ಮಹಿಳೆಯರ ಮೇಲಿನ ದೌರ್ಜನ್ಯ ನಿಯಂತ್ರಣ ಕಾಯ್ದೆ । ಜಿಲ್ಲಾ ಮಟ್ಟದ ಇಲಾಖಾ ಅಧಿಕಾರಿಗಳಿಗೆ ಮಾಹಿತಿ ಕಾರ್ಯಗಾರ: ಮೀನಾ ನಾಗರಾಜ್
ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ನಿಯಂತ್ರಣ ಕಾಯ್ದೆ- 2013 ಅನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳಲ್ಲಿ ಆಂತರಿಕ ದೂರು ಸಮಿತಿಯನ್ನು ಕಡ್ಡಾಯವಾಗಿ ರಚಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ನಿಯಂತ್ರಣ ಕಾಯ್ದೆ- 2013ನ್ನು ಕುರಿತು ಜಿಲ್ಲಾ ಮಟ್ಟದ ಇಲಾಖಾ ಅಧಿಕಾರಿಗಳಿಗೆ ಸೋಮವಾರ ಏರ್ಪಡಿಸಿದ್ದ ಮಾಹಿತಿ ಕಾರ್ಯಾ ಗಾರ ಉದ್ಘಾಟಿಸಿ ಮಾತನಾಡಿದರು. ಸುಪ್ರೀಂ ಕೋರ್ಟ್ ಎಲ್ಲಾ ಸರ್ಕಾರಿ ಇಲಾಖೆ ಹಾಗೂ ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿ ರಚಿಸುವಂತೆ ನಿರ್ದೇಶನ ನೀಡಿದೆ. ಅದರಂತೆ ಕೆಲಸದ ಸ್ಥಳಗಳಲ್ಲಿ ಮಹಿಳೆ ನೆಮ್ಮದಿಯಿಂದ ಕಾರ್ಯನಿರ್ವಹಿ ಸುವಂತಾಗಲು 10ಕ್ಕಿಂತ ಹೆಚ್ಚು ಮಹಿಳಾ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದರೆ ಅಲ್ಲಿ ಆಂತರಿಕ ದೂರು ನಿವಾರಣಾ ಸಮಿತಿ ರಚಿಸಲು ಈಗಾಗಲೇ ಎಲ್ಲಾ ಇಲಾಖೆಗಳಿಗೂ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.ಆಂತರಿಕ ದೂರು ಸಮಿತಿ ರಚಿಸದೇ ಇರುವ ಇಲಾಖೆಗಳು ಕೂಡಲೇ ಸಮಿತಿ ರಚಿಸಲು ಕ್ರಮವಹಿಸುವಂತೆ ತಿಳಿಸಿದ ಅವರು, ಸಮಿತಿ ಅಧ್ಯಕ್ಷರು ಮತ್ತು ಸದಸ್ಯರ ವಿವರಗಳನ್ನು ಎಸ್‌ಎಚ್‌ಇ ಬಾಕ್ಸ್‌ನಲ್ಲಿ ಅಪ್ ಡೇಟ್ ಮಾಡಬೇಕು. ದೂರು ಸಮಿತಿ ರಚಿಸದ ಇಲಾಖೆಗಳ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಪೋಟೋ ಫೈಲ್ ನೇಮ್ 20 ಕೆಸಿಕೆಎಂ 5ಚಿಕ್ಕಮಗಳೂರಿನ ಜಿಪಂ ಸಭಾಂಗಣದಲ್ಲಿ ಸೋಮವಾರ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯ್ದೆ ಕುರಿತು ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು. ಎಚ್.ಎಸ್. ಕೀರ್ತನಾ, ಮಮತಾ, ನ್ಯಾ. ಹನುಮಂತಪ್ಪ ಇದ್ದರು.