ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ವೃದ್ಧನ ಸೆರೆ

KannadaprabhaNewsNetwork |  
Published : Nov 09, 2026, 02:15 AM IST
ಮುಂಡಗೋಡ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆಘಾತಕಾರಿ ಪ್ರಕರಣ ತಾಲೂಕಿನ ಸಿಂಗನಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಮುಂಡಗೋಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. | Kannada Prabha

ಸಾರಾಂಶ

ಸಿಂಗನಳ್ಳಿ ಗ್ರಾಮದ ಇಸ್ಮಾಯಿಲ್ ಹುಲಗೂರ(೬೫) ಬಂಧಿತ ಆರೋಪಿ. ಆರನೇ ತರಗತಿಯ ವಿದ್ಯಾರ್ಥಿನಿ ಸಂತ್ರಸ್ತೆಯಾಗಿದ್ದು, ಆಕೆ ಪರಿಶಿಷ್ಟ ಪಂಗಡಕ್ಕೆ ಸೇರಿದವಳಾಗಿದ್ದು, ಬಾಲಕಿಯನ್ನು ಪುಸಲಾಯಿಸಿ, ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಮುಂಡಗೋಡ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆಘಾತಕಾರಿ ಪ್ರಕರಣ ತಾಲೂಕಿನ ಸಿಂಗನಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಮುಂಡಗೋಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ತಾಲೂಕಿನ ಸಿಂಗನಳ್ಳಿ ಗ್ರಾಮದ ಇಸ್ಮಾಯಿಲ್ ಹುಲಗೂರ (೬೫) ಬಂಧಿತ ಆರೋಪಿ. ಆರನೇ ತರಗತಿಯ ವಿದ್ಯಾರ್ಥಿನಿ ಸಂತ್ರಸ್ತೆಯಾಗಿದ್ದು, ಆಕೆ ಪರಿಶಿಷ್ಟ ಪಂಗಡಕ್ಕೆ ಸೇರಿದವಳಾಗಿದ್ದು, ಬಾಲಕಿಯನ್ನು ಪುಸಲಾಯಿಸಿ, ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಮನೆಯವರಿಗೆ ಹೇಳಿದರೆ ಜೀವ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ. ಸಂತ್ರಸ್ತೆ ಈಗ ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದು, ಮಗಳು ಗರ್ಭಿಣಿಯಾಗಿರುವ ಸಂಗತಿ ಮನೆಯವರಿಗೆ ತಿಳಿದೇ ಇರಲಿಲ್ಲ. ಬಾಲಕಿ ಹೊಟ್ಟೆನೋವಿನಿಂದ ಬಳಲುತ್ತಿದ್ದಾಗ ತಪಾಸಣೆ ನಡೆಸಿದಾಗ ವಿಷಯ ಬಹಿರಂಗವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿ ಮನೆಯ ಮೇಲೆ ದಾಳಿ: ಸುದ್ದಿ ಹರಡುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು ಆರೋಪಿಯ ಮನೆಗೆ ಜೆಸಿಬಿ ಮೂಲಕ ಹಾನಿ ಮಾಡಿದ್ದಾರೆ. ಇದರಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪೊಲೀಸ್ ತುಕಡಿಗಳು ಬೀಡು ಬಿಟ್ಟಿವೆ.ಕಾರಿಗೆ ಜೀಪ್ ಡಿಕ್ಕಿ: ಚಾಲಕನ ವಿರುದ್ಧ ಪ್ರಕರಣ

ಕಾರವಾರ: ನಿರ್ಲಕ್ಷ್ಯದಿಂದ ಜೀಪ್ಅನ್ನು ಹಿಂದಕ್ಕೆ ಚಲಾಯಿಸುವಾಗ ರಸ್ತೆಯ ಬದಿಯಲ್ಲಿ ನಿಲುಗಡೆ ಮಾಡಿದ್ದ ಕಾರಿಗೆ ಡಿಕ್ಕಿ ಹೊಡೆದು ಹಾನಿಗೊಳಿಸಿ, ಸ್ಥಳದಲ್ಲಿ ನಿಲ್ಲಿಸದೆ ತೆರಳಿದ ಘಟನೆ ನಗರದ ಕುರ್ಸುವಾಡಾದಲ್ಲಿ ನಡೆದಿದೆ.

ಶನಿವಾರ ಮಧ್ಯಾಹ್ನ 3.20ರ ಸುಮಾರಿಗೆ ಕುರ್ಸುವಾಡಾದ ಮಂಗೇಶ ಮಾಳಸಾ ಅಪಾರ್ಟ್‌ಮೆಂಟ್ ಹಿಂಭಾಗದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಜೀಪ್ ಚಾಲಕ ರವೀಂದ್ರ ಚಂದ್ರಹಾಸ ಸಿದ್ದಿ(32) ಜೀಪ್ಅನ್ನು ನಿರ್ಲಕ್ಷ್ಯದಿಂದ ರಿವರ್ಸ್ ಚಲಾಯಿಸುವಾಗ ರಸ್ತೆಯ ಬದಿಯಲ್ಲಿ ನಿಲುಗಡೆ ಮಾಡಿದ್ದ ಕಾರಿನ ಮುಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.

ಡಿಕ್ಕಿಯ ಪರಿಣಾಮ ಕಾರಿನ ಮುಂಭಾಗ ಜಖಂಗೊಂಡಿದ್ದು, ಜೀಪ್ ನಿಲ್ಲಿಸದೇ ಚಾಲಕ ಸ್ಥಳದಿಂದ ತೆರಳಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಾರಿನ ಮಾಲಕಿ ಅಪ್ಸಾನಾ ಅಲಿಯಾಸ್ ಸಾರಿಕಾ ಖಾನ್ ಅವರು ನೀಡಿದ ದೂರಿನ ಮೇರೆಗೆ ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟನ್ ಕಬ್ಬಿಗೆ ₹1,000 ಹೆಚ್ಚುವರಿ ದರ ನಿಗದಿಗೆ ಪಟ್ಟು
ಸಾಯಿಪ್ರಿಯಾ ಸಕ್ಕರೆ ಕಾರ್ಖಾನೆ ತಕ್ಷಣ ಆರಂಭಿಸಿ