ಲೈಂಗಿಕ‌ ದೌರ್ಜನ್ಯ: ಪೊಲೀಸರು ಪ್ರಕರಣ ಗಂಭೀರವಾಗಿ ಪರಿಗಣಿಸಲಿ: ರವಿಂದ ಬೆಲ್ಲದ

KannadaprabhaNewsNetwork |  
Published : Apr 06, 2026, 02:00 AM IST
ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಯುವತಿ ಮನೆಗೆ ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಭೇಟಿ ನೀಡಿದರು. | Kannada Prabha

ಸಾರಾಂಶ

ಪೊಲೀಸರು ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆಗ್ರಹಿಸಿದ್ದಾರೆ.

ಹುಬ್ಬಳ್ಳಿ: ಹಿಂದೂ ಯುವತಿಗೆ ನಶೆ ಬರುವ ನೀರು ಕೊಟ್ಟು ಲೈಂಗಿಕ ದೌರ್ಜನ್ಯ ನಡೆಸಿರುವ ಸಮೀರ್ ಮುಲ್ಲಾ ಹಾಗೂ ಅವರ ಕುಟುಂಬದ್ದು ಹಿಂದೂ ಹುಡುಗಿಯರನ್ನು ಲವ್ ಜಿಹಾದ್ ಮಾಡುವ ಹುನ್ನಾರ ಎಂಬುದು ಮೇಲ್ನೋಟಕ್ಕೆ ತಿಳಿಯುತ್ತದೆ. ಹೀಗಾಗಿ, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆಗ್ರಹಿಸಿದರು.

ಭಾನುವಾರ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಯುವತಿ ಮನೆಗೆ ಭೇಟಿ ನೀಡಿ, ಪಾಲಕರಿಂದ ಮಾಹಿತಿ ಪಡೆದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಈ ಯುವಕ ಕೇವಲ ಇದೊಂದೆ ಹುಡುಗಿಯಲ್ಲದೆ, ಬೇರೆ ಬೇರೆ ಹುಡುಗಿಯರಿಗೂ ಇದೇ ತರಹ ಮಾಡಿದ್ದಾನೆ ಎಂಬುದು ತಿಳಿದು ಬಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಮುಸ್ಲಿಂ ಓಲೈಕೆಯಿಂದ ಇಂತಹ ಮೊಂಡು ಧೈರ್ಯ ಬಂದಿದೆ. ನಾವು ಏನು ಮಾಡಿದರೂ ನಡೆಯುತ್ತದೆ ಎಂಬ ಭಾವನೆ ಯುವಕರಲ್ಲಿ ಬಂದಿದೆ. ಹೀಗಾಗಿ, ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು. ಬೆದರಿಕೆ ಹಾಕಿದವರನ್ನು ಕೂಡಲೇ ಬಂಧಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡುತ್ತೇವೆ ಎಂದರು.

ಈ‌ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ವೆಂಕಟೇಶ ಕಾಟವೆ, ರಂಗಾ ಕಠಾರೆ, ರಾಜು ಕೋರ್ಯಾಣಮಠ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ: ಆರೋಪಿ ಬಂಧನ
ನಮ್ಮ ಅಪರಾಧಗಳನ್ನು ಕ್ಷಮಿಸುವವನು ಭಗವಂತ: ಮ.ಶಾ.ಸಂ.ಶ್ರೀ ಬ್ರಹ್ಮಣ್ಯಾಚಾರ್ಯರು