ಬಾಲಕಿಗೆ ಲೈಂಗಿಕ ದೌರ್ಜನ್ಯ ಕೇಸ್‌: 20 ವರ್ಷ ಕಠಿಣ ಸಜೆ ತೀರ್ಪು

KannadaprabhaNewsNetwork |  
Published : May 03, 2026, 02:30 AM IST
ನಗರದ ಬಿಮ್ಸ್‌ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬಾಂಬ್ ದಾಳಿ ನಡೆದಂತೆ ಅಣಕು ಪ್ರದರ್ಶನ | Kannada Prabha

ಸಾರಾಂಶ

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್ ಟಿಎಸ್ ಸಿ​2) ಪೋಕ್ಸೋ ನ್ಯಾಯಾಲಯದಲ್ಲಿ ಸಾಬೀತಾಗಿದೆ. ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 40 ಸಾವಿರ ರು. ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್ ಟಿಎಸ್ ಸಿ​2) ಪೋಕ್ಸೋ ನ್ಯಾಯಾಲಯದಲ್ಲಿ ಸಾಬೀತಾಗಿದೆ. ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 40 ಸಾವಿರ ರು. ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

ದಯಾನಂದ ಮೂಲ್ಯ (44) ಶಿಕ್ಷೆಗೊಳಗಾದ ಅಪರಾಧಿ. 2025ರ ನ.16ರಂದು ಮಧ್ಯಾಹ್ನ 2 ಗಂಟೆ ವೇಳೆಗೆ ಘಟನೆ ನಡೆದಿತ್ತು. ಏಳು ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮನೆಯಲ್ಲಿ ಒಬ್ಬಳೇ ಓದುತ್ತಿದ್ದಾಗ ದಯಾನಂದ ಮೂಲ್ಯ ಮನೆಗೆ ಅಕ್ರಮ ಪ್ರವೇಶ ಮಾಡಿದ್ದಾನೆ. ಬಳಿಕ ಆಕೆಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿ, ಆ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡಿ ಬಾವಿಗೆ ಎಸೆಯುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ. ನೊಂದ ಬಾಲಕಿ ಈ ವಿಚಾರನ್ನು ತನ್ನ ತಾಯಿಗೆ ಹೇಳಿದ್ದು, ಅವರು ನೀಡಿದ ದೂರಿನಂತೆ ನ.22ರಂದು ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸ್ ನಿರೀಕ್ಷಕ ಮಂಜುನಾಥ ಬಿ.ಎಸ್. ಅವರು ಪ್ರಕರಣದ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ. ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯದ ನ್ಯಾಯಾಧೀಶೆ ಮಾನು. ಕೆ.ಎಸ್. ಅವರು, ದಯಾನಂದ ಮೂಲ್ಯ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಮೇ 2 ರಂದು ಶಿಕ್ಷೆ ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ವಿಶೇಷ ಪೋಕ್ಸೋ ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ಸಾಕ್ಷಿ ವಿಚಾರಣೆ ನಡೆಸಿ ವಾದ ಮಂಡಿಸಿದ್ದಾರೆ.ದಂಡದ ಮೊತ್ತ 40 ಸಾವಿರ ರು. ಜತೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 3.60 ಲಕ್ಷ ರು. ಸೇರಿಸಿ ಒಟ್ಟು 4 ಲಕ್ಷ ರು.ವನ್ನು ಸಂತ್ರಸ್ತ ಬಾಲಕಿಗೆ ಪರಿಹಾರವಾಗಿ ಪಾವತಿಸುವಂತೆ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.ಅಪ್ರಾಪ್ತ ವಯಸ್ಸಿನ ಬಾಲಕಿಗೆ ದೌರ್ಜನ್ಯ ಎಸಗಿದ ಪ್ರಕರಣವನ್ನು ನ್ಯಾಯಾಧೀಶರು ಗಂಭೀರವಾಗಿ ಪರಿಗಣಿಸಿದ್ದರು. ಪ್ರಕರಣ ದಾಖಲಾದ ಐದು ತಿಂಗಳಲ್ಲೇ ಅಪರಾಧ ಸಾಬೀತಾಗಿ ಶಿಕ್ಷೆಯಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಮಾಯಣದ ಭಕ್ತಿರಸದಲ್ಲಿ ಮಿಂದೆದ್ದ ಗೋಕುಲಂ ಗೋಶಾಲೆ
ದುಬೈನಿಂದ ಪತಿ ಪಾರ್ಸೆಲ್‌ ಕಳುಹಿಸಿದ್ದಾರೆ ಎಂದು ನಂಬಿಸಿ ಮಹಿಳೆಗೆ ವಂಚನೆ