ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಬಿವಿವಿ ಸಂಘದ ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಮನೋವೈದ್ಯಕೀಯ ವಿಭಾಗದ ವತಿಯಿಂದ ಆಯೋಜಿಸಿದ್ದ ಕಾನೂನಿನಿಂದ ಕಾರ್ಯಪ್ರಯೋಗದವರೆಗೆ ಮಕ್ಕಳ ರಕ್ಷಣೆಯಲ್ಲಿ ವೈದ್ಯರ ಜವಾಬ್ದಾರಿ ಕಾರ್ಯಾಗಾರದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕುರಿತು ವೈದ್ಯರು ತಜ್ಞ ಅಭಿಪ್ರಾಯದ ವರದಿ ರಚಿಸುವ ಅಗತ್ಯವಿದೆ. ವರದಿ ರಚನೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯ ಕಂಡುಬಂದರೆ ಅಪರಾಧಿಗಳು ಕಾನೂನಿನಿಂದ ತಪ್ಪಿಸಿಕೊಳ್ಳುವ ಅಪಾಯವಿದೆ ಎಂದು ಹೇಳಿದರು.
ಇದೇ ಸಂದರ್ಭ ನಿಮ್ಹಾನ್ಸ್ ಸಂಸ್ಥೆಯ ಇನ್ನಿಬ್ಬರು ಮನೋವೈದ್ಯ ಡಾ.ಸಿ.ನವೀನ್ ಕುಮಾರ ಮತ್ತು ಡಾ.ಎನ್. ಮಂಜುನಾಥ ಪೋಕ್ಸೋ ಕಾಯ್ದೆ-2012 ರ ಕುರಿತು ಹಾಗೂ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ಮನಸ್ಸಿನ ಮೇಲಾಗುವ ಪರಿಣಾಮಗಳ ಬಗ್ಗೆ ಉಪನ್ಯಾಸ ನೀಡಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್.ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಡಾ.ಭುವನೇಶ್ವರಿ ಯಳಮಲಿ ಅವರು ಪೋಕ್ಸೋ ಕಾಯ್ದೆಯ ಅರಿವಿನ ಮಹತ್ವ ಹೆಚ್ಚಿಸುವ ಅಗತ್ಯವಿದೆ. ಈ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೆ ಬರುವಲ್ಲಿ ವೈದ್ಯರ ಪಾತ್ರ ಗಮನಾರ್ಹವಾಗಿದೆ. ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ನಾರಾಯಣ ಮುತಾಲಿಕ್ ಸ್ವಾಗತಿಸಿ ಪೋಕ್ಸೋ ಕಾಯ್ದೆ ಕುರಿತು ವೈದ್ಯರಲ್ಲಿ ಹೆಚ್ಚಿನ ಅರಿವು ಮೂಡಿಸಲು ಈ ಕಾರ್ಯಾಗಾರ ಆಯೋಜಿಸಲಾಗಿದೆ ಎಂದರು. ಡಾ.ಸುಷ್ಮಾ ಇನಾಮದಾರ್ ವಂದಿಸಿದರು.
ವೈದ್ಯಕೀಯ ಅಧೀಕ್ಷಕ ಡಾ.ಶ್ರೀರಾಮ ಕೋರಾ, ಸ್ತ್ರೀರೋಗ ವಿಭಾಗದ ಮುಖ್ಯಸ್ಥೆ ಡಾ.ಆಶಾಲತಾ ಮಲ್ಲಾಪೂರ, ಚಿಕ್ಕಮಕ್ಕಳ ವಿಭಾಗದ ಮುಖ್ಯಸ್ಥ ಡಾ.ಅಶೋಕ ಬಡಕಲಿ, ಮನೋವೈದ್ಯಕೀಯ ವಿಭಾಗದ ವೈದ್ಯರು ಮತ್ತು ಸಿಬ್ಬಂದಿ, ವಿವಿಧ ವಿಭಾಗಗಳ ಮುಖ್ಯಸ್ಥರು, ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಪೋಕ್ಸೋ ಕಾಯ್ದೆ ಕುರಿತು ಜಾಗೃತಿ ಮೂಡಿಸಲು ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಿದ್ದ ಮನೋವೈದ್ಯಕೀಯ ವಿಭಾಗದ ವೈದ್ಯರನ್ನು ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಸಿ. ಚರಂತಿಮಠ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಂ.ಸಜ್ಜನ (ಬೇವೂರ) ಮತ್ತು ಪ್ರಾಚಾರ್ಯ ಡಾ.ಭುವನೇಶ್ವರಿ ಯಳಮಲಿ ಅಭಿನಂದಿಸಿದರು.