ಘಟಿಕೋತ್ಸವ ಪ್ರಮಾಣ ಪತ್ರ, ನಕಲಿ ದಾಖಲೆ ಜಾಲ ಪತ್ತೆಹಚ್ಚಲು ಎಸ್‌ಎಫ್‌ಐ ಒತ್ತಾಯ

KannadaprabhaNewsNetwork |  
Published : Jun 04, 2025, 12:46 AM IST
3ಎಚ್‌ಪಿಟಿ2- ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ (ವಿಎಸ್‌ಕೆ) ವಿಶ್ವವಿದ್ಯಾಲಯದ ಘಟಿಕೋತ್ಸವ ಪ್ರಮಾಣ ಪತ್ರ ಮತ್ತು ಇತರೆ ನಕಲಿ ದಾಖಲೆಯನ್ನು ಸೃಷ್ಟಿಸಿ ವಿಶ್ವವಿದ್ಯಾಲಯಕ್ಕೆ ಕೋಟ್ಯಂತರ ರು. ನಷ್ಟ ಸಂಭವಿಸುವಂತೆ ಮಾಡಿದ ಕ್ರಿಮಿನಲ್ ಗಳ ಜಾಲವನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಉನ್ನತ ಶಿಕ್ಷಣ ಸಚಿವ ಡಾ.ಎಂ. ಸಿ. ಸುಧಾಕರ್ ಅವರಿಗೆ ಎಸ್‌ಎಫ್ ಐನ  ವಿಜಯನಗರ ಜಿಲ್ಲಾ ಸಮಿತಿ ಮನವಿ ಪತ್ರವನ್ನು ಸಲ್ಲಿಸಿ ಒತ್ತಾಯಿಸಿದೆ. | Kannada Prabha

ಸಾರಾಂಶ

ನಕಲಿ ಜಾಲ ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಗೆ ಎಸ್‌ಎಫ್ಐನ ವಿಜಯನಗರ ಜಿಲ್ಲಾ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಹೊಸಪೇಟೆ

ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ (ವಿಎಸ್‌ಕೆ) ವಿಶ್ವವಿದ್ಯಾಲಯದ ಘಟಿಕೋತ್ಸವ ಪ್ರಮಾಣ ಪತ್ರ ಮತ್ತು ಇತರೆ ನಕಲಿ ದಾಖಲೆಯನ್ನು ಸೃಷ್ಟಿಸಿ ವಿಶ್ವವಿದ್ಯಾಲಯಕ್ಕೆ ಕೋಟ್ಯಂತರ ರು. ನಷ್ಟ ಸಂಭವಿಸುವಂತೆ ಮಾಡಿದ ಕ್ರಿಮಿನಲ್ ಗಳ ಜಾಲವನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಗೆ ಎಸ್‌ಎಫ್ಐನ ವಿಜಯನಗರ ಜಿಲ್ಲಾ ಸಮಿತಿಯಿಂದ ಮನವಿ ಸಲ್ಲಿಸಲಾಯಿತು. ಎಸ್‌ಎಫ್‌ಐನ ಜಿಲ್ಲಾ ಕಾರ್ಯದರ್ಶಿ ಶಿವಾರೆಡ್ಡಿ ಮಾತನಾಡಿ, ಶ್ರೀಕೃಷ್ಣದೇವರಾಯ ವಿಜಯನಗರ ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವದ ಪ್ರಮಾಣ ಪತ್ರವು ನಕಲಿ ಸಹಿಯಿಂದ ಒಟ್ಟು 3,330 ನಕಲಿ ದಾಖಲೆನ್ನು ಸೃಷ್ಟಿಸಿ ವಿದ್ಯಾರ್ಥಿಗಳಿಂದ ಹಣವನ್ನು ವಸೂಲಿ ಮಾಡಿ ನಕಲಿ ಘಟಿಕೋತ್ಸವ ಪ್ರಮಾಣ ಪತ್ರವನ್ನು ವಿದ್ಯಾರ್ಥಿಗಳಿಗೆ ಹಂಚಲಾಗಿದೆ. ಒಂದೊಂದು ಘಟಿಕೋತ್ಸವ ಪ್ರಮಾಣ ಪತ್ರಕ್ಕೆ ಕನಿಷ್ಠ 8 ಸಾವಿರಕ್ಕೂ ಹೆಚ್ಚಿನ ಹಣವನ್ನು ವಿದ್ಯಾರ್ಥಿಗಳಿಂದ ಸಂಗ್ರಹಣೆ ಮಾಡಿದ್ದಾರೆ. ಇದೇ ವರ್ಷ ಫೆಬ್ರವರಿಯಲ್ಲಿ ಘಟಿಕೋತ್ಸವ ಪ್ರಮಾಣ ಪತ್ರ ಹಗರಣವು ಬೆಳಕಿಗೆ ಬಂದಿದ್ದು ಆದರೆ ಇಲ್ಲಿವರೆಗೂ ಯಾವುದೇ ಕಾನೂನು ಕ್ರಮ ಜರುಗಿಸದೇ ಇರುವುದು ಖಂಡನೀಯವಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಕ್ರಿಮಿನಲ್‌ಗಳು ಮೋಸ ಎಸಗಿದ್ದಾರೆ. ಇದರಿಂದಾಗಿ ವಿಶ್ವವಿದ್ಯಾಲಯದ ಬೊಕ್ಕಸಕ್ಕೂ ಕೋಟಿಗಟ್ಟಲೆ ಹಣ ನಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂತಹ ಪ್ರಕರಣವನ್ನು ಕೂಡಲೇ ಪತ್ತೆ ಹಚ್ಚಿ ಕಲುಷಿತಗೊಂಡ ಶಿಕ್ಷಣ ವ್ಯವಸ್ಥೆಯ ಆಡಳಿತ ಶುದ್ಧಗೊಳಿಸಬೇಕು. ವಿದ್ಯಾರ್ಥಿಗಳಿಗೆ ಘಟಿಕೋತ್ಸವ ಪ್ರಮಾಣ ಪತ್ರ ಉಚಿತವಾಗಿ ಕೊಡಬೇಕು ಎಂದು ಒತ್ತಾಯಿಸಿದರು.

ಎಸ್‌ಎಫ್‌ಐನ ರಾಜ್ಯ ಸಮಿತಿ ಸದಸ್ಯ ವೀರೇಶ್ ರಾಠೋಡ್, ಜಿಲ್ಲಾ ಮುಖಂಡರಾದ ಮಹಾಲಿಂಗ, ವೆಂಕಟೇಶ್ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ