಗಿ ದೊರೆತಲ್ಲಿ ಹನಿ ನೀರಾವರಿ ಮಾಡಿಕೊಂಡು ಬೆಳೆಗಳನ್ನು ಕಾಪಾಡಿಕೊಳ್ಳುವುದಕ್ಕೆ ಮುತುವರ್ಜಿ ವಹಿಸಿದ್ದಾರೆ.
ಬೋರ್‌ವೆಲ್ ಏಜೆನ್ಸಿಯವರಿಗಂತೂ ಈಗ ಸುಗ್ಗಿ ಕಾಲ. ಹಗಲು-ರಾತ್ರಿ ಎನ್ನದೆ ನಿರಂತರವಾಗಿ ಬೋರ್‌ವೆಲ್‌ಗಳ ನಿರ್ಮಾಣದಲ್ಲಿ ನಿರತರಾಗಿದ್ದಾರೆ. ಪ್ರತಿ ಅಡಿಗೆ ೧೧೦ ರಿಂದ ೧೧೫ರವರೆಗೆ ದರ ನಿಗದಿಪಡಿಸುತ್ತಾ ಬೋರ್‌ವೆಲ್ ನಿರ್ಮಿಸುತ್ತಿದ್ದಾರೆ. ಒಂದೊಂದು ಹಳ್ಳಿಗೆ ಹೋದರೆ ಮೂರ್ನಾಲ್ಕು ಮಂದಿ ಬೋರ್‌ವೆಲ್ ನಿರ್ಮಿಸುವುದಕ್ಕೆ ದುಂಬಾಲು ಬೀಳುತ್ತಿದ್ದಾರೆ. ಎಷ್ಟೋ ಮಂದಿ ನಿಗದಿತ ಸಮಯಕ್ಕೆ ಬೋರ್‌ವೆಲ್ ನಿರ್ಮಿಸುವ ಲಾರಿಗಳು ಸಿಗದೆ ಪರಿತಪಿಸುತ್ತಿದ್ದಾರೆ.
ಒಂದು ಬೋರ್‌ವೆಲ್ ನಿರ್ಮಿಸುವ ಲಾರಿ ದಿನಕ್ಕೆ ಎರಡು ಕೊಳವೆ ಬಾವಿ ನಿರ್ಮಿಸಲು ಶಕ್ತವಾಗಿರುತ್ತದೆ. ಒಮ್ಮೆಲೆ ಆರರಿಂದ ಏಳು ಕೊಳವೆ ಬಾವಿ ನಿರ್ಮಾಣಕ್ಕೆ ರೈತರು ಮುಗಿಬೀಳುತ್ತಿದ್ದಾರೆ. ತಮಗೇ ಮೊದಲು ಕೊಳವೆಬಾವಿ ನಿರ್ಮಿಸುವಂತೆ ಪೈಪೋಟಿಗೆ ಬೀಳುತ್ತಿದ್ದಾರೆ. ಇದು ಬೋರ್‌ವೆಲ್ ಏಜೆನ್ಸಿಯವರಿಗೂ ತಲೆಬಿಸಿ ಉಂಟುಮಾಡಿದೆ.ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಕುಸಿದಿರುವುದು (ಮೀಟರ್‌ಗಳಲ್ಲಿ)
ಕೆ.ಆರ್.ಪೇಟೆ೭.೦೨ ಮೀ.೧೭.೦೭ ಮೀ.
ಮಳವಳ್ಳಿ೬.೧೭ ಮೀ.೯.೧೪ ಮೀ.
ಮಂಡ್ಯ೭.೯೪ ಮೀ.೧೧.೦೧ ಮೀ.ನಾಗಮಂಗಲ೭.೫೭ ಮೀ.೧೦.೪೦ ಮೀ.
ಪಾಂಡವಪುರ೫.೯೭ ಮೀ.೮.೩೬ ಮೀ.ಶ್ರೀರಂಗಪಟ್ಟಣ೨.೭೩ ಮೀ.೩.೩೦ ಮೀ.
ಸರಾಸರಿ೫.೭೬ ಮೀ.೮.೧೫ ಮೀ.ಕಳೆದ ವರ್ಷ ಸಮರ್ಪಕವಾಗಿ ಮಳೆಯಾಗದಿರುವುದು, ಕೆರೆ-ಕಟ್ಟೆಗಳೆಲ್ಲಾ ಒಣಗಿಹೋಗಿರುವುದು ಅಂತರ್ಜಲ ಮಟ್ಟ ಕುಸಿಯುವುದಕ್ಕೆ ಪ್ರಮುಖ ಕಾರಣವಾಗಿದೆ. ಮಳೆಯಾಗದಿದ್ದರೆ ಅಂತರ್ಜಲ ಇನ್ನಷ್ಟು ತೀವ್ರಗತಿಯಲ್ಲಿ ಕುಸಿಯಲಿದೆ. ಬರ ಪರಿಸ್ಥಿತಿಯಲ್ಲಿ ಕೊಳವೆ ಬಾವಿಗಳ ನಿರ್ಮಿಸಿ ಅಂತರ್ಜಲ ಬಳಕೆಗೆ ರೈತರು ಪೈಪೋಟಿಗಿಳಿದಿದ್ದಾರೆ.
- ರಾಜಶ್ರೀ, ಹಿರಿಯ ವಿಜ್ಞಾನಿ, ಜಿಲ್ಲಾ ಅಂತರ್ಜಲ ಇಲಾಖೆ