14ರಂದು ಸೂರಗೊಂಡನಕೊಪ್ಪದಲ್ಲಿ ಸೇವಾಲಾಲ್‌ 286ನೇ ಜಯಂತಿ

KannadaprabhaNewsNetwork |  
Published : Feb 11, 2025, 12:46 AM IST
(ಫೋಟೋ: ಸಾಂದರ್ಭಿಕ ಚಿತ್ರ) | Kannada Prabha

ಸಾರಾಂಶ

ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ, ರಾಜ್ಯ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರಿನ ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ಧಿ ಮತ್ತು ನಿರ್ವಹಣಾ ಪ್ರತಿಷ್ಠಾನ, ಸೂರಗೊಂಡನಕೊಪ್ಪದ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ ಸಹಯೋಗದಲ್ಲಿ ಸೇವಾಲಾಲ್‌ರವರ 286ನೇ ಜಯಂತ್ಯುತ್ಸವ, ವಿವಿಧ ಕಟ್ಟಡಗಳ ಉದ್ಘಾಟನಾ ಕಾರ್ಯಕ್ರಮ ಫೆ.14ರಂದು ಜಿಲ್ಲೆಯ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪ ಭಾಯಗಡ್‌ನಲ್ಲಿ ನಡೆಯಲಿದೆ.

- ಸಿದ್ದರಾಮಯ್ಯ, ಎಚ್‌ಡಿಕೆ, ಡಿಕೆಶಿ, ಎಚ್‌.ಕೆ.ಪಾಟೀಲ್‌ ಮತ್ತಿತರ ಸಚಿವರ ಉಪಸ್ಥಿತಿ ವಿಶೇಷ

- - - - ಮಹಾರಾಷ್ಟ್ರ ಸರ್ಕಾರದ ಮಣ್ಣು-ಜಲ ಸಂರಕ್ಷಣಾ ಸಚಿವ ಸಂಜಯ್ ಡಿ.ರಾಥೋಡ್ ಭಾಗಿ

- ಬಿ.ಎಸ್.ಯಡಿಯೂರಪ್ಪ, ಅಶೋಕ್, ಸತೀಶ್ ಜಾರಕಿಹೊಳಿ, ಮಧು ಬಂಗಾರಪ್ಪ ಇತರರು ಮುಖ್ಯ ಅತಿಥಿ

- - - ಕನ್ನಡಪ್ರಭ ವಾರ್ತೆ ದಾವಣಗೆರೆ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ, ರಾಜ್ಯ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರಿನ ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ಧಿ ಮತ್ತು ನಿರ್ವಹಣಾ ಪ್ರತಿಷ್ಠಾನ, ಸೂರಗೊಂಡನಕೊಪ್ಪದ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ ಸಹಯೋಗದಲ್ಲಿ ಸೇವಾಲಾಲ್‌ರವರ 286ನೇ ಜಯಂತ್ಯುತ್ಸವ, ವಿವಿಧ ಕಟ್ಟಡಗಳ ಉದ್ಘಾಟನಾ ಕಾರ್ಯಕ್ರಮ ಫೆ.14ರಂದು ಜಿಲ್ಲೆಯ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪ ಭಾಯಗಡ್‌ನಲ್ಲಿ ನಡೆಯಲಿದೆ.

ಮಧ್ಯಾಹ್ನ 2 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ ಅಧ್ಯಕ್ಷತೆ ವಹಿಸುವರು. ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿರುವರು.

ಕಾರ್ಯಕ್ರಮಗಳಿಗೆ ಸಚಿವರು:

ಹಾತಿರಾಂ ಬಾವಾಜಿ ಸಭಾಂಗಣವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸುವರು. ಸಂತ ಸೇವಾಲಾಲ್ ಭಾವಚಿತ್ರಕ್ಕೆ ಗಣಿ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹಾದೇವಪ್ಪ ವಲಸೆ ಮಕ್ಕಳ ವಸತಿ ಶಾಲೆ ಶಂಕುಸ್ಥಾಪನೆ ನರೆವೇರಿಸುವರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಸಂತ ಸೇವಾಲಾಲ್ ವಿಹಾರವನ ಉದ್ಘಾಟಿಸುವರು. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಟ್ಟಡವನ್ನು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವ ಡಾ.ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ಉದ್ಘಾಟಿಸುವರು. ಸೇವಾಲಾಲ್ ಸರೋವರವನ್ನು ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವ ಸಂಜಯ್ ಡಿ.ರಾಥೋಡ್ ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆಯ ಉಪಸಭಾಪತಿ, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಉಪಸ್ಥಿತರಾಗಿರುವರು.

ಶಿವಮೊಗ್ಗ ಸಂಸದ, ಸಂತ ಸೇವಾಲಾಲ್ ಪ್ರತಿಷ್ಠಾನದ ಸದಸ್ಯ ಬಿ.ವೈ. ರಾಘವೇಂದ್ರ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ.ಹರೀಶ್, ಶಿವಮೊಗ್ಗ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಶಾರದಾ ಪೂರ‍್ಯಾನಾಯ್ಕ, ಔರಾದ್ ಶಾಸಕ ಪ್ರಭು ಬಿ. ಚವ್ಹಾಣ್, ಹಗರಿಬೊಮ್ಮನಹಳ್ಳಿ ಶಾಸಕ ನೇಮಿರಾಜ್ ನಾಯ್ಕ, ಚಿಂಚೋಳಿ ಶಾಸಕ ಡಾ. ಅವಿನಾಶ್ ಜಾಧವ್, ಹೂವಿನಹಡಗಲಿ ಶಾಸಕ ಕೃಷ್ಣನಾಯ್ಕ, ಶಿರಹಟ್ಟಿ ಶಾಸಕ ಡಾ.ಚಂದ್ರ ಲಮಾಣಿ, ವಿಧಾನ ಪರಿಷತ್ತು ಸದಸ್ಯರಾದ ಎಸ್.ಎಲ್. ಭೋಜೇಗೌಡ, ಚಿದಾನಂದ ಎಂ. ಗೌಡ, ಡಿ.ಎಸ್.ಅರುಣ್, ಕೆ.ಎಸ್. ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ ಸರ್ಜಿ, ಡಿ.ಟಿ.ಶ್ರೀನಿವಾಸ್, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎನ್ ಜಯದೇವ ನಾಯ್ಕ, ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಎಸ್. ಭೀಮಾನಾಯ್ಕ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಕಾಂತಾ ನಾಯಕ್, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ. ಎ.ಆರ್. ಗೋವಿಂದಸ್ವಾಮಿ, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ, ಮಾಜಿ ಸಚಿವ ಹಾಗೂ ಉನ್ನತ ಮಟ್ಟದ ಸಲಹಾ ಸಮಿತಿ ಅಧ್ಯಕ್ಷ ಪಿ.ಟಿ. ಪರಮೇಶ್ವರ ನಾಯ್ಕ, ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ, ಚಿನ್ನಿಕಟ್ಟಿ ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ ಸಂಸ್ಥಾಪಕ ಸದಸ್ಯ ಡಾ. ಎಲ್. ಈಶ್ವರ್ ನಾಯ್ಕ ಭಾಗವಹಿಸುವರು.

- - -

ಬಾಕ್ಸ್‌* ರಾಜ್ಯಮಟ್ಟದ ವಿಚಾರ ಸಂಕಿರಣ ಫೆ.13ರಂದು ಸಂಜೆ 4.30ಕ್ಕೆ ಸೂರಗೊಂಡನಕೊಪ್ಪ ಭಾಯಾಗಡ್‌ದಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ ಆಯೋಜಿಸಲಾಗಿದೆ. ಬಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ. ಎ.ಆರ್. ಗೋವಿಂದಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು. ನಿವೃತ್ತ ಹಿರಿಯ ಅಧಿಕಾರಿ ಬಿ.ಹೀರಾನಾಯ್ಕ ಅಧ್ಯಕ್ಷತೆ ವಹಿಸುವರು. ವಿಧಾನಸಭೆ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ ಅಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಭಾಗವಹಿಸುವರು.

ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ ನಿರ್ದೇಶಕ ರಾಘವೇಂದ್ರ ನಾಯ್ಕ, ಭಾಯಾಗಡ್ ನಿರ್ದೇಶಕ ಡಾ. ಎಲ್. ಈಶ್ವರ ನಾಯ್ಕ, ಡಿ.ಥಾರ‍್ಯಾನಾಯ್ಕ, ಗೋಪಾಲ್ ನಾಯ್ಕ, ಬೋಜಾನಾಯ್ಕ, ಉಪಾಧ್ಯಕ್ಷರಾದ ಕುಮಾರ ನಾಯ್ಕ ಬಾಂಬೆ, ಮಲ್ಲಿಕಾರ್ಜುನ್ ಬಿ.ನಾಯ್ಕ, ಧರ್ಮದರ್ಶಿ ಬೋಜ್ಯಾ ನಾಯ್ಕ, ಕರ್ನಾಟಕ ಹಕ್ಕು ಸಂರಕ್ಷಣಾ ಸಮಿತಿ ಅಧ್ಯಕ್ಷ ಎಸ್.ಆರ್. ರಾಜಾನಾಯ್ಕ ಸಿಂಗಟಗೆರೆ, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ ಪ್ರಧಾನ ಕಾರ್ಯದರ್ಶಿ ನರೇನಹಳ್ಳಿ ಅರುಣಕುಮಾರ್ ಭಾಗವಹಿಸುವರು. ಹಿರಿಯ ಸಾಹಿತಿ ಡಾ. ಬಿ.ಟಿ. ಲಲಿತ ನಾಯಕ ಅಧ್ಯಕ್ಷತೆ ವಹಿಸುವರು.

ಬಂಜಾರ ಸಮುದಾಯದ ಪ್ರಧಾನ ದೈವಗಳು ಹಾಗೂ ಮಹಿಳಾ ದೈವಗಳ ಆರಾಧನೆ ಕುರಿತು ವಿಶ್ರಾಂತ ಪ್ರಾಧ್ಯಾಪಕ, ಸಾಹಿತಿ ಪ್ರೊ.ಸಣ್ಣರಾಮ ನಾಯ್ಕ ವಿಷಯ ಮಂಡನೆ ಮಾಡುವರು. ಬೆಂಗಳೂರು ವಿವಿ ಉಪನ್ಯಾಸಕ ಡಾ. ಡಿ.ಪರಮೇಶ್ವರನಾಯ್ಕ ಸಂವಾದ ಮಾಡುವರು.

ಬಹುತ್ವ ಸಂಸ್ಕೃತಿಗಳ ಭಾರತದಲ್ಲಿ ಅಲೆಮಾರಿ ಬುಡಕಟ್ಟುಗಳ ಧಾರ್ಮಿಕ ಶ್ರದ್ಧೆ ಮತ್ತು ಲೋಕದೃಷ್ಟಿಯ ಕುರಿತು ಸಂಸ್ಕೃತಿ ಚಿಂತಕ ಡಾ.ವಡ್ಡಗೆರೆ ನಾಗರಾಜ ನಾಯ್ಕ ವಿಷಯ ಮಂಡನೆ ಮಾಡುವರು. ಪ್ರಗತಿಪರ ಚಿಂತರಕರು ಹಾಗೂ ಕೃಷಿಕ ಡಾ. ಎಸ್.ಇಂದ್ರಾನಾಯ್ಕ ಮತ್ತು ನಿವೃತ್ತ ಡಿವೈಎಸ್‌ಪಿ ಗೋಪಾಲ ನಾಯ್ಕ ಸಂವಾದ ನಡೆಸುವರು.

ಧರ್ಮ ವೈಚಾರಿಕತೆ ಮತ್ತು ವೈಜ್ಞಾನಿಕತೆ ಕುರಿತು ಸವಣೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಗಂಗಾನಾಯ್ಕ ಎಲ್. ವಿಷಯ ಮಂಡನೆ ಮಾಡುವರು. ಸಹ್ಯಾದ್ರಿ ಕಾಲೇಜಿನ ಉಪನ್ಯಾಸಕರಾದ ಡಾ.ರಾಜು ಮತ್ತು ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ.ಶಿವಣ್ಣ ನಾಯ್ಕ ಸಂವಾದ ನಡೆಸುವರು.

- - -(ಫೋಟೋ: ಸಾಂದರ್ಭಿಕ ಚಿತ್ರ)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ