200ಕ್ಕೂ ಹೆಚ್ಚು ತಾಲೂಕುಗಳಲ್ಲಿ ತೀವ್ರ ಬರ: ಸಿಎಂ

KannadaprabhaNewsNetwork |  
Published : Sep 16, 2026, 01:30 AM IST
ಕೆ ಕೆ ಪಿ ಸುದ್ದಿ 01: ನಗರದಲ್ಲಿ ಸಿಎಂ ಡಿಕೆಶಿ ಸುದ್ದಿಗಾರರೊಂದಿಗೆ ಮಾತನಾಡಿದರು.  | Kannada Prabha

ಸಾರಾಂಶ

ಕನಕಪುರ: ಈ ಬಾರಿ ಭೀಕರ ಬರ ಪರಿಸ್ಥಿತಿಗೆ 200ಕ್ಕೂ ಹೆಚ್ಚು ತಾಲೂಕುಗಳು ಸಿಲುಕಿದ್ದು ಕೇಂದ್ರದ ನಿಯಮಾನುಸಾರ ಬರ ಪೀಡಿತ ತಾಲೂಕುಗಳ ಘೋಷಣೆ ಮಾಡಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು

ಕನಕಪುರ: ಈ ಬಾರಿ ಭೀಕರ ಬರ ಪರಿಸ್ಥಿತಿಗೆ 200ಕ್ಕೂ ಹೆಚ್ಚು ತಾಲೂಕುಗಳು ಸಿಲುಕಿದ್ದು ಕೇಂದ್ರದ ನಿಯಮಾನುಸಾರ ಬರ ಪೀಡಿತ ತಾಲೂಕುಗಳ ಘೋಷಣೆ ಮಾಡಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಗೌರಿ ಗಣೇಶ ಹಬ್ಬದ ಪ್ರಯುಕ್ತ ತಮ್ಮ ಹಿರಿಯರಿಗೆ ಪೂಜೆ ನೆರವೇರಿಸುವ ಅಂಗವಾಗಿ ಸ್ವಗ್ರಾಮ ದೊಡ್ಡಆಲಹಳ್ಳಿಗೆ ತೆರಳುವ ಮುನ್ನ ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಜನತೆಗೆ ಸರ್ಕಾರ ಹಾಗೂ ವೈಯಕ್ತಿಕವಾಗಿ ಗೌರಿ ಹಾಗೂ ಗಣೇಶ ಹಬ್ಬದ ಹಾರ್ದಿಕ ಶುಭಾಶಯ ತಿಳಿಸಿದರು.ನಾನು ರಾಜ್ಯದ ಅನೇಕ ಕಡೆ ಭೇಟಿ ನೀಡಿ ಬರ ಪರಿಶೀಲನೆ ಮಾಡಿದ್ದೇನೆ. ಈಗಾಗಲೇ 102 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಉಳಿದ ಕಡೆ ಪರಿಶೀಲನೆ ನಡೆಯುತ್ತಿದೆ. ಯಾರೂ ಆತಂತ ಪಡಬೇಡಿ. ಎಷ್ಟೋ ಕಡೆ ಬೆಳೆ ನಾಶವಾಗಿದೆ. ಅಂತರ್ಜಲ ಕುಸಿದಿದೆ. ಅನೇಕ ಕಡೆ ಬೆಳೆ ಹಾಕಲಾಗಿಲ್ಲ. ಮುಂದಿನ ದಿನಗಳಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ಅಭಾವ ಹೆಚ್ಚಾಗುವ ಸಾಧ್ಯತೆಗಳಿವೆ. ಕಳೆದ ವಾರ 19,000ಕ್ಕೂ ಹೆಚ್ಚು ಮೆಗಾ ವ್ಯಾಟ್ ವಿದ್ಯುತ್‌ಗೆ ಬೇಡಿಕೆ ಉಂಟಾಗಿತ್ತು. 11, 12 ರು.ಗಳಿಗೆ ವಿದ್ಯುತ್ ಖರೀದಿ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ರಾತ್ರಿ ವೇಳೆ ವಿದ್ಯುತ್ ಬಳಕೆ ಹೆಚ್ಚಾಗಿದೆ. ನೆರೆ ರಾಜ್ಯಗಳ ಜೊತೆ ಚರ್ಚಿಸಲು ಸಚಿವರಿಗೆ ಸೂಚಿಸಿದ್ದೇನೆ. ನಮ್ಮ ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಅನೇಕ ಕಂಪನಿಗಳು ಬರುತ್ತಿವೆ. ವಿದ್ಯುತ್, ನೀರು, ಭೂಮಿ ಬೇಕು ಎಂದು ಬೇಡಿಕೆ ಇಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.

18ರಂದು ದಕ್ಷಿಣ ಕನ್ನಡದಲ್ಲಿ ಸಚಿವ ಸಂಪುಟ ಸಭೆ

ಸೆ.18ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ಮಾಡುಲಾಗುವುದು. ಆ ಭಾಗದ ಶಾಸಕರು, ಮಂತ್ರಿಗಳು, ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆ ಭಾಗದ ಜನರು ಉದ್ಯೋಗಕ್ಕಾಗಿ ಹೊರಗೆ ಹೋಗುತ್ತಿರುವುದನ್ನು ತಪ್ಪಿಸಿ, ಅಲ್ಲಿನ ಪ್ರಾಕೃತಿಕ ಸಂಪತ್ತು ಬಳಸಿಕೊಂಡು ಅವರ ಬದುಕಿನಲ್ಲಿ ಬದಲಾವಣೆ ತರಲು ಹೊಸ ಯೋಜನೆಗಳನ್ನು ಘೋಷಣೆ ಮಾಡಲಾಗುವುದು ಎಂದರು.

ಥರ್ಮಲ್ ವಿದ್ಯುತ್ ಕೇಂದ್ರ ಸ್ಥಾಪನೆಗೆ ನಿರ್ಧಾರ:

ಬರ ಪರಿಸ್ಥಿತಿ ನಿಭಾಯಿಸಲು ಸರ್ಕಾರದ ತಯಾರಿ ಕುರಿತ ಪ್ರಶ್ನೆಗೆ, ನಾನು ಇಂಧನ ಸಚಿವನಾಗಿದ್ದಾಗ ವಿದ್ಯುತ್ ಉತ್ಪಾದನೆ ಪ್ರಮಾಣ ಹೆಚ್ಚಿಸಿದ್ದೆವು. ಬಿಜೆಪಿ ಅವಧಿಯಲ್ಲಿ ಹೆಚ್ಚಳ ಮಾಡಿಲ್ಲ. ಜಾರ್ಜ್ ಅವರು ಸಚಿವರಾದ ಬಳಿಕ ಅನೇಕ ಯೋಜನೆ ರೂಪಿಸಿದ್ದು, ಕಲ್ಲಿದ್ದಲು ನಿಕ್ಷೇಪ ಇರುವ ಕಡೆಗಳಲ್ಲೇ ತುರ್ತಾಗಿ ಥರ್ಮಲ್ ಇಂಧನ ತಯಾರಿಕ ಘಟಕ ಸ್ಥಾಪಿಸಬೇಕು. ಒನ್ ನೇಷನ್ ಒನ್ ಗ್ರಿಡ್ ಮಾಡಲಾಗಿದ್ದು, ಎಲ್ಲೆ ವಿದ್ಯುತ್ ಉತ್ಪಾದನೆಯಾದರೂ ನಾವು ನಮ್ಮ ರಾಜ್ಯಕ್ಕೆ ತರಬಹುದು. ಇದಕ್ಕೆ ಸರಬರಾಜು ವೆಚ್ಚ ಬೀಳಲಿದೆ. ಈ ವಿಚಾರವಾಗಿ ಇಂಧನ ಸಚಿವರು ಹಾಗೂ ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ ಎಂದು ಹೇಳಿದರು.

ಬರ, ಕಸ್ತೂರಿ ರಂಗನ್ ವರದಿ ಚರ್ಚೆಗೆ ವಿಶೇಷ ಅಧಿವೇಶನ:

ಬರ ಘೋಷಣೆ ಬಗ್ಗೆ ಮಾತನಾಡಿದ ಸಿಎಂ, ಬಿಜೆಪಿ ನಾಯಕರಿಗೆ ರಾಜ್ಯದ ರೈತರ, ಬಡವರ, ಸಾಮಾನ್ಯ ಜನರ ಹಿತಕ್ಕಿಂತ ರಾಜಕಾರಣವೇ ಹೆಚ್ಚಾಗಿದೆ. ರೈತರ ವಿಚಾರ ಚರ್ಚೆ ಹಾಗೂ ಕಸ್ತೂರಿ ರಂಗನ್ ವಿಚಾರವಾಗಿ ಚರ್ಚೆ ಮಾಡಲು 3 ದಿನಗಳ ವಿಶೇಷ ಅಧಿವೇಶನ ಕರೆಯಲಾಗಿದೆ. ನಮ್ಮ ಶಾಸಕರ ಜೊತೆಗೆ ಬಿಜೆಪಿ ಶಾಸಕರು ಕೂಡ ಬೇಸರ ವ್ಯಕ್ತಪಡಿಸಿ ತಮ್ಮ ನೋವು ಹಂಚಿಕೊಂಡಿದ್ದಾರೆ. ಹೀಗಾಗಿ ಈ ವಿಚಾರದ ಚರ್ಚೆಗೆ ಸೆ.21ರಿಂದ 23ರವರೆಗೆ ಅಧಿವೇಶನವನ್ನು

ಕರೆಯಲಾಗಿದೆ. ಶಾಸಕರು ಗಾಬರಿ ಆಗುವುದು ಬೇಡ. ರಾಜಕಾರಣ ಮಾಡುವವರಿಗೆ ನಾವು ಏನೂ ಮಾಡಲು ಆಗುವುದಿಲ್ಲ. ಬರ ಘೋಷಣೆ ಶೀಘ್ರವೇ ಪ್ರಕಟಿಸಲಾಗುವುದು. ಇಡೀ ದಿನ ಸ್ವ ಕ್ಷೇತ್ರಕ್ಕೆ ಮೀಸಲಿಟ್ಟಿದ್ದು ನಮ್ಮ ಪೂರ್ವಿಕರಿಗೆ ಪೂಜೆ ಸಲ್ಲಿಸಲು ಭಾನುವಾರ ಹಾಸ್ಟೆಲ್‌ಗೆ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಚರ್ಚಿಸಿದಾಗ ಇಬ್ಬರು ಸ್ಥಳೀಯರು ಬಿಟ್ಟರೆ ಉಳಿದವರು ಬೇರೆ ಜಿಲ್ಲೆಗಳ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವುದು ತಿಳಿದು ನನ್ನ ತಾಲೂಕಿನ ಶಿಕ್ಷಣದ ಗುಣಮಟ್ಟದ ಬಗ್ಗೆ ಹೆಮ್ಮೆ ಎನಿಸಿತು. ನಮ್ಮ ಮನೆ ಮಕ್ಕಳ ಮೇಲೆ ನಿಗಾ ಇಟ್ಟು ಅವರು ತಪ್ಪುದಾರಿಗೆ ಹೋಗದಂತೆ ಕಾಪಾಡಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದ್ದು ಅಧಿಕಾರಿಗಳು ಗಮನ ಹರಿಸುವಂತೆ ಸೂಚಿಸಿದರು.

ಎಲ್ಲರಿಗೂ ಆಹ್ವಾನ ನೀಡಿದ್ದೇವೆ:

ಸರ್ಕಾರದ 100 ದಿನಗಳ ಕಾರ್ಯಕ್ರಮಕ್ಕೆ ಹರಿಪ್ರಸಾದ್ ಅವರನ್ನು ಆಹ್ವಾನಿಸಿಲ್ಲವೆಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾವು ಆಹ್ವಾನಿಸಿಲ್ಲ ಎಂದು ಹೇಳಿದವರು ಯಾರು? ವಿರೋಧ ಪಕ್ಷಗಳ ಶಾಸಕರು ಸೇರಿದಂತೆ ಎಲ್ಲರನ್ನು ಆಹ್ವಾನಿಸಿದ್ದೇವೆ. ವೇದಿಕೆ ಮೇಲೆ ನಮ್ಮದೇ ಆದ ಶಿಷ್ಟಾಚಾರ ಇರುತ್ತದೆ. ಅವರು ನಮ್ಮ ಪಕ್ಷದ ಅಧ್ಯಕ್ಷರು ಪಕ್ಷದ ಜೊತೆ ಸೇರಿಕೊಂಡೆ ನಾವು ಕೆಲಸ ಮಾಡುತ್ತೇವೆ ಎಂದರು.

ಕೆ ಕೆ ಪಿ ಸುದ್ದಿ 01(1):

ಕನಕಪುರದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸುದ್ದಿಗಾರರೊಂದಿಗೆ ಮಾತನಾಡಿದರು.

ಕೆ ಕೆ ಪಿ ಸುದ್ದಿ 1(2)

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ವಗ್ರಾಮ ದೊಡ್ಡ ಆಲಹಳ್ಳಿಯಲ್ಲಿ ಹಿರಿಯರ ಸಮಾಧಿಗೆ ಪೂಜೆ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಂದೇ ಮಾತರಂ 6 ಚರಣ ಹಾಡಲು ಬಿಜೆಪಿ ಆಗ್ರಹ
ಒಂದು ವಾರದ ಗಣೇಶೋತ್ಸವಕ್ಕೆ ಶಾಸಕ ಉದಯ್‌ ಚಾಲನೆ