ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ

KannadaprabhaNewsNetwork |  
Published : Nov 14, 2026, 02:15 AM IST
ಮುಂಡಗೋಡ: ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ನಿಸ್ಪಕ್ಷಪಾತವಾಗಿ ತನಿಖೆ ನಡೆಸಿ ಸಂತ್ರಸ್ತ ಬಾಲಕಿಗೆ ನ್ಯಾಯ ಒದಗಿಸುವುದರ ಜತೆಗೆ ಆರೋಪಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಶುಕ್ರವಾರ ಸಂಜೆ ಮುಸ್ಲೀಂ ಸಮಾಜದವರು ಕಪ್ಪು ಪಟ್ಟಿ ದರಿಸಿಕೊಂಡು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಬಾಲಕಿಯ ಮೇಲೆ ೬೬ ವರ್ಷದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಗಂಭೀರ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಹಾಗೂ ಆತಂಕಕ್ಕೆ ಕಾರಣವಾಗಿದೆ.

ಮುಂಡಗೋಡ: ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸಂತ್ರಸ್ತೆಗೆ ನ್ಯಾಯ ಒದಗಿಸುವುದರ ಜತೆಗೆ ಆರೋಪಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಶುಕ್ರವಾರ ಸಂಜೆ ಮುಸ್ಲೀಂ ಸಮಾಜದವರು ಕಪ್ಪು ಪಟ್ಟಿ ಧರಿಸಿಕೊಂಡು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪಟ್ಟಣದ ಬನ್ನಿಕಟ್ಟೆ ಬಳಿಯ ಮಸೀದಿಯಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯು ‘ಬೇಕೇ ಬೇಕು ನ್ಯಾಯ ಬೇಕು’, ‘ಆರೋಪಿಗೆ ಕಠಿಣ ಶಿಕ್ಷೆಯಾಗಲೇಬೇಕು’ ಎಂಬ ಘೋಷಣೆಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪೊಲೀಸ್ ಠಾಣೆ ಆವರಣಕ್ಕೆ ತಲುಪಿತು. ಬಳಿಕ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಸಂತ್ರಸ್ತ ಬಾಲಕಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು.

ಬಾಲಕಿಯ ಮೇಲೆ ೬೬ ವರ್ಷದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಗಂಭೀರ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಹಾಗೂ ಆತಂಕಕ್ಕೆ ಕಾರಣವಾಗಿದೆ. ಬಾಲಕಿಯ ಬಾಲ್ಯ, ಭವಿಷ್ಯ ಹಾಗೂ ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಿರುವ ಈ ಪ್ರಕರಣವನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ಪ್ರಕರಣದ ತನಿಖೆಯಲ್ಲಿ ಯಾವುದೇ ಒತ್ತಡ ಅಥವಾ ಪ್ರಭಾವಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಾನೂನುಬದ್ಧ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಲೈಂಗಿಕ ದೌರ್ಜನ್ಯ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಶಿವಾನಿ ಆಗ್ರಹ

ಭಟ್ಕಳ: ಜಿಲ್ಲೆಯ ಮುಂಡಗೋಡ ತಾಲೂಕಿನ ಬಾಲಕಿ ಮೇಲೆ ನಡೆದ ಅಮಾನವೀಯ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಶಿವಾನಿ ಶಾಂತರಾಮ ಭಟ್ಕಳ ಅವರು ತೀವ್ರವಾಗಿ ಖಂಡಿಸಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ಅವರು, ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಸಂತ್ರಸ್ತ ಬಾಲಕಿಗೆ ಶೀಘ್ರ ನ್ಯಾಯ ದೊರಕಿಸಿಕೊಡುವ ಕೆಲಸ ಆಗಬೇಕು. ಇಂತಹ ಕೃತ್ಯ ಎಸಗುವವರಿಗೆ ಸಮಾಜಕ್ಕೆ ಪಾಠ ಆಗುವ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿರುವ ಅವರು, ಕಾಂಗ್ರೆಸ್ ಸರ್ಕಾರದ ಆಡಳಿತದ ಅವಧಿಯಲ್ಲಿ ಮಹಿಳೆಯರ ಹಾಗೂ ಮಕ್ಕಳ ರಕ್ಷಣೆಯ ವಿಷಯದಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ರಾಜ್ಯ ಗೃಹ ಇಲಾಖೆ ಸಂಪೂರ್ಣ ವೈಫಲ್ಯ ಹೊಂದಿದೆ. ಇನ್ನಾದರೂ ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಸರ್ಕಾರದ ಮೊದಲ ಆದ್ಯತೆಯಾಗಿರಬೇಕು. ಇಂತಹ ಕೃತ್ಯ ಯಾರೇ ಎಸಗಿದರೂ ಅವರ ಮೇಲೆ ಕಠಿಣ ಕಾನೂನು ಕ್ರಮ ಆಗಬೇಕು ಎಂದು ಅವರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ಸರ್ವತೋಮುಖ ಪ್ರಗತಿಗೆ ಶ್ರಮಿಸಿ
ಎಸಿಯಾಗಿ ಪದೋನ್ನತಿ ಹೊಂದಿದ ತಹಸೀಲ್ದಾರ್‌ ಬೋಸಗಿ