ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ:ಶಾಲೆ ಮಾಲೀಕ ಸೇರಿ ಮೂವರ ಸೆರೆ

KannadaprabhaNewsNetwork |  
Published : Mar 01, 2026, 02:15 AM IST
shootout | Kannada Prabha

ಸಾರಾಂಶ

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಖಾಸಗಿ ಶಾಲೆಯ ಮಾಲೀಕ ಸೇರಿ ಮೂವರನ್ನು ದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕನ್ನಡ ಪ್ರಭ ವಾರ್ತೆ ಬೆಂಗಳೂರು

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಖಾಸಗಿ ಶಾಲೆಯ ಮಾಲೀಕ ಸೇರಿ ಮೂವರನ್ನು ದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

8 ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಸತಿ ಶಾಲೆಯ ಮುಖ್ಯಸ್ಥ ಧನಂಜಯ್‌, ಕೃತ್ಯಕ್ಕೆ ನೆರವಾದ ಆರೋಪದ ಮೇಲೆ ಮಹಿಳಾ ವಾರ್ಡನ್‌ ಮತ್ತು ಕೃತ್ಯದ ಬಗ್ಗೆ ತಿಳಿದಿದ್ದರೂ ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಧನಂಜಯ್‌ ಪತ್ನಿಯನ್ನು ಬಂಧಿಸಲಾಗಿದೆ. ಬಾಲಕಿಯ ಪಾಲಕರು ನೀಡಿದ ದೂರಿನನ್ವಯ ಮೂವರು ಆರೋಪಿಗಳನ್ನು ಬಂಧಿಸಿ ಪೊಲೀಸ್‌ ಕಸ್ಟಡಿಗೆ ಪಡೆದು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಸತಿ ಶಾಲೆಯಲ್ಲಿ 600 ವಿದ್ಯಾರ್ಥಿಗಳು 1 ರಿಂದ 10 ನೇ ತರಗತಿವರೆಗೂ ವಿದ್ಯಾಭ್ಯಾಸ ನಡೆಸುತ್ತಿದ್ದರು. ಇದರಲ್ಲಿ 150 ಮಂದಿ ವಿದ್ಯಾರ್ಥಿನಿಯರು ಇದ್ದಾರೆ. ಆರೋಪಿ ಧನಂಜಯ್‌ ಕುಡಿತ ಮತ್ತಿನಲ್ಲಿ ಕಳೆದ 8 ದಿನಗಳಿಂದ ರಾತ್ರಿ ವೇಳೆ ವಾರ್ಡನ್‌ ಕಚೇರಿಯಲ್ಲಿ ಬಾಲಕಿಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ವಾರ್ಡನ್‌ ಈ ಕೃತ್ಯಕ್ಕೆ ಸಾಥ್‌ ನೀಡಿದ್ದರು. ಈ ಕೃತ್ಯದ ಬಗ್ಗೆ ಮಾಹಿತಿ ಇದ್ದರು ನಿರ್ಲಕ್ಷ್ಯ ವಹಿಸಿದ ಆರೋಪದಡಿ ಧನಂಜಯ್‌ ಪತ್ನಿಯನ್ನು ಪೋಸ್ಕೋ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬ್ಯಾಲೆಟ್‌ ಪೇಪರ್ ಬಳಸಿ ಚುನಾವಣೆಗೆ ಗೌರ್‍ನರ್‌ ಅಸ್ತು
ಮೋದಿಗೆ ಸಿದ್ದು 18 ಬೇಡಿಕೆಗಳ ಪಟ್ಟಿ